ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 8,865 ಕೋವಿಡ್ ಪ್ರಕರಣ ಪತ್ತೆ, 197 ಮಂದಿ ಸಾವು
Team Udayavani, Nov 16, 2021, 12:23 PM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 8,865 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು 287 ದಿನಗಳ ಬಳಿಕದ ಕನಿಷ್ಠ ಸಂಖ್ಯೆಯಾಗಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 197 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ನವೆಂಬರ್ 16) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಸಿಎಂ ಬೊಮ್ಮಾಯಿ ಭೇಟಿಯಾದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,30,793ಕ್ಕೆ ಇಳಿಕೆಯಾಗಿದ್ದು, ಇದು 525 ದಿನಗಳ ಬಳಿಕದ ಕನಿಷ್ಠ ಪ್ರಮಾಣದ ಸಂಖ್ಯೆಯಾಗಿದೆ. ಕಳೆದ 24ಗಂಟೆಗಳಲ್ಲಿ 11,971 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.
ಭಾರತದಲ್ಲಿ ಈವರೆಗೆ 4,63,852 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅಂಕಿಅಂಶ ವಿವರಿಸಿದೆ. ಸತತ 39 ದಿನಗಳಿಂದ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 20,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ವರದಿಯಾಗುತ್ತಿದೆ.
ಕಳೆದ 24ಗಂಟೆಗಳಲ್ಲಿ 3,303 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಸೆಪ್ಟೆಂಬರ್ 16ರಂದು ಕೋವಿಡ್ ಪ್ರಕರಣಗಳ ಸಂಖ್ಯೆ 50 ಲಕ್ಷ ದಾಟಿತ್ತು ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.