ಮರಳಿನ ಸಮಸ್ಯೆ ಪರಿಹರಿಸುವಂತೆ ಆಗ್ರಹ: ಘೋಟ್ನೇಕರ
Team Udayavani, Nov 18, 2021, 10:15 AM IST
ದಾಂಡೇಲಿ: ದಾಂಡೇಲಿ, ಹಳಿಯಾಳ ತಾಲೂಕಿನಲ್ಲಿ ಮರಳಿನ ಸಮಸ್ಯೆ ತೀವ್ರವಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಸರಕಾರಿ ಹಾಗೂ ಖಾಸಗಿ ಕಟ್ಟಡ ನಿರ್ಮಾಣ ಕಾರ್ಯಗಳನ್ನು ನಡೆಸಲು ಕಷ್ಟವಾಗಿದೆ. ಮಳೆಗಾಲದ ಸಂದರ್ಭದಲ್ಲಿ ನದಿಯಿಂದ ಹೊರಬರುವ ಮರಳನ್ನು ತೆಗೆಯಲು ಸಹ ಅನುಮತಿ ನೀಡಲಾಗುತ್ತಿಲ್ಲ. ಸೂಪಾ ಅಣೆಕಟ್ಟಿಗಾಗಿ ತಮ್ಮ ಭೂಮಿಯನ್ನೆ ಕಳೆದುಕೊಂಡ ರಾಮನಗರದ ಜನತೆ ಕಷ್ಟದಲ್ಲಿದ್ದಾರೆ. ಕೂಡಲೆ ಮರಳಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೇಕರ ಅವರು ಬುಧವಾರ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮದ ಮೂಲಕ ರಾಜ್ಯ ಸರಕಾರವನ್ನು ಆಗ್ರಹಿಸಿದರು.
ಇದನ್ನೂ ಓದಿ:ಕೇಂದ್ರ ಸರ್ಕಾರವು ಉಗ್ರರ ಹೆಸರಿನಲ್ಲಿ ನಾಗರಿಕರನ್ನು ಕೊಲ್ಲುತ್ತಿದೆ: ಮೆಹಬೂಬಾ ಮುಫ್ತಿ
ಮರಳಿನ ಸಮಸ್ಯೆಯ ಬಗ್ಗೆ ನಾನು ಈಗಾಗಲೆ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದಿದ್ದೇನೆ. ಮರಳಿನ ಸಮಸ್ಯೆ ಪರಿಹರಿಸುವಂತೆ ಹೋರಾಟ ಮಾಡಿದ್ದೇನೆ. ನಾಡಿಗೆ ಬೆಳಕನ್ನು ನೀಡಲು ತಮ್ಮ ಫಲವತ್ತನೆಯ ಭೂಮಿಯನ್ನೆ ಕಳೆದುಕೊಂಡ ರಾಮನಗರದ ಜನತೆಯ ಬದುಕಿನಲ್ಲಿ ಕತ್ತಲೆ ಆವರಿಸಿದೆ. ಅವರ ಬದುಕಿನಲ್ಲಿಯೂ ಬೆಳಕನ್ನು ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ರೀತಿಯ ಕ್ರಮವನ್ನು ಕೈಗೊಂಡು ಮರಳಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್ಗೆ ಮರು ಮನವಿ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.