ಎಡಮಂಗಲ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ನಾಯಿ; ಸಹ ಸವಾರ ಸಾವು
Team Udayavani, Nov 17, 2021, 5:09 PM IST
ಕಾಣಿಯೂರು: ನಾಯಿಯೊಂದು ದ್ವಿಚಕ್ರ ವಾಹನಕ್ಕೆ ಅಡ್ಡಬಂದ ಪರಿಣಾಮ ಬೈಕಿನ ಹಿಂಬದಿ ಕೂತಿದ್ದ ಸಹ ಸವಾರ ಬಿದ್ದು ಮೃತಪಟ್ಟ ಘಟನೆ ಚಾರ್ವಾಕ-ಎಡಮಂಗಲ ರಸ್ತೆಯಲ್ಲಿ ಬುಧವಾರ ನಡೆದಿದೆ.
ಸುರೇಶ (53) ಮೃತ ದುರ್ಧೈವಿ ಎಂದು ತಿಳಿದು ಬಂದಿದೆ.
ಘಟನೆಯ ವಿವರ:
ಕಡಬ ತಾಲೂಕು ಎಡಮಂಗಲ ಗ್ರಾಮದ ಎಡಮಂಗಲ-ಚಾರ್ವಕ ರಸ್ತೆಯಲ್ಲಿ ಎಡಮಂಗಲದಿಂದ ಕೊಳಂಬೆ ಎಂಬಲ್ಲಿಗೆ ರಬ್ಬರ್ ಟ್ಯಾಪಿಂಗ್ ವೃತ್ತಿ ಮಾಡುವ ಸಲುವಾಗಿ ಸಂತೋಷ್ ಎಂಬವರು ಅವರ ಅಣ್ಣ ಸುರೇಶ್ ಎಂಬವರನ್ನು ಸಹ ಸವಾರನನ್ನಾಗಿ ಕುಳ್ಳಿರಿಸಿಕೊಂಡು ಸವಾರಿ ಮಾಡುತ್ತಿದ್ದ ಬೈಕಿಗೆ ರಸ್ತೆ ಮಧ್ಯ ಏಕಾಏಕಿ ನಾಯಿಯೊಂದು ಅಡ್ಡ ಬಂದಿದೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಹಿಂಬದಿ ಕೂತಿದ್ದ ಸುರೇಶ್ ಅವರು ರಸ್ತೆಗೆ ಮಗುಚಿ ಬಿದ್ದಿದ್ದಾರೆ. ತಲೆಗೆ ಗಂಭೀರವಾದ ಪೆಟ್ಟಾದ ಕಾರಣ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.