ಮೂಲ ಆಶಯ ಮರೆತ ಕನ್ನಡ ವಿವಿ?


Team Udayavani, Nov 15, 2021, 1:55 PM IST

ಮೂಲ ಆಶಯ ಮರೆತ ಕನ್ನಡ ವಿವಿ?

ಹೊಸಪೇಟೆ: ಕನ್ನಡ ಶ್ರೇಯೋಭಿವೃದ್ಧಿಗಾಗಿ ಜನ್ಮ ತಳೆದಿರುವ ಏಕೈಕ ಹಂಪಿ ಕನ್ನಡ ವಿಶ್ವವಿದ್ಯಾಲಯ ತನ್ನ ಮೂಲ ಆಶಯವನ್ನು ಮರೆತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕನ್ನಡ ವಿವಿಯ ಈಗಿನ ಕಾರ್ಯವೈಖರಿ ಬಗ್ಗೆ ಹೊರಗಿನವರು ಹೇಳುವುದಕ್ಕಿಂತ ಸ್ವತಃ ಕನ್ನಡ ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘವೇ ಈ ಕುರಿತು ಚಕಾರವೆತ್ತಿದೆ.

ನ.11ರಂದು ಸಂಘದ ಸರ್ವ ಸದಸ್ಯರಿಗೆ ಮೂರು ಪುಟದ ಪತ್ರವನ್ನು ಬರೆದಿರುವ ಸಂಘದ ಅಧ್ಯಕ್ಷ ಡಾ| ವಾಸುದೇವ ಬಡಿಗೇರ ಮತ್ತು ಕಾರ್ಯದರ್ಶಿ ಡಾ| ವಿಠಲರಾವ್‌ ಗಾಯಕ್ವಾಡ ಅವರು, ವಿವಿಯಲ್ಲಿನ ಬೆಳವಣಿಗೆ ಕುರಿತು ಪತ್ರದಲ್ಲಿ ಉಲ್ಲೇಖೀಸಿದ್ದಾರೆ. ನ.16ರಂದು ಬೆಳಗ್ಗೆ 11 ಗಂಟೆಗೆ ವಿವಿಯ ಭುವನ ವಿಜಯ ಕಟ್ಟಡದಲ್ಲಿ ಸರ್ವ ಸದಸ್ಯರ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಈ ಪತ್ರದಲ್ಲಿ ಕೆಲ ಗಂಭೀರ ವಿಚಾರವನ್ನೂ ಎತ್ತಲಾಗಿದೆ. ಹಾಗಾಗಿ ಕನ್ನಡ ವಿವಿ ಸ್ಥಿತಿ ಸದ್ಯ ಸರಿಯಾಗಿಲ್ಲ ಎಂಬುದು ಈ ಪತ್ರದಿಂದಲೇ ತಿಳಿಯುತ್ತದೆ. ಅಖಂಡ ಕರ್ನಾಟಕದ ಪರಿಕಲ್ಪನೆಯಲ್ಲಿ ಕನ್ನಡ ವಿಶ್ವ ವಿದ್ಯಾಲಯವು ವಿಶ್ವಕೋಶ, ದೇವಾಲಯ ಕೋಶ, ಮಹಾಕಾವ್ಯ, ಚರಿತ್ರೆ, ಶಾಸನ ಸಂಪುಟಗಳಂಥ ಅನೇಕ ಯೋಜನೆಗಳನ್ನು ನಿರ್ವಹಿಸಿ ಪ್ರಕಟಿಸುತ್ತ ಬಂದಿದೆ.

ಇದುವರೆಗೂ ಬೆಳಕು ಕಾಣದ ಅಂಶಗಳನ್ನು, ನಿರ್ಣಯಕ್ಕೆ ಬರಲು ಸಾಧ್ಯವಾಗದ ಅನೇಕ ಸಮಸ್ಯೆಗಳನ್ನು ಸಂಶೋಧನೆಯ ಮೂಲಕ ಪರಿಹರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಸಮಾಜ ಮುಖಿಯಾದಂತಹ ಅನೇಕ ಯೋಜನೆಗಳನ್ನು, ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ನಿರ್ಲಕ್ಷ್ಯಕ್ಕೊಳಗಾದ ಸಮುದಾಯಗಳ ಸಂಸ್ಕೃತಿ ಮತ್ತು ಪ್ರತಿಭಾವಂತ ವ್ಯಕ್ತಿಗಳನ್ನು ನಾಡಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತ ಬಂದಿದೆ. ಮೇಲಿನ ಅಂಶಗಳನ್ನು ಗಮನಿಸಿದಾಗ ಈಗ ಅವೆಲ್ಲವುಗಳು ಮರೆಯಾಗಿ ಸಾಧಾರಣ ಯೋಜನೆಯನ್ನೂ ನಿರ್ವಹಿಸುವಲ್ಲಿ ಪರದಾಡುವ ಪರಿಸ್ಥಿತಿಗೆ ತಲುಪಿದೆ. ನಾಡಿನ ಓದುಗರು, ವಿದ್ಯಾರ್ಥಿ-ಸಂಶೋಧಕರ ಆಸಕ್ತಿಯನ್ನು ಹೆಚ್ಚಿಸಿದ್ದ ಪ್ರಕಟಣೆಗಳೂ ನಿಂತು ಹೋಗಿವೆ. ನ್ಯಾಕ್‌ ಮಾನ್ಯತೆಯಲ್ಲಿ ”ಎ” ಶ್ರೇಣಿಯಲ್ಲಿದ್ದ ವಿಶ್ವವಿದ್ಯಾಲಯ “”ಬಿ” ಶ್ರೇಣಿಗೆ ತಲುಪಿದೆ. ಇದನ್ನು ಹೆಚ್ಚಿಸುವ ಭರವಸೆಯನ್ನೂ ಅಧ್ಯಾಪಕರು ಕಳೆದುಕೊಳ್ಳುವಂತಾಗಿದೆ.

ಇದರಿಂದ ಅಚ್ಚುಕಟ್ಟಾಗಿ ಮುನ್ನಡೆಸಿಕೊಂಡು ಬಂದಿದ್ದ ದೂರಶಿಕ್ಷಣ ನಿರ್ದೇಶನಾಲಯವೂ ಮಾನ್ಯತೆ ಕಳೆದುಕೊಳ್ಳುವಂತಾಗಿದೆ ಎಂದು ಪತ್ರದಲ್ಲಿ ಉಲ್ಲೇಖೀಸಲಾಗಿದೆ. ಈ ಪತ್ರದಲ್ಲಿ ಕನ್ನಡ ವಿವಿ ನಿವೃತ್ತ ನೌಕರರ ಉಪಲಬ್ದಿಗಳ ಮೊತ್ತ ಪಾವತಿ, ಮರಣ ಹೊಂದಿದ ನೌಕರರ ಕುಟುಂಬಕ್ಕೆ ಅನುಕಂಪದ ನೌಕರಿ, ಸಹ ಪ್ರಾಧ್ಯಾಪಕರ ಮುಂಬಡ್ತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪತ್ರದಲ್ಲಿ ಉಲ್ಲೇಖೀಸಲಾಗಿದೆ.

ನೇಮಕಾತಿ ಮುಂದೂಡಲು ಒತ್ತಾಯ: ಈ ನಡುವೆ ಅಧ್ಯಾಪಕರ ಸಂಘದಿಂದ ನ. 12ರಂದು ಕನ್ನಡ ವಿವಿ ಕುಲಸಚಿವ ಡಾ| ಸುಬ್ಬಣ್ಣ ರೈ ಅವರಿಗೆ ಮನವಿಪತ್ರ ಕೂಡ ಸಲ್ಲಿಸಲಾಗಿದೆ. ಕನ್ನಡ ವಿವಿ 2021ರ ಸೆಪ್ಟೆಂಬರ್‌ 3ರಂದು ಬೋಧಕ ಹುದ್ದೆಗಳ ನೇಮಕಾತಿಗೆ ಅಧಿ ಸೂಚನೆ ಪ್ರಕಟಿಸಿದ್ದು, ಸರ್ಕಾರದ ನಿಯಮದನ್ವಯ ಶೇ. 50ರ ನೇರ ಮೀಸಲಾತಿ ಮತ್ತು ಸಮತಲ ಮೀಸಲಾತಿ ಹಾಗೂ ಶೇ. 33 ಮಹಿಳಾ ಮೀಸಲಾತಿ ರೋಸ್ಟರ್‌ ಪಾಲನೆಯಾಗಿರುವುದಿಲ್ಲ. ಜೊತೆಗೆ ಯುಜಿಸಿ 2018ರ ನಿಯಮದಂತೆ ನೇಮಕಾತಿ ಪರೀಕ್ಷೆ ನಡೆಸಲು ಅವಕಾಶ ಇರುವುದಿಲ್ಲ. ಅದಕ್ಕೆ ಸಂಬಂಸಿದ ಕನ್ನಡ ವಿಶ್ವವಿದ್ಯಾಲಯ ಅ ಧಿನಿಯಮ 1991ರ ಅಡಿ ನೇಮಕಾತಿ ಪರಿನಿಯಮವು ಪ್ರಕಟವಾಗಿರುವುದಿಲ್ಲ. ಇಷ್ಟೆಲ್ಲ ಕ್ರಮಲೋಪಗಳಿದ್ದರೂ ನ. 15ರಂದು ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರೀಕ್ಷೆ ನಡೆಸುತ್ತಿರುವುದು ಸರಿಯಲ್ಲ. ಈಗ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ತಕ್ಷಣ ಈ ಪ್ರಕ್ರಿಯೆ ನಿಲ್ಲಿಸಲು ಕೈಗೊಳ್ಳುವಂತೆ ಒತ್ತಾಯಿಸಿದೆ.

ಪರೀಕ್ಷೆ ಮುಂದೂಡಿಕೆ : ಹಂಪಿ ಕನ್ನಡ ವಿವಿಯ ಬೋಧಕ ಹುದ್ದೆಗಳ ನೇಮಕಾತಿಗೆ ನ. 15ರಂದು ಲಿಖೀತ ಪರೀಕ್ಷೆ ನಿಗದಿಯಾಗಿತ್ತು. ಕಾರಣಾಂತರದಿಂದ ನೇಮಕಾತಿ ಹುದ್ದೆಗಳ ಲಿಖೀತ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕವನ್ನು ನಂತರದಲ್ಲಿ ಪ್ರಕಟಿಸಲಾಗುವುದು ಎಂದು ಕುಲಸಚಿವ ಡಾ| ಸುಬ್ಬಣ್ಣ ರೈ ಅವರು ಪ್ರಕಟಣೆ ಹೊರಡಿಸಿದ್ದಾರೆ.

ಕೋವಿಡ್‌ ಹಿನ್ನೆಲೆ ಹಂಪಿ ಕನ್ನಡ ವಿವಿಯಲ್ಲಿ ಆರ್ಥಿಕ ಸಂಕಷ್ಟ ನಡುವೆಯೂ ಮಹನೀಯರ ಜಯಂತಿಗಳನ್ನೇ ವಿಚಾರ ಸಂಕಿರಣಗಳನ್ನಾಗಿಸಿ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ವಿವಿಯಲ್ಲಿ ಸದ್ಯ ವಿದ್ಯುತ್‌ ಬಿಲ್‌ ಪಾವತಿಗೂ ಹಣವಿಲ್ಲ. ಹಾಗಾಗಿ ಅಕಾಡೆಮಿಕ್‌ಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿದೆ. ನೇಮಕಾತಿಯನ್ನು ನಿಯಮಾನುಸಾರ ಮಾಡಲಾಗುತ್ತಿದೆ. ಇದರಲ್ಲಿ ಯಾವುದೇ ಲೋಪವಿಲ್ಲ. ನಿಯಮಗಳ ಪಾಲನೆ ಮಾಡಲಾಗುತ್ತಿದೆ. ∙ಡಾ| ಸ.ಚಿ. ರಮೇಶ, ಹಂಪಿ ಕನ್ನಡ ವಿವಿ ಕುಲಪತಿ

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.