ಪ್ರತಿಯೊಬ್ಬರ ಜೀವನ ಬದಲಿಸುವ ಸಾಧನ ಶಿಕ್ಷ ಣ
Team Udayavani, Nov 15, 2021, 2:31 PM IST
ರಾಯಚೂರು: ಶಿಕ್ಷಣ ಎನ್ನುವುದು ಜೀವನ ಬದಲಿಸುವ ಸಾಧನವಾಗಿದ್ದು, ಪ್ರತಿಯೊಬ್ಬರು ಅಕ್ಷರಸ್ಥರಾಗುವ ಮೂಲಕ ಉತ್ತಮ ನಾಗರಿಕರಾಗಿ ಬಾಳಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಭಾನುವಾರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ 25ನೇ ವರ್ಷಾಚರಣೆ ಹಾಗೂ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತ ಅ.2ರಿಂದ ಆರಂಭಿಸಿದ ಕಾನೂನು ಅರಿವು-ನೆರವು ಕಾರ್ಯಕ್ರಮದ ಸಮಾರೋಪ ನಿಮಿತ್ತ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಹುತೇಕ ಜನರಲ್ಲಿ ಕಾನೂನುಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದ್ದರಿಂದ ಅನೇಕ ಅವಘಡಗಳು ನಡೆಯುತ್ತವೆ. ಇವುಗಳು ಆಗಬಾರದು ಎಂದರೆ ಪ್ರತಿಯೊಬ್ಬರೂ ಕಾನೂನುಗಳ ಬಗ್ಗೆ ಮಾಹಿತಿ ಪಡೆಯಬೇಕು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಯಚೂರು ಜಿಲ್ಲಾದ್ಯಂತ 341 ಕಾನೂನು ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 905 ಗ್ರಾಮಗಳ ಪೈಕಿ 790 ಗ್ರಾಮಗಳಲ್ಲಿ ಮನೆ-ಮನೆಗೆ ಹೋಗಿ ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೆಯೋದ್ದೇಶಗಳನ್ನೊಳಗೊಂಡ ಕರಪತ್ರಗಳನ್ನು ಹಂಚಲಾಗಿದೆ. ಗ್ರಾಮೀಣ ಜನರಿಗೆ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಗಿದೆ ಎಂದರು.
ಅದಕ್ಕೂ ಮೊದಲು ನಗರದ ಟ್ಯಾಗೋರ್ ಕಾಲೇಜಿನ ಆವರಣದಿಂದ ಜಿಲ್ಲಾ ನ್ಯಾಯಾಲಯ ಆವರಣವರೆಗೆ ಕಾನೂನು ಅರಿವು-ನೆರವು ಜಾಥಾ ನಡೆಯಿತು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜೆ.ಬಸವರಾಜ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೂಡುವಕ್ಕಲೀಗೇರ ಮಹಾದೇವಪ್ಪ ಗಂಗಪ್ಪ, ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶರಾದ ದೇವಾನಂದ ಪುಟ್ಟಪ್ಪ ನಾಯಕ, ಪ್ರಭಾರ ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಹೇಮಾ ಪಸ್ತಾಪೂರ್, ಜೆಎಂಎಫ್‌ಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರಾದ ಮಮತಾ ಆರ್.ಎ, ಮಹಾಜನ್ ಆರ್.ಎ, ರಾಮರೆಡ್ಡಿ ಪಾಟೀಲ್, ವೃಷಬೇಂದ್ರಯ್ಯ ಸ್ವಾಮಿ, ವೀರನಗೌಡ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.