ಕೆಸಿಸಿ ಯೋಜನೆಯಡಿ ಸಾಲ ಅಭಿಯಾನ: ಮುರಗಿ

ದಾಖಲೆಗಳನ್ನು ಸಲ್ಲಿಸಿ ದುಡಿಮೆ ಬಂಡವಾಳಕ್ಕೆ ಆರ್ಥಿಕ ನೆರವು ಪಡೆಯಬಹುದಾಗಿದೆ.

Team Udayavani, Nov 16, 2021, 6:10 PM IST

ಕೆಸಿಸಿ ಯೋಜನೆಯಡಿ ಸಾಲ ಅಭಿಯಾನ: ಮುರಗಿ

ಬಾಗಲಕೋಟೆ: ಪಶು ಸಂಗೋಪನೆ ಮತ್ತು ಮೀನುಗಾರಿಕೆ ಚಟುವಟಿಕೆಗಳಿಗಾಗಿ ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಒದಗಿಸಲು ಜಿಲ್ಲೆಯಲ್ಲಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ (ಕೆಸಿಸಿ) ಸಾಲ ಅಭಿಯಾನ ಕಾರ್ಯಕ್ರಮವನ್ನು ವಾರದ ಪ್ರತಿ ಶುಕ್ರವಾರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾ ಧಿಕಾರಿ ಮಹಾದೇವ ಮುರಗಿ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯಲ್ಲಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಅಭಿಯಾನ ಹಮ್ಮಿಕೊಳ್ಳುವ ಕುರಿತು ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಪಶುಸಂಗೋಪನೆ, ಮೀನುಗಾರಿಕೆ ಇಲಾಖೆ ಹಾಗೂ ಜಿಲ್ಲಾ ಅಗ್ರಣಿ ಬ್ಯಾಂಕನ್‌ ಸಹಯೋಗದಲ್ಲಿ ವಾರದ ಪ್ರತಿ ಶುಕ್ರವಾರ ರೈತರಿಗೆ ಆರ್ಥಿಕ ನೆರವು ಒದಗಿಸುವ ನಿಟ್ಟಿನಲ್ಲಿ ಸಾಲ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಭಾರತ ಸರಕಾರದ ಹಣಕಾಸು ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆಯು ಹೈನುಗಾರಿಕೆ, ಕುರಿ-ಮೇಕೆ, ಹಂದಿ, ಕೋಳಿ ಸಾಕಾಣಿಕೆ ಹಾಗೂ ಮೀನುಗಾರಿಕೆ ಉಪ ಕಸಬುಗಳನ್ನು ಕೈಗೊಳ್ಳಲು ಅವಶ್ಯಕತೆ ಇರುವ ದುಡಿಮೆ ಬಂಡವಾಳವನ್ನು ಕಿಸಾನ್‌ ಕ್ರೆಡಿಟ್‌ ಕಾರ್ಡ ಯೋಜನೆಯಡಿ ಅರ್ಹ ರೈತರಿಗೆ ಆರ್ಥಿಕ ನೆರವು ಒದಗಿಸುವ ಅಭಿಯಾನವನ್ನು ಹಮ್ಮಿಕೊಳ್ಳಲು ಎಲ್ಲ ಬ್ಯಾಂಕ್‌ ಗಳಿಗೆ ನಿರ್ದೇಶನ ನೀಡಿದ್ದು, ಜಿಲ್ಲೆಯಲ್ಲಿ ಕೆಸಿಸಿ ಸಾಲ ಅಭಿಯಾನ ಪ್ರಾರಂಭಿಸಲಾಗಿದೆ ಎಂದರು.

ಹೈನುಗಾರಿಕೆ, ಕುರಿ-ಮೇಕೆ, ಹಂದಿ, ಕೋಳಿ ಸಾಕಾಣಿಕೆ ಹಾಗೂ ಮೀನುಗಾರಿಕೆ ಉಪ ಕಸಬುಗಳಲ್ಲಿ ತೊಡಗಿಸಿಕೊಂಡಿರುವ ಜಿಲ್ಲೆಯಲ್ಲಿನ ರೈತರು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ದುಡಿಮೆ ಬಂಡವಾಳಕ್ಕೆ ಆರ್ಥಿಕ ನೆರವು ಪಡೆಯಬಹುದಾಗಿದೆ. ಈಗಾಗಲೇ ಕುರಿ-ಮೇಕೆ, ಹಂದಿ, ಕೋಳಿ  ಹೊಂದಿದವರಿಗೆ ಮಾತ್ರ ಅವಕಾಶವಿರುತ್ತದೆ ಎಂದು ತಿಳಿಸಿದರು.

ಈ ಕಿಸಾನ್‌ ಕ್ರೆಡಿಟ್‌ ಕಾಡ್‌‌ì ಯೋಜನೆಯಡಿ 2 ಲಕ್ಷ ರೂ. ವರೆಗಿನ ಸಾಲದ ಮೊತ್ತಕ್ಕೆ ಶೇ. 2 ರಷ್ಟು ಬಡ್ಡಿ ಸಹಾಯಧನ ಲಭ್ಯವಿದೆ. ಅಲ್ಲದೇ ಸಕಾಲದಲ್ಲಿ ಈ ಸಾಲವನ್ನು ಮರುಪಾವತಿ ಮಾಡಿದಲ್ಲಿ ವಾರ್ಷಿಕ ಶೇ.3ರಷ್ಟು ಹೆಚ್ಚುವರಿ ಬಡ್ಡಿ ಸಹಾಯಧನದ ಸೌಲಭ್ಯ ಪಡೆಯಬಹುದಾಗಿದೆ. ಆಸಕ್ತರು ರೈತರು ತಮ್ಮ ಅವಶ್ಯಕತೆಗೆ ಅನುಗುಣವಾಗಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಮಟ್ಟದಲ್ಲಿ 5 ಜನ ಅಧಿಕಾರಿಗಳನ್ನೊಳಗೊಂಡ ಸಮನ್ವಯ ಸಮಿತಿ ರಚಿಸಲಾಗಿದೆ ಎಂದರು.

ಜಿಲ್ಲಾ ಅಗ್ರಣಿ ಬ್ಯಾಂಕ್‌ ವ್ಯವಸ್ಥಾಪಕ ಗೋಪಾಲರೆಡ್ಡಿ, ನಬಾರ್ಡನ ಯಮುನಾ ಪೈ, ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ|ಶಶಿಧರ ನಾಡಗೌಡರ, ಮೀನುಗಾರಿಕೆ ಉಪ ನಿರ್ದೇಶಕ ಇರ್ಪಾನ್‌ ಬಾಂಗಿ, ಭಾರತೀಯ ಸ್ಟೇಟ್‌ ಬ್ಯಾಂಕಿನ ಕ್ಷೇತ್ರೀಯ ವ್ಯವಸ್ಥಾಪಕ ನರಸಿಂಹಮೂರ್ತಿ, ಕೆವಿಜಿ ಬ್ಯಾಂಕಿನ ಕ್ಷೇತ್ರೀಯ ವ್ಯವಸ್ಥಾಪಕ ಶ್ರೀಧರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.