ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Nov 15, 2021, 7:50 AM IST
ಮೇಷ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫಲತೆ. ಉತ್ತಮ ಧನ ಸಂಗ್ರಹ. ಬಂಧುಮಿತ್ರರ ಸಹಾಯ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು ಸಂಭವ. ದಾಂಪತ್ಯ ಸುಖ ತೃಪ್ತಿದಾಯಕ.
ವೃಷಭ: ದೀರ್ಘ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನ ವ್ಯಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ.
ಮಿಥುನ: ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಲಭಿಸೀತು. ದೂರದ ವ್ಯವಹಾರದಿಂದ ಉತ್ತಮ ಧನ ಸಂಪತ್ತು ವೃದ್ಧಿ. ಆರೋಗ್ಯ ಸಾಮಾನ್ಯ.
ಕರ್ಕ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ದಾಂಪತ್ಯದಲ್ಲಿ ಪರಸ್ಪರ ಸಹಕಾರ.
ಸಿಂಹ: ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಜನಪದರೊಂದಿಗೆ ತಾಳ್ಮೆ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಅನ್ಯಥಾ ಚರ್ಚೆಗೆ ಆಸ್ಪದ ಬೇಡ. ಧನಾರ್ಜನೆಗೆ ಕೊರತೆ ಕಾಣದು. ಸಾಂಸಾರಿಕ ಸುಖ ಮಧ್ಯಮ.
ಕನ್ಯಾ: ದೀರ್ಘ ಪ್ರಯಾಣ ಸಂಭವ. ದೇಹಾಯಾಸ ತೋರೀತು. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಮಕ್ಕಳಿಂದಲೂ, ಗುರುಹಿರಿಯರಿಂದಲೂ ಸುಖ ಸಂತೋಷ ವೃದ್ಧಿ.ಆಸ್ತಿ ವಿಚಾರದಲ್ಲಿ ಹೆಚ್ಚಿದ ಬದಲಾವಣೆ.
ತುಲಾ: ಧಾರ್ಮಿಕ ಕೆಲಸ ಕಾರ್ಯಗಳಿಗೆ ಪ್ರಯಾಣ. ಆರೋಗ್ಯ ವೃದ್ಧಿ. ಗೌರವದ ಧನ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿ ವಿದ್ಯಾರ್ಥಿಗಳಿಗೆ ಹೆಚ್ಚಿದ ಸಂಭ್ರಮ. ಗುರುಹಿರಿಯರಿಂದ ಯೋಗ್ಯ ಮಾರ್ಗದರ್ಶನ.
ವೃಶ್ಚಿಕ: ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಆರ್ಥಿಕ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ಮಧ್ಯಮ. ಗಣ್ಯರ ಭೇಟಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.
ಧನು: ಆರೋಗ್ಯದಲ್ಲಿ ಸಮಾಧಾನ. ಚಿಕ್ಕ ಪ್ರಯಾಣ ಸಂಭವ. ಮಾನಸಿಕವಾಗಿ ಸಂಭ್ರಮಿಸುವ ಕಾಲ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಉದ್ಯೋಗ ವ್ಯವಹಾರಸ್ಥರಿಗೆ ಅಧಿಕ ಜವಾಬ್ದಾರಿ, ಉತ್ತಮ ಬದಲಾವಣೆ.
ಮಕರ: ಪರವೂರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಆರೋಗ್ಯ ವೃದ್ಧಿ. ಪಾಲುದಾರಿಕಾ ಕ್ಷೇತ್ರದವರಿಗೆ ಪರಸ್ಪರ ಸಹಕಾರದಿಂದ ಉನ್ನತಿ ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಆರೋಗ್ಯ ಗಮನಿಸಿ.
ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್ ಚತುರತೆ. ಮನೋರಂಜನೆಯಿಂದ ಕೂಡಿದ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ. ವ್ಯವಹಾರದಲ್ಲಿ ಶುಭ ಫಲ.
ಮೀನ: ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃ ಸಂತೋಷ. ಜನಮನ್ನಣೆ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಸಾಂಸಾರಿಕ ಸುಖ ತೃಪ್ತಿದಾಯಕ. ಗರುಹಿರಿಯರ ಆರೋಗ್ಯ ಸುದೃಢ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.