ಸಿದ್ದರಾಮಯ್ಯನವರೇ ನಿಮ್ಮ ಆರೋಪವನ್ನು ಸಾಬೀತುಪಡಿಸಿ: ಶಾಸಕ ರಾಜೀವ್
Team Udayavani, Nov 18, 2021, 12:56 PM IST
ಬೆಂಗಳೂರು: ಡ್ರಗ್ಸ್ ಹಾಗೂ ಬಿಟ್ ಕಾಯಿನ್‌ನಲ್ಲಿ ಪ್ರಭಾವಿ ರಾಜಕಾರಣಿ ಮಕ್ಕಳಿದ್ದಾರೆಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಅವರ ಹೇಳಿಕೆ ಯಾರೂ ಹಗುರವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಆ ಆರೋಪವನ್ನು ಸಾಬೀತುಪಡಿಸಲು ಸಿದ್ದರಾಮಯ್ಯಗೆ ಸಾಧ್ಯವಿದೆಯೇ ಎಂದು ಕುಡುಚಿ ಶಾಸಕ ರಾಜೀವ್ ಪ್ರಶ್ನಿಸಿದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಎಲ್ಲಾ ಪಕ್ಷದ ರಾಜಕಾರಣಿಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದರು. ತನಿಖಾ ಸಂಸ್ಥೆ ವರದಿ ಬಂದಿದೆ ಎಂದು ಹೇಳಿದ್ದೀರಿ. ಯಾವ ನ್ಯಾಯಾಲಯ, ಯಾವ ಸಂಸ್ಥೆ, ಯಾವ ತನಿಖಾ ಸಂಸ್ಥೆ ವರದಿ ನೀಡಿದೆ ಹೇಳಿ? ನೀವು ಹೇಳಿದ ಹೇಳಿಕೆ ಎಲ್ಲಾ ಪಕ್ಷದ ಸದಸ್ಯರು ಮೇಲೆ ‘ನಾನಲ್ಲ’ ಅಂತ ಹೇಳಬೇಕಾದ ಪರಿಸ್ಥಿತಿ ಇದೆ. ಈಗ ಸಿದ್ದರಾಮಯ್ಯ ಅವರೇ ಯಾರಿದ್ದಾರೆ ಅಂತ ಸ್ಪಷ್ಟಪಡಿಸಬೇಕಿದೆ ಎಂದರು.
ಹಾವಿದೆ ಹಾವಿದೆ ಅಂತ ಕಾಂಗ್ರೆಸ್ ನವರು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಬುಟ್ಟಿ ತೋರಿಸಿದ್ದೇ ತೋರಿಸಿದ್ದು, ಪ್ರಿಯಾಂಕ್ ಖರ್ಗೆ ಪುಂಗಿ ಊದಿದ್ದೇ ಊದಿದ್ದು. ಯಾವ ಹಾವೂ ಕೂಡ ಹೊರಗೆ ಬರಲಿಲ್ಲ. ನಿಮ್ಮಂತಹ ಮುತ್ಸದ್ದಿ ರಾಜಕಾರಣಿ ಈ ರೀತಿ ಹೇಳಿಕೆ ನೀಡಬಾರದು. ನಿಮ್ಮ ಟ್ವೀಟನ್ನು ವಾಪಸ್ ಪಡೆಯಬೇಕು. ಅಪರಾಧಗಳ ಬಗ್ಗೆ ಕ್ರಮ ಕೈಗೊಳ್ಳೋದು ನಮ್ಮ ಬಿಜೆಪಿ ಪಕ್ಷದ ಬದ್ದತೆ ಎಂದ ರಾಜೀವ್, ಪ್ರಿಯಾಂಕ್ ಖರ್ಗೆ ಹೇಳಿಕೆಯನ್ನು ನಾನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದರು.
ಪ್ರಿಯಾಂಕ್ ಖರ್ಗೆ ಈ ಪ್ರಕರಣಲ್ಲಿ ನಗೆಪಾಟಲಿಗೆ ಈಡಾಗಿದ್ದಾರೆ. ಚಾರ್ಜ್ ಶೀಟ್‌ನ 93ನೇ ಪುಟದಲ್ಲಿನ ಅಂಶ ಅವರಿಗೆ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಕ್ರಿಪ್ಟೋ ಕರೆನ್ಸಿ ಪೊಲೀಸ್ ಇಲಾಖೆಗೆ ವರ್ಗಾವಣೆ ಆಗುತ್ತದೆ. ಪೊಲೀಸ್ ಅಕೌಂಟಿಗೆ ಹೋದ ಹಣ, ಅವನ ಅಕೌಂಟ್‌ನಲ್ಲಿ ಜೀರೋ ಆಗಿರುತ್ತದೆ ಎಂದರು.
ಇದನ್ನೂ ಓದಿ:ಸುಳ್ಳು ಮತ್ತು ಮೋಸ ಕಾಂಗ್ರೆಸ್ ರಕ್ತದಲ್ಲೇ ಇದೆ: ನಳಿನ್ ಕುಮಾರ್ ಕಟೀಲ್
18-2- 2018ರಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗುತ್ತದೆ. ಶ್ರೀಕಿಯನ್ನು ಅಂದು ಬಂಧನ ಮಾಡಿದರೆ ಅಪರಾಧವನ್ನು ತಡೆಯಬಹುದಿತ್ತು. ಇದು ಕಾಂಗ್ರೆಸ್ ಸರ್ಕಾರದ ಬಹು ದೊಡ್ಡ ವೈಫಲ್ಯ. ಚಾರ್ಜ್ ಶೀಟ್ ತಯಾರಿಸಿ ಪರಾರಿ ಎಂದು ತೋರಿಸಿದರು. ಶ್ರೀಕಿಗೆ ನ್ಯಾಯಾಲಯ ಕಂಡೀಷನ್ ಬೇಲ್ ಕೊಡುತ್ತದೆ. ಜಾಮೀನು ತಗೊಂಡು ಬಂದ ಬಳಿಕ ಪೊಲೀಸರ ಮುಂದೆ ಶರಣಾಗಬೇಕು. ಕರೆದಾಗ ತನಿಖಾ ಸಂಸ್ಥೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಇದ್ದದ್ದು ಕೇವಲ 20 ನಿಮಿಷ ಮಾತ್ರ. ಅಂದು ಆತನ ಸ್ವಇಚ್ಚಾ ಹೇಳಿಕೆ ಪಡೆದಿದ್ದರೆ ಅವನ ದಾಖಲೆ ಸಿಗುತ್ತಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.