ಜನಪ್ರತಿನಿಧಿಗಳ ಕ್ರಿಮಿನಲ್ ಕೇಸ್ ವಾಪಸ್: ಮಾಹಿತಿ ಕೇಳಿದ ಹೈಕೋರ್ಟ್
Team Udayavani, Nov 18, 2021, 4:49 AM IST
ಬೆಂಗಳೂರು: ರಾಜ್ಯದ ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ವಿರುದ್ಧ ದಾಖ ಲಾದ ಕ್ರಿಮಿನಲ್ ಪ್ರಕರಣಗಳಲ್ಲಿ 2020ರ ಸೆ.16ರ ಬಳಿಕ ಹಿಂಪಡೆಯಲಾದ ಪ್ರಕರಣಗಳ ಮಾಹಿತಿಯನ್ನು ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ಮತ್ತು ಮ್ಯಾಜಿಸ್ಟ್ರೇಟ್ ಕೋರ್ಟ್‌ನಿಂದ ತರಿಸಿಕೊಳ್ಳುವಂತೆ ರಿಜಿಸ್ಟ್ರಾರ್ ಜನರಲ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿರುವ ಹಾಗೂ ಪ್ರಕರಣಗಳ ವಿಚಾರಣೆಯ ಮೇಲ್ವಿಚಾರಣೆ ವಹಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ವಿಚಾರಣೆಯನ್ನು 2022ರ ಜ.17ಕ್ಕೆ ಮುಂದೂಡಲಾಯಿತು.
ಇದನ್ನೂ ಓದಿ:ಕಾಂಗ್ರೆಸ್ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ: ಜೆಪಿ ನಡ್ಡಾ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.