ಬಿಟ್ ಕಾಯಿನ್ ಕೇಸ್ ನಲ್ಲಿ ಬೊಮ್ಮಾಯಿ, ಕಟೀಲ್ ಪಾತ್ರದ ಬಗ್ಗೆ ಕಾಂಗ್ರೆಸ್ ದಾಖಲೆ ಸಂಗ್ರಹ
Team Udayavani, Nov 13, 2021, 3:58 PM IST
ಮೈಸೂರು: ಬಿಟ್ ಕಾಯಿನ್ ಅಕ್ರಮ ದಂಧೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರ ಪಾತ್ರ ಇರುವ ಬಗ್ಗೆ ಕಾಂಗ್ರೆಸ್ ಪಕ್ಷ ದಾಖಲೆಗಳ ಸಂಗ್ರಹದಲ್ಲಿ ತೊಡಗಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರತಿಯೊಂದಕ್ಕೂ ಕಾಂಗ್ರೆಸ್ ವಿರುದ್ಧ ಆರೋಪ ಮಾಡುವುದನ್ನು ಬಿಜೆಪಿ ಬಿಡಬೇಕು. ಬಿಟ್ ಕಾಯಿನ್ ದಂಧೆಯಲ್ಲಿ ಯಾರಿದ್ದಾರೆಂದು ಬಹಿರಂಗಪಡಿಸಬೇಕು. ಈ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ಏಕೆ ಬಹಿರಂಗ ಹೇಳಿಕೆ ನೀಡಿದರೆಂದು ಸ್ಪಷ್ಟ ಮಾಡಬೇಕು ಎಂದರು.
ಇದನ್ನೂ ಓದಿ:ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ: ಸಹೋದರನಿಗೆ ಪರಿಷತ್ ಟಿಕೆಟ್ ಗೆ ಲಾಬಿ
ತನಿಖೆಯನ್ನು ಇಡಿ -ಐಟಿಯವರಿಗೆ ಯಾವಾಗ ವಹಿಸಿದ್ದೀರಿ. 15 ರಾಜ್ಯಗಳ ಬ್ಯಾಂಕ್ ಖಾತೆದಾರರ ಹಣ ಕದ್ದಿರುವ ಬಗ್ಗೆ ಮಾಹಿತಿ ನೀಡಬೇಕು. ಪ್ರಸಿದ್ದ ಶೆಟ್ಟಿಗೂ ಬಿಜೆಪಿ ನಾಯಕರಿಗೆ ಇರುವ ಸಂಬಂಧವೇನೆಂಬುದನ್ನು ತಿಳಿಸಬೇಕು. ಅಕ್ರಮ ದಂಧೆಯಲ್ಲಿ ಪೊಲೀಸರು ಭಾಗಿಯಾಗಿರುವ ಆರೋಪ ಕೇಳಿ ಬಂದಿದೆ. ಹಾಗಾಗಿ ಸುಪ್ರೀಂ ಕೋರ್ಟ್ ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.