ದುರಂತ: ರಸ್ತೆ ಅಪಘಾತದಲ್ಲಿ ನಟ ಸುಶಾಂತ್ ಸಿಂಗ್ ಕುಟುಂಬದ ಐವರು ಸ್ಥಳದಲ್ಲೇ ಸಾವು
ಒ.ಪಿ.ಸಿಂಗ್ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಹರ್ಯಾಣದಲ್ಲಿ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Team Udayavani, Nov 17, 2021, 11:11 AM IST
ಪಾಟ್ನಾ:ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕುಟುಂಬದ ಐವರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದಿಂದ ಬಾಂಧರ್ ಗ್ರಾಮಕ್ಕೆ ಇವರೆಲ್ಲಾ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ನಟೋರಿಯಸ್ ರೌಡಿಯಿಂದ ಪೋಲೀಸರ ಮೇಲೆ ದಾಳಿ:ಕಾಲಿಗೆ ಗುಂಡು
ಅಪಘಾತದಲ್ಲಿ ಒ.ಪಿ.ಸಿಂಗ್ ಅವರ ಬಾವ, ರಜಪೂತ್ ಅವರ ಬಾವ ಹಾಗೂ ಇತರ ಸಂಬಂಧಿಗಳು ಸಾವನ್ನಪ್ಪಿದ್ದಾರೆ. ಸುಶಾಂತ್ ಅವರ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ವಾಹನ ಎದುರಿನಿಂದ ಸಿಲಿಂಡರ್ ಗಳನ್ನು ಹೊತ್ತು ಬಂದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು. ಡ್ರೈವರ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಒ.ಪಿ.ಸಿಂಗ್ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಹರ್ಯಾಣದಲ್ಲಿ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವರದಿಗಳ ಪ್ರಕಾರ, ಸುಶಾಂತ್ ಸಿಂಗ್ ಸಹೋದರಿ ಸೋಮವಾರ ನಿಧನರಾಗಿದ್ದರು. ಮಂಗಳವಾರ ಜಮುಯಿಯಲ್ಲಿ ನಡೆಯಲಿದ್ದ ಅಂತ್ಯ ಸಂಸ್ಕಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿತ್ತು.
ಸುಶಾಂತ್ ಬಾವ ಲಾಲ್ ಜಿತ್ ಸಿಂಗ್, ಅವರ ಪುತ್ರರಾದ ಅಮಿತ್ ಶೇಖರ್ ಸಿಂಗ್, ರಾಮಚಂದ್ರ ಸಿಂಗ್, ಮಗಳು ಬೇಬಿ ದೇವಿ, ಡಿ.ಜಿ.ಕುಮಾರಿ ಮತ್ತು ಚಾಲಕ ಪ್ರೀತಮ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
MUST WATCH
ಹೊಸ ಸೇರ್ಪಡೆ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.