ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪುರಸ್ಕಾರ: ಸಿಎಂ ಘೋಷಣೆ
Team Udayavani, Nov 16, 2021, 5:00 PM IST
ಬೆಂಗಳೂರು: ಇತ್ತೀಚೆಗೆ ಅಗಲಿದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕನ್ನಡ ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಅಪ್ಪುಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪುರಸ್ಕಾರ ನೀಡುವುದಾಗಿ ಘೋಷಿಸಿದರು.
ಇದನ್ನೂ ಓದಿ:ಪ್ರಾದೇಶಿಕ ಪಕ್ಷದಿಂದ ಕನ್ನಡ ಉಳಿವು: ನಿಖಿಲ್ ಕುಮಾರಸ್ವಾಮಿ
ಕರ್ನಾಟಕ ರಾಜ್ಯ ಕಂಡ ಅಪ್ರತಿಮ ಕಲಾವಿದರಲ್ಲಿ ಪುನೀತ್ ರಾಜ್ ಕುಮಾರ್ ಅವರು ಡಾ. ರಾಜ್ ಕುಮಾರ್ ಅವರ ಆದರ್ಶಗಳನ್ನು ಚಾಚೂ ತಪ್ಪದೆ ಪಾಲಿಸಿ ಎಲ್ಲರಿಗೂ ಅವರು ಸೂಜಿಗಲ್ಲಿನಂತೆ ಸೆಳೆಯುತ್ತಿದ್ದರು. ಸೂರ್ಯ ಚಂದ್ರ ಇರುವವರೆಗೂ ಪುನೀತ್ ರಾಜಕುಮಾರ್ ಅವರು ಚಿರಸ್ಥಾಯಿಯಾಗಿರುತ್ತಾರೆ ಕರ್ನಾಟಕ ರತ್ನವಾಗಿ ಮಿಂಚುತ್ತಿರುತ್ತಾರೆ. ಎಲ್ಲರ ಹೃದಯದಲ್ಲೂ ಅವರು ನೆಲೆಸುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ ಕುಮಾರ್ ಕುಟುಂಬ, ಚಿತ್ರರಂಗದ ಆಹ್ವಾನಿತ ಗಣ್ಯರು, ರಾಜಕೀಯ ಮುಖಂಡರು ಭಾಗವಹಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಿ.ಎನ್.ಅಶ್ವಥ ನಾರಾಯಣ, ಬಿ.ಸಿ.ಪಾಟೀಲ್ ಸೇರಿ ಹಲವರು ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.