ಕಾರ್ಕಳ: ಸಿಡಿಲು ಬಡಿದು ಸಾವು; ಕುಂದಾಪುರದಲ್ಲಿ ಧಾರಾಕಾರ ಮಳೆ
ದಕ್ಷಿಣ ಕನ್ನಡ: ಮಳೆ ಕ್ಷೀಣ
Team Udayavani, Nov 16, 2021, 5:32 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮಳೆ ದೂರವಾಗಿದ್ದು, ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಉಡುಪಿ ಜಿಲ್ಲೆಯ ವಿವಿಧೆಡೆ ಮಳೆಯಾಗಿದ್ದರೆ ಕುಂದಾಪುರ ಪರಿಸರದಲ್ಲಿ ಧಾರಾಕಾರ ಮಳೆ ಸುರಿದಿದೆ. ಕಾರ್ಕಳದ ಬೈಲೂರು ಸಮೀಪದ ನೀರೆ ಎಂಬಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ದ.ಕ. ಜಿಲ್ಲೆಯಲ್ಲಿ ರವಿವಾರ ಸಂಜೆ ಆರಂಭವಾಗಿದ್ದ ಮಳೆ ತಡ ರಾತ್ರಿವರೆಗೂ ಸುರಿದಿತ್ತು. ಆದರೆ ಸೋಮವಾರ ಹಗಲಿನಲ್ಲಿ ಮಳೆ ಸುರಿದಿಲ್ಲ. ಸಂಜೆ ಬಳಿಕ ಗ್ರಾಮಾಂತರ ಪ್ರದೇಶಗಳ ಕೆಲವು ಕಡೆ ಸಾಧಾರಣ ಮಳೆಯಾಗಿದೆ.
ಈ ನಡುವೆ ಹವಾಮಾನ ಇಲಾಖೆಯು ಮಂಗಳವಾರ ಕೂಡ ಕರಾವಳಿಯಲ್ಲಿ ಆರೆಂಜ್ ಆಲರ್ಟ್ ಘೋಷಿಸಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕುಂದಾಪುರ: ಧಾರಾಕಾರ ಮಳೆ
ಉಡುಪಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವರ್ಷಧಾರೆ ಮುಂದುವರಿದಿದ್ದು, ರವಿವಾರ ತಡರಾತ್ರಿ, ಸೋಮವಾರ ಹಗಲು ಹಲವೆಡೆ ಮಳೆ ಸುರಿದಿದೆ. ಕುಂದಾಪುರ ಭಾಗದಲ್ಲಿ ಗುಡುಗು, ಮಿಂಚು ಸಹಿತ ಹೆಚ್ಚು ಮಳೆ ಸುರಿದಿದ್ದು, ಮಧ್ಯಾಹ್ನ ಬಳಿಕ ತೆಕ್ಕಟ್ಟೆ, ಬೈಂದೂರು, ಉಪ್ಪುಂದ, ಸಿದ್ದಾಪುರ, ಹೊಸಂಗಡಿ, ಯಡಮೊಗೆ, ಹಳ್ಳಿ ಹೊಳೆ, ಅಂಪಾರು, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಬೆಳ್ವೆ, ಅಮಾಸೆಬೈಲು, ಕೊಲ್ಲೂರು ಪರಿಸರದಲ್ಲಿ ಧಾರಾಕಾರ ಮಳೆಯಾಗಿದೆ. ಈ ಭಾಗದಲ್ಲಿ ಕೃಷಿ, ತೋಟಗಾರಿಕೆ ಬೆಳೆಗಳಿಗೆ ಹೆಚ್ಚು ಹಾನಿ ಸಂಭವಿಸಿದೆ. ಉಡುಪಿ, ಮಣಿಪಾಲ, ಮಲ್ಪೆ, ಕಾಪು, ಪಡುಬಿದ್ರಿ, ಕಾರ್ಕಳ, ಅಜೆಕಾರು, ಬೈಲೂರು, ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ.
ಇದನ್ನೂ ಓದಿ:ಆದಿವಾಸಿಗಳ ನಿರ್ಲಕ್ಷಿಸಿದ್ದ ಕಾಂಗ್ರೆಸ್: ಪ್ರಧಾನಿ ಮೋದಿ ಆರೋಪ
ಸಿಡಿಲು ಬಡಿದು ಸಾವು
ಕಾರ್ಕಳ: ಬೈಲೂರು ಸಮೀಪದ ನೀರೆ ಎಂಬಲ್ಲಿ ಸೋಮವಾರ ಸಂಜೆ 4ರ ವೇಳೆಗೆ ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ನೀರೆ ರಾಜೀವ ನಗರದ ವಾದಿರಾಜ ಆಚಾರ್ಯ(60) ಮೃತಪಟ್ಟವರು.
ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಪರಿಕರಗಳು ಸುಟ್ಟು ಕರಕಲಾಗಿವೆ. ಮನೆಗೂ ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಈ ಮನೆಯ ಪರಿಸರದಲ್ಲಿ ಇರುವ ಇತರ ಹಲವು ಮನೆಗಳಿಗೂ ಹಾನಿ ಸಂಭವಿಸಿದೆ.
ಸಿಡಿಲು ಬಡಿದು ನೆಲಕ್ಕೆ ಬಿದ್ದ ವಾದಿರಾಜ ಆಚಾರ್ಯ ಅವರನ್ನು ಕೂಡಲೇ ಬೈಲೂರಿನ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಾರ್ಕಳ ಪ್ರಭಾರ ತಹಶೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಶಿವಪ್ರಸಾದ್ ಭಟ್ ಇನ್ನಿತರರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.