ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಹನುಮಂತನ ಬಾಲದಂತೆ ಬೆಳೆಯುತ್ತಿದೆ: ಪಟ್ಟಿ ಕೊಟ್ಟ ಜೆಡಿಎಸ್
Team Udayavani, Nov 14, 2021, 1:10 PM IST
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ಪಕ್ಷಗಳ ಆರೋಪ- ಪ್ರತ್ಯಾರೋಪಗಳು ಆರಂಭವಾಗಿದೆ. ಕುಟುಂಬ ರಾಜಕೀಯದ ಟೀಕೆ ಮಾಡಿದ ಬಿಜೆಪಿ ವಿರುದ್ಧ ಜೆಡಿಎಸ್ ಅದೇ ವಿಚಾರವಾಗಿ ಟೀಕೆ ಮಾಡಿದ್ದು, ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ಪಟ್ಟಿಯನ್ನು ಟ್ವೀಟ್ ಮಾಡಿದೆ.
ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ. ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ ಸರಿ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ ಎಂದು ಬಿಜೆಪಿ ಟೀಕಿಸಿದೆ.
1 ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.
2 ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ
3 ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.
4 ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.
5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ -ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.
6 ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ?
7 ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.
ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ ಎಂದು ಜೆಡಿಎಸ್ ಟ್ವೀಟ್ ಮೂಲಕ ಟೀಕೆ ಮಾಡಿದೆ.
ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ. (1/8)
— Janata Dal Secular (@JanataDal_S) November 14, 2021
ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.