ಚಾಮುಂಡಿಬೆಟ್ಟ ಸಂರಕ್ಷಣೆಗೆ ಸರಕಾರ ಮುಂದಾಗಲಿ


Team Udayavani, Nov 17, 2021, 6:30 AM IST

ಚಾಮುಂಡಿಬೆಟ್ಟ ಸಂರಕ್ಷಣೆಗೆ ಸರಕಾರ ಮುಂದಾಗಲಿ

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ರಸ್ತೆ ಕುಸಿತ ಹಾಗೂ ಇಲ್ಲಿನ ಅಭಿವೃದ್ಧಿ ಕುರಿತು ವ್ಯಾಪಕ ಚರ್ಚೆ ಆಗುತ್ತಿದೆ. ಬೆಟ್ಟದ ಕುಸಿತ ಹಾಗೂ ಬೆಟ್ಟದ ಅಭಿವೃದ್ಧಿಗೆ ಸರಕಾರದ ಯೋಜನೆಗಳು ಆತಂಕಕ್ಕೀಡು ಮಾಡಿವೆ. ಬೆಟ್ಟಕ್ಕೆ ಆಗುತ್ತಿರುವ ಹಾನಿಯನ್ನು ತಡೆಯಬೇಕೆಂದು ನಾಗರಿಕರು ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದಾರೆ. ಹಿರಿಯ ಸಾಹಿತಿ ಡಾ| ಎಸ್‌ .ಎಲ್‌. ಭೈರಪ್ಪ, ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಗ್ರೀನ್‌ ಆಸ್ಕರ್‌ ಪ್ರಶಸ್ತಿ ಪುರಸ್ಕೃತ ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್‌ ಸೇನಾನಿ ಹೀಗೆ ಅನೇಕ ಗಣ್ಯರು ಚಾಮುಂಡಿಬೆಟ್ಟ ಉಳಿಸಿ ಹೋರಾಟಕ್ಕೆ ಕೈಜೋಡಿಸಿದ್ದಾರೆ.

ಚಾಮುಂಡಿಬೆಟ್ಟವು ಇಲ್ಲಿನ ಮಿತಿಮೀರಿದ ಅಭಿವೃದ್ಧಿಗೆ ಕುಸಿಯುತ್ತಿದೆ. ಇಂತಹ ಹೊತ್ತಲ್ಲೇ ರಾಜ್ಯ ಸರಕಾರ ಮತ್ತೆ ಇಲ್ಲಿ ಹಂಪಿ ಮಾದರಿ ಅಭಿವೃದ್ಧಿ ಯೋಜನೆಯ ಪ್ರಸ್ತಾವವನ್ನು ಕೇಂದ್ರ ಸರಕಾರದ ಮುಂದಿಟ್ಟು ಗಾಯದ ಮೇಲೆ ಬರೆ ಎಳೆದಿದೆ. ಚಾಮುಂಡಿಬೆಟ್ಟ ಮೈಸೂರಿನ ಅಸ್ಮಿತೆ. ಚಾಮುಂಡೇಶ್ವರಿ ದೇವಿ ನೆಲೆಸಿರುವ ಶಕ್ತಿಪೀಠ. ಭಕ್ತರ ಯಾತ್ರಾ ಸ್ಥಳ. ನಿಸರ್ಗ ರಮಣೀಯ ಈ ತಾಣದಲ್ಲಿ ಅಭಿವೃದ್ಧಿ ಹೆಸರಲ್ಲಿ ವಾಣಿಜ್ಯ ಚಟುವಟಿಕೆಗಳು ಬೆಟ್ಟಕ್ಕೆ ಸಂಚಕಾರ ತಂದೊಡ್ಡಿವೆ. ಇದರ ದುಷ್ಪರಿಣಾಮಗಳು ರಸ್ತೆ ಕುಸಿತ, ಬಂಡೆಕಲ್ಲುಗಳು ಉರುಳುವುದು, ವಸತಿ ಪ್ರದೇಶಕ್ಕೆ ವನ್ಯಮೃಗಗಳು ನುಗ್ಗುವುದು ಹೀಗೆ ವಿವಿಧ ಬಗೆಗಳಲ್ಲಿ ಗೋಚರಿಸುತ್ತಿವೆ. ಇಷ್ಟಾದರೂ ಸರಕಾರ, ಸ್ಥಳೀಯ ಗ್ರಾಮ ಪಂಚಾಯತ್‌ ಮತ್ತೆ ಅಭಿವೃದ್ಧಿ ಹೆಸರಿನಲ್ಲಿ ಹಸುರು ನಾಶಪಡಿಸಿ ಕಾಂಕ್ರೀಟ್‌ ಕಾಡನ್ನು ನಿರ್ಮಿಸಲು ಹೊರಟಿರುವುದು ಮೂರ್ಖತನದ ಪರಮಾವಧಿಯೇ ಸರಿ. ಯಾವುದೇ ಒಂದು ಸರಕಾರಕ್ಕೆ, ಸ್ಥಳೀಯ ಸಂಸ್ಥೆಗೆ ಪರಿಸರದ ಬಗೆಗೆ ಕಾಳಜಿ ಇಲ್ಲದಿದ್ದರೆ ಏನಾಗುತ್ತದೆ ಎಂಬುದಕ್ಕೆ ಚಾಮುಂಡಿಬೆಟ್ಟ ಇವತ್ತು ನಮ್ಮ ಮುಂದೆ ಉದಾಹರಣೆಯಾಗಿ ನಿಂತಿದೆ.

ಇದನ್ನೂ ಓದಿ:ಭೂಮಿ ಮರಳಿಸಿ: ಅರಣ್ಯ ಇಲಾಖೆಗೆ ಸೂಚನೆ

ಚಾಮುಂಡಿಬೆಟ್ಟದ ಪ್ರಕೃತಿ ಹಾಗೂ ಇಲ್ಲಿನ ಪಾವಿತ್ರ್ಯವನ್ನು ಮೊದಲು ಉಳಿಸಿಕೊಳ್ಳಬೇಕು. ಇಲ್ಲಿನ ಜಲಮೂಲಗಳನ್ನು ಸಂರಕ್ಷಿಸಬೇಕು. ಪರಿಸರ, ವನ್ಯಜೀವಿಗಳ ರಕ್ಷಣೆ ಆಗಬೇಕು. ಚಾಮುಂಡಿಬೆಟ್ಟದಲ್ಲಿರುವ ಕಲ್ಲು, ಬಂಡೆಕಲ್ಲು, ಮಣ್ಣು, ಝರಿ, ನೀರನ್ನು ಕಾಪಾಡಿಕೊಳ್ಳಬೇಕು. ಬೆಟ್ಟದ ಸುತ್ತ ವಸತಿ ಬಡಾವಣೆಗಳು ತಲೆ ಎತ್ತಿ ಅನೇಕ ವರ್ಷಗಳೇ ಉರುಳಿವೆ. ಇದನ್ನು ತಡೆಯುವ ಪ್ರಯತ್ನಗಳು ಇನ್ನಾದರೂ ಆಗಬೇಕು. ಬೆಟ್ಟದಲ್ಲಿ ಕಳೆದ 20 ವರ್ಷಗಳಲ್ಲಿ ಜನ ವಸತಿ ಹೆಚ್ಚಿದೆ. ಇದಕ್ಕೆ ಕಡಿವಾಣ ಬೀಳಬೇಕು. ಚಾಮುಂಡಿಬೆಟ್ಟದ ಉಸ್ತುವಾರಿಯನ್ನು ರಾಜ್ಯ ಸರಕಾರದ ಅರಣ್ಯ ಇಲಾಖೆ, ಮುಜರಾಯಿ ಇಲಾಖೆ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್‌ ನೋಡಿಕೊಳ್ಳುತ್ತಿವೆ. ಬೆಟ್ಟದ ಉಳಿವಿಗೆ ಇವು ಪರಿಸರಕ್ಕೆ ಪೂರಕವಾದ ಹೆಜ್ಜೆ ಇಡಬೇಕು. ಪ್ರವಾಸೋದ್ಯಮ ಇಲಾಖೆಯೂ ಅಷ್ಟೇ. ಪ್ರವಾಸೋದ್ಯಮ ಅಭಿವೃದ್ಧಿ ಹೆಸರಿನಲ್ಲಿ ಬೆಟ್ಟದಲ್ಲಿ ಹಂಪಿ ಮಾದರಿ ಯೋಜನೆಗೆ ಮುಂದಾಗಿರುವುದನ್ನು ಮೊದಲು ಕೈಬಿಡಬೇಕು. ಬೆಟ್ಟದಲ್ಲಿ ಆಗಬೇಕಿರುವುದು ಪ್ರವಾಸೋದ್ಯಮ ಅಭಿವೃದ್ಧಿ ಅಲ್ಲ. ಈ ನಿಸರ್ಗ ತಾಣದ ಸಂರಕ್ಷಣೆ ಎಂಬುದನ್ನು ಅರಿಯಬೇಕು.

ಬೆಟ್ಟಕ್ಕೆ ಆಗುವ ಮತ್ತಷ್ಟು ಹಾನಿಯನ್ನು ತಡೆಯುವುದು ಇಂದಿನ ತುರ್ತು ಅಗತ್ಯವಾಗಿದೆ. ಬೆಟ್ಟದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ವ್ಯಾಪಾರ ವಹಿವಾಟು ಹೆಚ್ಚು ಮಾಡುವುದು, ಕಟ್ಟಡಗಳನ್ನು ಕಟ್ಟುವುದರಲ್ಲಿ ಅರ್ಥವೇ ಇಲ್ಲ. ಪ್ರಕೃತಿ ತಿರುಗಿ ಬಿದ್ದ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದ್ದರೂ ಸರಕಾರ ಕುರುಡಾಗಿದೆ.

ಟಾಪ್ ನ್ಯೂಸ್

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

school

Karnataka; ಶಾಲಾ ಆಸ್ತಿ ಸಂರಕ್ಷಣೆ ಅಭಿಯಾನ ಎಲ್ಲ ಇಲಾಖೆಗಳಿಗೂ ಮಾದರಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.