ಟಿ20 ಪಂದ್ಯದ ವೇಳೆ ಸಿರಾಜ್ ತಲೆಗೆ ಹೊಡೆದ ನಾಯಕ ರೋಹಿತ್: ವಿಡಿಯೋ ವೈರಲ್
Team Udayavani, Nov 18, 2021, 10:29 AM IST
ಜೈಪುರ: ಇಲ್ಲಿನ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿತು. ಐದು ವಿಕೆಟ್ ಅಂತರದಿಂದ ಪಂದ್ಯ ಗೆದ್ದ ಭಾರತ ತಂಡ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿತು.
ಬೌಲಿಂಗ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್ ಮತ್ತು ಬ್ಯಾಟಂಗ್ ನಲ್ಲಿ ಸೂರ್ಯಕುಮಾರ್ ಯಾದವ್ ಭಾರತಕ್ಕೆ ನೆರವಾದರು. ಪೂರ್ಣಪ್ರಮಾಣದ ನಾಯಕನಾಗಿ ಮೊದಲ ಪಂದ್ಯವಾಡಿದ ರೋಹಿತ್ ಶರ್ಮಾ ಕೂಡಾ ಉತ್ತಮ ಆಟವಾಡಿದರು.
ಬ್ಯಾಟಿಂಗಿಗೆ ಇಳಿಸಲ್ಪಟ್ಟ ನ್ಯೂಜಿಲ್ಯಾಂಡ್ ಮಾರ್ಟಿನ್ ಗಪ್ಟಿಲ್, ಮಾರ್ಕ್ ಚಾಪ್ಮನ್ ಅವರ ಅರ್ಧ ಶತಕಗಳ ನೆರವಿನಿಂದ 6 ವಿಕೆಟಿಗೆ 164 ರನ್ ಗಳಿಸಿತು. ಗುರಿ ಬೆನ್ನತ್ತಿದ ಭಾರತ 19.4 ಓವರ್ಗಳಲ್ಲಿ 5 ವಿಕೆಟಿಗೆ 166 ರನ್ ಬಾರಿಸಿತು. ಸೂರ್ಯಕುಮಾರ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಇದನ್ನೂ ಓದಿ:ನ್ಯೂಜಿಲ್ಯಾಂಡ್ ಆಟಗಾರ ರಚಿನ್ ರವೀಂದ್ರ ಹೆಸರಿನ ಹಿಂದಿದೆ ರಾಹುಲ್-ಸಚಿನ್ ಅಭಿಮಾನದ ಗುಟ್ಟು
ಆದರೆ ಭಾರತದ ಬ್ಯಾಟಿಂಗ್ ವೇಳೆ ಡಗೌಟ್ ನಲ್ಲಿ ರೋಹಿತ್ ಶರ್ಮಾ ಅವರು ತನ್ನೆದುರು ಕುಳಿತಿದ್ದ ಮೊಹಮ್ಮದ್ ಸಿರಾಜ್ ಗೆ ಹೊಡೆದರು. ರೋಹಿತ್ ಶರ್ಮಾ, ಕೆ.ಎಲ್.ರಾಹುಲ್ ಮತ್ತು ಮೊಹಮ್ಮದ್ ಸಿರಾಜ್ ಒಟ್ಟಿಗೆ ಕುಳಿತಿದ್ದರು. ಈ ವೇಳೆ ರೋಹಿತ್ ತಮಾಷೆಯಿಂದ ಸಿರಾಜ್ ತಲೆಗೆ ಹೊಡೆದರು. ಸಿರಾಜ್ ಕೂಡಾ ಇದಕ್ಕೆ ನಕ್ಕರು.
why tf is he beating him? ? pic.twitter.com/icrWJiVJSP
— ? (@kyakarungimain) November 17, 2021
ಈ ವಿಡಿಯೋ ಇದೀಗ ವೈರಲ್ ಆಗಿದೆ. ಅಭಿಮಾನಿಗಳು ವಿವಿಧ ರೀತಿಯಲ್ಲಿ ಇದರ ಬಗ್ಗೆ ಕಮೆಂಟ್ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Perth test: ಜೈಸ್ವಾಲ್, ವಿರಾಟ್ ಶತಕ; ಆಸೀಸ್ ಗೆ ಭಾರೀ ಗುರಿ ನೀಡಿದ ಭಾರತ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.