ಕಾಲೇಜುಗಳಲ್ಲಿ ಮೂಲ ಸೌಕರ್ಯ ಕೊರತೆ
Team Udayavani, Nov 16, 2021, 11:56 AM IST
ಕಾಳಗಿ: ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮೂಲ ಸೌಕರ್ಯದ ಕೊರತೆಯಿರುವುದರಿಂದ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಪರದಾಡುವಂತಾಗಿದೆ.
ಬರೋಬ್ಬರಿ ಹತ್ತು ಕೋಟಿ ರೂ. ಖರ್ಚು ಮಾಡಿ ಇಲ್ಲಿನ ಭರತನೂರ ರಸ್ತೆಯಲ್ಲಿ ಸರ್ಕಾರ ಪಾಲಿಟೆಕ್ನಿಕ್ ಕಾಲೇಜು ನಿರ್ಮಿಸಿ, ಕಳೆದ ಒಂದು ತಿಂಗಳ ಹಿಂದೆ ಉದ್ಘಾಟಿಸಿದೆ. ಆದರೆ, ಈ ಕಾಲೇಜಿಗೆ ಹೋಗಲು ಸೂಕ್ತ ರಸ್ತೆಯೇ ಇಲ್ಲ. ವಿದ್ಯಾರ್ಥಿಗಳು, ಸಿಬ್ಬಂದಿಗೆ ಕುಡಿಯಲು ಹಾಗೂ ಶೌಚಾಲಯಕ್ಕೆ ಬಳಸಲು ನೀರೇ ಇಲ್ಲ. ಅಭ್ಯಾಸಕ್ಕೆ ಬೇಕಾಗುವ ಪ್ರಾಯೋಗಿಕ ಸಾಮಗ್ರಿಗಳೂ ಇಲ್ಲ. ಬೃಹತ್ ಕಟ್ಟಡಕ್ಕೆ ರಕ್ಷಣೆ ನೀಡಲು ಸುತ್ತು ಗೋಡೆಯೇ ಇಲ್ಲ. ಹೀಗಾಗಿ ಇಲ್ಲಿನ 86 ಬೋಧಕ-ಬೋಧಕೇತರ ಸಿಬ್ಬಂದಿ, 350 ವಿದ್ಯಾರ್ಥಿಗಳು ಪರದಾಡುವಂತೆ ಆಗಿದೆ.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಯೂ ಅನೇಕ ಸಮಸ್ಯೆಗಳಿವೆ. ಕಾಲೇಜಿನಲ್ಲಿ ಶೌಚಾಲಯವಿದ್ದರೂ ಸೆಪ್ಟಿಕ್ ಟ್ಯಾಂಕ್ ಇಲ್ಲ. ಆದ್ದರಿಂದ ಈ ಶೌಚಾಲಯ ನಿರುಪಯುಕ್ತವಾಗಿದೆ. ನೀರು ಸಹ ಅವಶ್ಯಕತೆಗೆ ಬೇಕಾದಷ್ಟು ದೊರಕುತ್ತಿಲ್ಲ. ಅಲ್ಲದೇ ಶೌಚಾಲಯದ ಕಿಟಕಿ, ಬಾಗಿಲುಗಳನ್ನು ಕಿಡಿಗೇಡಿಗಳು ಹಾಳು ಮಾಡಿದ್ದು, ಎಲ್ಲೆಂದರಲ್ಲಿ ಮದ್ಯದ ಬಾಟಲಿಗಳನ್ನು ಬಿಸಾಕುತ್ತಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಜಿ.ಎಸ್. ಮಾಲಿ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಚಂದ್ರಶೇಖರ ಪಾಟೀಲ ಅಭಿಮಾನಿಗಳಿಂದ ಕಾಶೀಯಾತ್ರೆ
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ಉದ್ಘಾಟನೆ ವೇಳೆ ಆಗಮಿಸಿದ ಶಾಸಕರು, ಸಂಸದರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಪ್ರತಿದಿನ ನೀರು ಖರೀದಿಸಿ ಕುಡಿಯುತ್ತಿದ್ದೇವೆ. –ಮಹೇಶ ಹಿರೇಮಠ, ವಿದ್ಯಾರ್ಥಿ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು
-ಭೀಮರಾಯ ಕುಡ್ಡಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.