ಮಾಂಸದ ಅಂಗಡಿ ತೆರವಿಗೆ ಆಗ್ರಹಿಸಿ ಧರಣಿ
ಈ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.
Team Udayavani, Nov 17, 2021, 5:41 PM IST
ಜೇವರ್ಗಿ: ಪಟ್ಟಣದ ಬುಟ್ನಾಳ ರಸ್ತೆಯಲ್ಲಿರುವ ಮಾಂಸದ ಅಂಗಡಿಗಳನ್ನು ಕೂಡಲೇ ತೆರವುಗೊಳಿಸಬೇಕು ಹಾಗೂ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಆಗ್ರಹಿಸಿ ಶ್ರೀರಾಮಸೇನೆ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಪಟ್ಟಣದಲ್ಲಿ ಎಲ್ಲೆಂದರಲ್ಲಿ ದನ, ಕುರಿ, ಕೋಳಿ ಮಾಂಸದ ಅಂಗಡಿಗಳು ತಲೆ ಎತ್ತುತ್ತಿವೆ. ಇದರಿಂದ ಪಟ್ಟಣದಲ್ಲಿ ವಾತಾವರಣ ಕಲುಷಿತಗೊಳ್ಳುತ್ತಿದೆ.
ಪರವಾನಗಿ ನೀಡಿದ ಮಳಿಗೆಗಳಲ್ಲಿ ಮಾರಾಟ ಮಾಡುವುದನ್ನು ಬಿಟ್ಟು ಎಲ್ಲೆಂದರಲ್ಲಿ ಅಂದರೆ ತಳ್ಳುವ ಗಾಡಿಗಳ ಮೂಲಕ ಮಾಂಸ ಮಾರಾಟ ಮಾಡಲಾಗುತ್ತಿದೆ. ಸಂಬಂಧಪಟ್ಟವರು ಈ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.
ಮದರಿ, ಯನಗುಂಟಿ, ನರಿಬೋಳ ಸೇರಿದಂತೆ ವಿವಿಧ ಕಡೆ ಅಕ್ರಮ ಮರಳು ಸಾಗಿಸುವರ ವಿರುದ್ಧ ಸಹಾಯಕ ಆಯುಕ್ತರ ಆದೇಶದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಆಂದೋಲಾ-ಕೆಲ್ಲೂರ ರಸ್ತೆ ಕಾಮಗಾರಿ ನಡೆದ ಎರಡು ತಿಂಗಳಲ್ಲಿಯೇ ಹಾಳಾಗಿದ್ದು, ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಆಂದೋಲಾ ಗ್ರಾಮದ ಕರುಣೇಶ್ವರ ಮಠದ ಆವರಣದ ಮೇಲೆ ಹಾಯ್ದು ಹೋಗಿರುವ ಹೈಟೆನ್ಶನ್ ವಿದ್ಯುತ್ ತಂತಿ ಸ್ಥಳಾಂತರ ಮಾಡಬೇಕು.
ದೇವದುರ್ಗದಿಂದ ಜೇವರ್ಗಿ ಪಟ್ಟಣದ ಮೂಲಕ ಸಾಗುವ ಮರಳು ಟಿಪ್ಪರ್ ವಾಹನಗಳ ವೇಗದ ಮಿತಿಗೆ ಕಡಿವಾಣ ಹಾಕಬೇಕು. ಫಿರೋಜಾಬಾದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಟ ತಡೆಗಟ್ಟಬೇಕು ಎಂಬಿತ್ಯಾ ದಿ ಬೇಡಿಕೆಗಳಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ.
ಧರಣಿ ಸ್ಥಳಕ್ಕೆ ತಹಶೀಲ್ದಾರ್ ವಿನಯಕುಮಾರ ಪಾಟೀಲ, ಲೋಕೋಪಯೋಗಿ ಇಲಾಖೆ ಎಇಇ ಮುರುಳಿಧರರಾವ್ ಹಂಚಾಟೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಜಿಲ್ಲಾ ಅಧಿಕಾರಿ ಮೋಹನಕುಮಾರ, ಪಿಎಸ್‌ಐ ಸಂಗಮೇಶ ಅಂಗಡಿ ಭೇಟಿ ನೀಡಿ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.
ಧರಣಿಯಲ್ಲಿ ಶ್ರೀರಾಮಸೇನೆಯ ಈಶ್ವರ ಹಿಪ್ಪರಗಿ, ತಾಲೂಕು ಘಟಕದ ಅಧ್ಯಕ್ಷ ನಿಂಗಣ್ಣಗೌಡ ಮಾಲಿಪಾಟೀಲ ರಾಸಣಗಿ, ಮಲ್ಲಣಗೌಡ ಮಾಲಿಪಾಟೀಲ, ಶರಣಪ್ಪ ರೆಡ್ಡಿ ಲಖಣಾಪುರ, ಕಿರಣ ಪಾಟೀಲ ಚನ್ನೂರ, ವಿಶ್ವ ಪಾಟೀಲ ಹಳ್ಳಿ, ಸುನೀಲ ಗುತ್ತೇದಾರ, ನಾಗರಾಜ ಮಾಲಿಪಾಟೀಲ, ಚೇತನ ಗುತ್ತೇದಾರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.