‘ಹೌದು ಹುಲಿಯಾ’ ತಂಡ ತಯಾರು ಮಾಡಿ: ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್
Team Udayavani, Nov 17, 2021, 1:11 PM IST
ಬೆಂಗಳೂರು : ‘ಮಾನ್ಯ ಸಿದ್ದರಾಮಯ್ಯ ಅವರೇ, ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕ್ರಮದಲ್ಲಿ ಇತ್ತೀಚೆಗೆ “ಡಿಕೆ ಡಿಕೆ” ಎಂಬ ಘೋಷಣೆ ಸದ್ದು ಮಾಡುತ್ತಿದೆ.”ಹೌದು ಹುಲಿಯಾ” ಎಂದು ಬೊಬ್ಬೆ ಹಾಕುವುದಕ್ಕೆ ನೀವೂ ಒಂದು ತಂಡ ತಯಾರು ಮಾಡಿ ಎಂದು ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ.
ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ’ ಹಿಂದೂ ಕಾರ್ಯಕರ್ತರ ಕಗ್ಗೊಲೆಗೆ ಪ್ರೇರಕರಾದಿರಿ, ಟಿಪ್ಪು ಜಯಂತಿ ನಡೆಸಿದಿರಿ, ಶಾದಿ ಭಾಗ್ಯ ಕೊಟ್ಟಿರಿ ಆದರೆ ಫಲವೇನು?’ ಎಂದು ಪ್ರಶ್ನಿಸಿದೆ.
‘ಅಲ್ಪಸಂಖ್ಯಾತರ ಸಮಾವೇಶದಲ್ಲಿ ನಿಮ್ಮ ಜೊತೆ ಅಲ್ಪಸಂಖ್ಯಾತ ಸಮುದಾಯದವರೇ ಇರಲಿಲ್ಲ. ಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಡಿಕೆ ಡಿಕೆ ಎನ್ನುತ್ತಿದ್ದಾರೆ’ ಎಂದು ಜರಿದಿದೆ.
‘ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು ಎಂದು ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆ ಡಿಕೆ ಡಿಕೆ ಎಂದು ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದರೆ ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ?’ ಎಂದು ಲೇವಡಿ ಮಾಡಿದೆ.
‘ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿ ಹೊರ ನಡೆದಿದ್ದಾರೆ.ಇದಕ್ಕೆ ಕಾರಣ “ಡಿಕೆ ಡಿಕೆ” ಎಂಬ ಘೋಷಣೆ. ಅಲ್ಲಿಗೆ ಕಾಂಗ್ರೆಸ್ ಬಣ ರಾಜಕಾರಣದ ಇನ್ನೊಂದು ಮುಖ ಅನಾವರಣಗೊಂಡಿದೆ. ಒಡೆದ ಮನೆಯಾಗಿರುವ ಕಾಂಗ್ರೆಸ್‌ನಲ್ಲಿ ಇದು ಸಾಮಾನ್ಯವಲ್ಲವೇ?’ ಎಂದು ಇನ್ನೊಂದು ಟ್ವೀಟ್ ನಲ್ಲಿ ಬರೆದಿದೆ.
‘ಮುಸ್ಲಿಮರು ಒಟ್ಟಾಗಬೇಕೆಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ. ಆದರೆ ಪಿಸುಮಾತು ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಸಲೀಂ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ, ಉಗ್ರಪ್ಪ ಅವರಿಗೆ ಬರೇ ನೋಟೀಸ್ ನೀಡಿದೆ. ಅಲ್ಪಸಂಖ್ಯಾತರೇ, ಕರ್ನಾಟಕ ಕಾಂಗ್ರೆಸ್ ಪಕ್ಷದ ನರಿ ಬುದ್ಧಿಯ ಬಗ್ಗೆ ಇನ್ನೊಮ್ಮೆ ಯೋಚಿಸಿ.’ ಎಂದು ಬರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.