ಶರಣಬಸವ ವಿವಿಯಲ್ಲಿ ವೆಬಿನಾರ್
Team Udayavani, Nov 15, 2021, 6:05 PM IST
ಕಲಬುರಗಿ: ಮಹಾದಾಸೋಹ ಪೀಠಾಧಿಪತಿ ಡಾ| ಶರಣಬಸವಪ್ಪ ಅಪ್ಪ ಮಾತೋಶ್ರೀ ಡಾ| ದಾಕ್ಷಾಯಿಣಿ ಅವ್ವ ಹಾಗೂ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಜನ್ಮದಿನಾಚರಣೆ ನಿಮಿತ್ತ ಶರಣಬಸವ ವಿಶ್ವವಿದ್ಯಾಲಯದ ಇಂಗ್ಲಿಷ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಷೆಕ್ಸ್ ಪಿಯರ್ ನಾಟಕಗಳಲ್ಲಿ ಮಾನವೀಯ ದೃಷ್ಟಿಕೋನ ಕುರಿತು ಒಂಭತ್ತು ದಿನಗಳ ವೆಬಿನಾರ್ ಆಯೋಜಿಸಿದೆ.
ವೆಬಿನಾರ್ ಉದ್ಘಾಟಿಸಿ ಮಾತನಾಡಿದ ಶರಣಬಸವ ವಿಶ್ವವಿದ್ಯಾಲಯ ಉಪಕುಲಪತಿ ಡಾ| ನಿರಂಜನ್ ವಿ.ನಿಷ್ಠಿ, ಮಹಾನ್ ಅಮರ ಕವಿ ಮತ್ತು ನಾಟಕಕಾರ ಷೆಕ್ಸ್‌ಪಿಯರ್ ಇಂದಿಗೂ ಪ್ರಸ್ತುತವಾಗಿದ್ದು, ಆಧುನಿಕ ಕಾಲಘಟ್ಟದಲ್ಲಿ ಇಂಗಿಷ್ ಭಾಷೆ ಮತ್ತು ಸಾಹಿತ್ಯ ಅಧ್ಯಯನಕ್ಕೆ ಅದರಲ್ಲೂ ವಿಲಿಯಂ ಷೆಕ್ಸ್‌ಪಿಯರ್‌ನ ನಾಟಕಗಳ ಅಧ್ಯಯನಕ್ಕೆ ಹೆಚ್ಚಿನ ಮಹತ್ವ ಬಂದಿದೆ ಎಂದು ಹೇಳಿದರು.
ಗೌರವ ಅತಿಥಿ, ಸಮ ಕುಲಪತಿ ಪ್ರೊ| ವಿ.ಡಿ. ಮೈತ್ರಿ ಮಾತನಾಡಿ, ಇಂಗ್ಲಿಷ್ ವಿಭಾಗವು ಇಂಗ್ಲಿಷ್ ಮಾತ್ರವಲ್ಲದೇ ಇತರ ವಿಭಾಗಗಳ ವಿದ್ಯಾರ್ಥಿಗಳಿಗೆ ಕಲಿಕೆಯ ವೇದಿಕೆ ಒದಗಿಸುತ್ತಿದೆ ಎಂದು ಹೇಳಿದರು.
ಮುಖ್ಯ ಅತಿಥಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ ಮಾತನಾಡಿ, ತಮ್ಮ ವಿದ್ಯಾರ್ಥಿ ದಿನಗಳನ್ನು ಹಾಗೂ ಷೆಕ್ಸ್‌ಪಿಯರ್ ಅಧ್ಯಯನವನ್ನು ಸ್ಮರಿಸಿದರು. ಶರಣಬಸವ ವಿಶ್ವವಿದ್ಯಾಲಯವು ಬಹು ವಿಭಾಗಗಳಿಗೆ ಹೆಸರು ವಾಸಿಯಾಗಿರುವುದರಿಂದ ತಾಂತ್ರಿಕ ಶಿಕ್ಷಣ ಮತ್ತು ಆಂಗ್ಲ ಸಾಹಿತ್ಯದ ವಿದ್ಯಾರ್ಥಿಗಳು ಜೊತೆಯಲ್ಲಿ ಸಾಗಬೇಕು ಎಂಬ ಅಂಶವನ್ನು ಹೇಳಿದರು. ವಿಜ್ಞಾನ ಮತ್ತು ಸಾಹಿತ್ಯ ಒಂದಕ್ಕೊಂದು ಪೂರಕವಾಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.