ಹಾಡಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತನ ಕೊಚ್ಚಿ ಕೊಲೆ
Team Udayavani, Nov 15, 2021, 3:44 PM IST
ಪಾಲಕ್ಕಾಡ್: ನಾಲ್ವರ ತಂಡವೊಂದು ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಹಾಡಹಗಲೇ ಬರ್ಬರವಾಗಿ ಕಡಿದು ಹತ್ಯೆ ಮಾಡಿದ ಘಟನೆ ಕೇರಳದ ಮೊಂಬರಂನಲ್ಲಿ ಸೋಮವಾರ ನಡೆದಿದೆ.
ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಬರಂನಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಯುಧಗಳಿಂದ ದಾಳಿ ಮಾಡಿದ್ದು, ಹಲವು ಸಾರ್ವಜನಿಕರು ನೋಡಿದ್ದಾರೆ.
ಹತ್ಯೆಗೀಡಾದ ಆರ್‌ಎಸ್‌ಎಸ್ ಕಾರ್ಯಕರ್ತ ಎಲಪ್ಪುಳ್ಳಿ ವಲಯದ ‘ಬೌಧಿಕ್ ಪ್ರಮುಖ್’ ಸಂಜಿತ್ (27) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸಂಜಿತ್ ಬೈಕನ್ನು ಅಡ್ಡಗಟ್ಟಿ ಮಾರಕಾಯುಧಗಳಿಂದ ಕೊಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಸಂಜಿತ್ ರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ ಹಿಂದೆ ಎಸ್‌ಡಿಪಿಐ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಎಲಾಪುಲ್‌ನಲ್ಲಿ ಎಸ್‌ಡಿಪಿಐ ಮತ್ತು ಆರ್‌ಎಸ್‌ಎಸ್ ನಡುವೆ ಉದ್ವಿಗ್ನತೆ ಮತ್ತು ಸಂಘರ್ಷಮಯ ವಾತಾವರಣವಿತ್ತು ಎಂದು ಹೇಳಲಾಗಿದೆ.
ಇದನ್ನೂ ಓದಿ :ಖ್ಯಾತ ಇತಿಹಾಸಕಾರ, ಪದ್ಮವಿಭೂಷಣ ಬಾಬಾಸಾಹೇಬ್ ಪುರಂದರೆ ಇನ್ನಿಲ್ಲ
ಸಂಜಿತ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು ಎಂದು ಪಾಲಕ್ಕಾಡ್ ಟೌನ್ ಪೊಲೀಸರು ಮತ್ತು ಕಸಬಾ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಲಾಗಿದೆ.
ಹತ್ಯೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್, ಇದೊಂದು ಯೋಜಿತ ಕೊಲೆ ಎಂದು ಆರೋಪಿಸಿದ್ದು, ಕೇರಳದಲ್ಲಿನ ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಕಾರಣ ಎಂದು ಆರೋಪಿಸಿದ್ದಾರೆ.
ಹತ್ಯೆ ಖಂಡಿಸಿ ಸೋಮವಾರ ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ ಮಲಂಪುಳ ಕ್ಷೇತ್ರದಲ್ಲಿ ಬಿಜೆಪಿ ಹರತಾಳ ನಡೆಸುತ್ತಿದೆ. ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.