ಡಿ.18ಕ್ಕೆ ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ್‌ ಅದಾಲತ್‌

ಇಂದಿನಿಂದ ಜಿಲ್ಲೆಯ ಎಲ್ಲಾ ಕೋರ್ಟ್‌ಗಳಲ್ಲಿ ಪೂರ್ವ ಸಂಧಾನ ಕಾರ್ಯಕ್ರಮ: ನ್ಯಾಯಾಧೀಶ ನಾಗರಾಜ

Team Udayavani, Nov 17, 2021, 2:56 PM IST

ಲೋಕ ಅದಾಲತ್

ಕೋಲಾರ: ಜಿಲ್ಲೆಯ ಎಲ್ಲಾ ಕೋರ್ಟ್‌ಗಳಲ್ಲಿ ಡಿ.18ರಂದು ರಾಷ್ಟ್ರೀಯ ಲೋಕ್‌ ಅದಾಲತ್‌ ಹಮ್ಮಿಕೊಂಡಿದ್ದು, ನ.17ರಿಂದ ಜಿಲ್ಲೆಯ ಎಲ್ಲಾ ಕೋರ್ಟ್ ಗಳಲ್ಲಿ ಪೂರ್ವ ಸಂಧಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಆರ್‌.ನಾಗರಾಜ ತಿಳಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಲೋಕ ಅದಾಲತ್‌ ಕುರಿತು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜ ಸುವ್ಯವಸ್ಥೆಯಾಗಿರಬೇಕಾದರೆ ವ್ಯಾಜ್ಯಗಳು ಕಡಿಮೆಯಾಗಬೇಕು, ಸಾರ್ವಜನಿಕರು ನೆಮ್ಮದಿಯಾಗಿ ಜೀವನ ನಡೆಸಬೇಕು, ಪ್ರಜಾಪ್ರಭುತ್ವ ಸುಭದ್ರವಾಗಿರಬೇಕೆಂದರೆ ಪ್ರಜೆಗಳು ಪ್ರಜ್ಞಾವಂತರಾಗಬೇಕು. ಪ್ರತಿಯೊಬ್ಬ ನಾಗರಿಕ ಕಾನೂನಿನ ಅರಿವು ಪಡೆದುಕೊಂಡರೆ ಕಾನೂನು ವ್ಯವಸ್ಥೆ ಸುಸ್ಥಿರವಾಗಿರುತ್ತದೆ ಎಂದು ಹೇಳಿದರು.

ರಾಜಿ ಸಂಧಾನದ ಮೂಲಕ ಇತ್ಯರ್ಥ: ಲೋಕ್‌ ಅದಾಲತ್‌ನಲ್ಲಿ ಕ್ರಿಮಿನಲ್‌, ರಾಜಿ ಆಗಬಹುದಾದ ಕೇಸು, ಚೆಕ್‌ ಅಮಾನ್ಯ, ಬ್ಯಾಂಕ್‌ ಸಾಲ ವಸೂಲಾತಿ ಕೇಸು, ಮೋಟರ್‌ ವಾಹನ ಅಪಘಾತ, ಕಾರ್ಮಿಕರ ಪ್ರಕರಣಗಳು, ವಿದ್ಯುತ್‌ ಕಳ್ಳತನ, ಮರಳು ಕಳ್ಳತನ, ವೈವಾಹಿಕ ಪ್ರಕರಣ, ಸಿವಿಲ್‌ ದಾವೆ, ಜನನ ಮತ್ತು ಮರಣ ನೋಂದಣಿ ಪ್ರಕರಣಗಳು, ವ್ಯಾಜ್ಯ ಪೂರ್ವ ಪ್ರಕರಣಗಳಾದ ವಿದ್ಯುತ್‌, ನೀರು, ಬಿಎಸ್‌ಎನ್‌ಎಲ್‌ ಬಿಲ್‌ ಪಾವತಿ ಪ್ರಕರಣಗಳನ್ನು ರಾಜಿ ಮಾಡಲಾಗುವುದು ಎಂದು ತಿಳಿಸಿದರು.

ರಾಜಿ ಆಗಬಹುದಾದ 6320 ಕೇಸು: ಕೋಲಾರ ಜಿಲ್ಲೆಯಲ್ಲಿ 30 ನ್ಯಾಯಾಲಯಗಳಿದ್ದು ಒಟ್ಟು 40,106 ಪ್ರಕರಣಗಳಿವೆ. ಅವುಗಳಲ್ಲಿ ಸಿವಿಲ್‌ 23,405, ಕ್ರಿಮಿನಲ್‌ 16,701 ಪ್ರಕರಣಗಳಿವೆ. ಕ್ರಿಮಿನಲ್‌ ಪ್ರಕರಣಗಳಲ್ಲಿ ರಾಜಿಯಾಗಬಹುದಾದ ಒಟ್ಟು 685 ಪ್ರಕರಣಗಳು, 5160 ಚೆಕ್‌ ಅಮಾನ್ಯ, 637 ಮೋಟರ್‌ ವಾಹನ ಅಪಘಾತ ಮತ್ತು 5037 ವಿಭಾಗದ ದಾವೆ ಪ್ರಕರಣಗಳಿವೆ. ಅವುಗಳಲ್ಲಿ 6320 ಪ್ರಕರಣಗಳು ರಾಜಿಯಾಗಬಹುದು ಎಂದು ಅವರು ತಿಳಿಸಿದರು.‌

ಇದನ್ನೂ ಓದಿ:- ಅಹಿಂಸೆಯಿಂದಲೇ ದೇಶಕ್ಕೆ ಸ್ವಾತಂತ್ರ್ಯ ಬಂದಿಲ್ಲ;ಕಂಗನಾ ಟೀಕೆಗೆ ನೇತಾಜಿ ಪುತ್ರಿ ಹೇಳಿದ್ದೇನು

ಅದಾಲತ್‌ನ ಉಪಯೋಗ ಪಡೆಯಿರಿ: ಲೋಕ್‌ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಎರಡು ಪಕ್ಷಗಾರರು ನೆಮ್ಮದಿಯಿಂದ ಜೀವನ ಮಾಡಬಹುದು. ನ್ಯಾಯಾಲಯದ ಶುಲ್ಕವನ್ನೂ ಪಕ್ಷಗಾರರಿಗೆ ವಾಪಸ್‌ ನೀಡಲಾಗುವುದು. ಆದ್ದರಿಂದ ಜಿಲ್ಲೆಯ ಎಲ್ಲಾ ಕೋರ್ಟ್ ಗಳಲ್ಲಿ ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್‌.ಗಂಗಾಧರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.