ರೈತರ ವಿರೋಧದ ಮಧ್ಯೆಯೂ ಬೈಪಾಸ್‌ ರಸ್ತೆ ಕಾಮಗಾರಿ ಶುರು!

ಜೆಸಿಬಿ ಮುಂದೆ ಬಂದು ಬೆಳೆ ಹಾನಿ ಮಾಡದಂತೆ ಎಚ್ಚರಿಕೆ ನೀಡಿದರು.

Team Udayavani, Nov 13, 2021, 5:50 PM IST

ರೈತರ ವಿರೋಧದ ಮಧ್ಯೆಯೂ ಬೈಪಾಸ್‌ ರಸ್ತೆ ಕಾಮಗಾರಿ ಶುರು!

ಬೆಳಗಾವಿ: ರೈತರ ವಿರೋಧದ ಮಧ್ಯೆಯೂ ತಾಲೂಕಿನ ಹಲಗಾ-ಮಚ್ಛೆ ಬೈಪಾಸ್‌ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಜೆಸಿಬಿ, ಹಿಟಾಚಿ, ಟಿಪ್ಪರ್‌ ವಾಹನಗಳ ಮೂಲಕ ಜಮೀನು ಸಮತಟ್ಟು ಮಾಡಿ ಕೆಲಸ ನಡೆಸಲಾಗುತ್ತಿದೆ. ಬೈಪಾಸ್‌ ರಸ್ತೆಗೆ ಅಗತ್ಯ ಇರುವ ಜಮೀನು ಸ್ವಾಧೀನ ಪಡಿಸಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾ ಧಿಕಾರದವರು ಕಾಮಗಾರಿ ನಡೆಸಿದ್ದಾರೆ. ಈ ಪ್ರದೇಶದಲ್ಲಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಟಿಪ್ಪರ್‌ಗಳಲ್ಲಿ ಮಣ್ಣು ಸಾಗಿಸಿ ಜಮೀನು ಸಮತಟ್ಟು ಮಾಡಿಕೊಳ್ಳುವ ಕಾರ್ಯ ಮುಂದುವರಿದಿದೆ. ಇನ್ನೊಂದೆಡೆ ಭೂಸ್ವಾ ಧೀನ ಪ್ರಕ್ರಿಯೆ ವಿರೋಧಿಸಿ ಕೆಲವು ರೈತರು ಕ್ಯಾರೆಟ್‌ ಬೆಳೆ ಇರುವ ಜಮೀನಿನಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ನಮ್ಮ ಫಲವತ್ತಾದ ಜಮೀನು ಬಿಟ್ಟು ಕೊಡುವುದಿಲ್ಲ.

ಈ ಜಮೀನು ಕಸಿದುಕೊಳ್ಳಲು ಜಿಲ್ಲಾಡಳಿತ ಮುಂದಾಗಬಾರದು. ಸಾವಿರಾರು ಖರ್ಚು ಮಾಡಿ ಕ್ಯಾರೆಟ್‌ ಬೆಳೆಯಲಾಗಿದೆ. ನಮ್ಮ ಜಮೀನು ನಮಗೆ ಬಿಟ್ಟು ಕೊಡಬೇಕು. ಬದುಕಿಗೆ ಆಸರೆ ಆಗಿರುವ ಜಮೀನಿನಲ್ಲಿ ಬೆಳೆ ಬೆಳೆದು ಜೀವನ ನಡೆಸುತ್ತೇವೆ ಎಂದು ತಮ್ಮ ಭಾಗದಲ್ಲಿ ರಸ್ತೆ ನಿರ್ಮಿಸದಂತೆ ಪಟ್ಟು ಹಿಡಿದು ಕುಳಿತಿದ್ದಾರೆ. ರೈತರು ಕಬ್ಬು, ಭತ್ತ, ಕ್ಯಾರೆಟ್‌ ಸೇರಿದಂತೆ ಇತರೆ ದಾಖಲೆಗಳನ್ನು ಪ್ರದರ್ಶಿಸುತ್ತ ಪ್ರತಿಭಟಿಸಿದರು.

ರೈತ ರವಿ ಸೂರ್ಯವಂಶಿ ಕಾಮಗಾರಿಗೆ ವಿರೋಧಿಸಿದರು. ಜೆಸಿಬಿ ಮುಂದೆ ಬಂದು ಬೆಳೆ ಹಾನಿ ಮಾಡದಂತೆ ಎಚ್ಚರಿಕೆ ನೀಡಿದರು. ಬೆಳೆ ಹಾನಿ ಮಾಡುವುದಿಲ್ಲ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಈಗ ಮತ್ತೆ ಏಕೆ ಹಾನಿ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಜಿಲ್ಲಾಧಿಕಾರಿ ಭೇಟಿ: ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾ ಧಿಕಾರಿ ಎಂ.ಜಿ. ಹಿರೇಮಠ ಭೇಟಿ ನೀಡಿದರು. ಈ ವೇಳೆ ರೈತ ರವಿ ಸೂರ್ಯವಂಶಿ ಪ್ರತಿಭಟನೆ ನಡೆಸಿ, ತಮ್ಮ ಗದ್ದೆಯಲ್ಲಿ ಬಾವಿ ಇದೆ. ಅದೂ ಹೋಗಲಿದೆ. ನಮ್ಮ ಜಮೀನಿಗೆ ಪರ್ಯಾಯವಾಗಿ ನೀರಿನ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ಆಗ ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತೇವೆ. ಕಾಮಗಾರಿ ನಡೆಸಲು ಸಹಕರಿಸಬೇಕು. ಕಾಮಗಾರಿಗೆ ಯಾರೂ ಅಡ್ಡಿಪಡಿಸಬಾರದು ಎಂದು ಮನವಿ ಮಾಡಿದರು.ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಡಿಸಿಪಿ ಡಾ. ವಿಕ್ರಂ ಅಮಟೆ ಇದ್ದರು.

ನ್ಯಾಯಾಂಗ ನಿಂದನೆ ಕೇಸ್‌ ಹಾಕುತ್ತೇವೆ
ಬೆಳಗಾವಿ ಬಾಸಮತಿ ಭತ್ತ ಬೆಳೆಯುತ್ತಿದ್ದ ಜಮೀನಿನಲ್ಲಿ ರಸ್ತೆ ಕಾಮಗಾರಿ ಆರಂಭಿಸಿದ್ದನ್ನು ರೈತ ಮುಖಂಡ ರಾಜು ಮರವೆ ವಿರೋಧಿಸಿದರು. ಫಲವತ್ತಾದ ಭೂಮಿಯಲ್ಲಿ ರಸ್ತೆ ಕಾಮಗಾರಿ ಮಾಡುತ್ತಿರುವುದು ಸರಿಯಲ್ಲ ಎಂದು ಭತ್ತ ಪ್ರದರ್ಶನ ಮಾಡಿ ಅಳಲು ತೋಡಿಕೊಂಡರು. ಪೊಲೀಸರನ್ನು ಕರೆದುಕೊಂಡು ಬಂದು ಕಾಮಗಾರಿ ನಡೆಸಲಾಗುತ್ತಿದೆ. ಕಾಮಗಾರಿ ಆರಂಭದ ಕುರಿತು ನ್ಯಾಯಾಂಗ ನಿಂದನೆ ಕೇಸ್‌ ಹಾಕಿ ಕೆಲಸ ನಿಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರೈತರ ಜತೆ ಚರ್ಚಿಸಿ ಶೀಘ್ರವೇ ಸಮಸ್ಯೆ ಬಗೆಹರಿಸಿ: ಸತೀಶ ಗೋಕಾಕ: ಹಲಗಾ-ಮಚ್ಛೆ ಬೈಪಾಸ್‌ ರಸ್ತೆ ಕಾಮಗಾರಿ ನಡೆಸಲು ಉಂಟಾಗಿರುವ
ಸಮಸ್ಯೆಯನ್ನು ಜಿಲ್ಲಾ ಧಿಕಾರಿಗಳು ರೈತರೊಂದಿಗೆ ಚರ್ಚಿಸಿ ಬಗೆಹರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಹಿಲ್‌ ಗಾರ್ಡನ್‌ ಗೃಹಕಚೇರಿಯಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರೈತರ ಪ್ರತಿಭಟನೆಯ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ, ಜಿಲ್ಲಾಧಿಕಾರಿಗಳು ರೈತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಭೆ ನಡೆಸಿ, ಸಂಧಾನದ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದರು.

ಟಾಪ್ ನ್ಯೂಸ್

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

1-belagavi

Belagavi: ಆಟೋ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ

ಅಕ್ರಮ ಆಸ್ತಿ ಸಂಪಾದನೆ ಆರೋಪ: ಬೆಳಗಾವಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ದಾಳಿ

Belagavi: ಅಕ್ರಮ ಆಸ್ತಿ ಸಂಪಾದನೆ ಆರೋಪ… ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.