ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ಕಾಂಗ್ರೆಸ್ ನಲ್ಲಿ ನಾಯಕರೇ ಇಲ್ಲ: ಶೆಟ್ಟರ್
Team Udayavani, Nov 18, 2021, 3:00 PM IST
ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಮುಖ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ನಲ್ಲಿ ಪರ್ಯಾಯ ನಾಯಕರೇ ಇಲ್ಲ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟೀಕಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಕಳೆದ ಏಳು ವರ್ಷದಲ್ಲಿ ದೇಶದ ರಾಜಕೀಯ ಕ್ಷೇತ್ರದಲ್ಲಿ ಹೊಸ ಬದಲಾವಣೆ ಆಗಿದೆ. ಯಾವುದೇ ಭ್ರಷ್ಟಾಚಾರ ಇಲ್ಲದೆ ಪಾರದರ್ಶಿಕ, ಪ್ರಾಮಾಣಿಕ ಆಡಳಿತ ನೀಡುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಸಮೀಕ್ಷೆ ಪ್ರಕಾರವೂ ನಂಬರ್ ಒನ್ ನಾಯಕರಾಗಿದ್ದಾರೆ. ಅಂತಹವರಿಗೆ ಪರ್ಯಾಯ ನಾಯಕರೇ ಇಲ್ಲದಂತಹ ಪರಿಸ್ಥಿತಿ ಕಾಂಗ್ರೆಸ್‌ನಲ್ಲಿ ಇದೆ ಎಂದರು.
135 ಕೋಟಿ ಜನಸಂಖ್ಯೆ ಹೊಂದಿರುವಂತಹ ಭಾರತದಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ನೀಡುವಂತಹ ದಿಟ್ಟ ನಿರ್ಧಾರವನ್ನ ಪ್ರಧಾನಿ ಮೋದಿಯವರು ಕೈಗೊಂಡಿರುವ ಪರಿಣಾಮ ಜನರಲ್ಲಿ ಈಗ ಸುರಕ್ಷಿತ ಭಾವನೆ ಇದೆ. ಧೈರ್ಯದಿಂದ ಇದ್ದಾರೆ. ಲಸಿಕೆಯ ಪ್ರಾರಂಭಿಕ ಹಂತದಲ್ಲಿ ರಾಜ್ಯ ಸರ್ಕಾರ ಹಿಂದೇಟು ಹಾಕಿದ್ದುಂಟು. ಒಂದು ಲಸಿಕೆಗೆ 800 ರೂ. ರಿಂದ ಒಂದು ಸಾವಿರ ಆಗುತ್ತದೆ. ಲಕ್ಷಾಂತರ ಕೋಟಿ ರೂಪಾಯಿ ಬೇಕಾಗುವ ಸಂದರ್ಭದಲ್ಲಿ ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ನೀಡುವ ದಿಟ್ಟ ನಿರ್ಧಾರ ಕೈಗೊಂಡಿತು. ರಾಜ್ಯದಲ್ಲೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದ ಕೋವಿಡ್ ನಿಯಂತ್ರಣದಲ್ಲಿದೆ. ಕೇಂದ್ರ ಸರ್ಕಾರವೂ ರಾಜ್ಯದ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ತಿಳಿಸಿದರು.
ಇದನ್ನೂ ಓದಿ:ರಾಜಸ್ಥಾನ; ವಿವಾಹವಾಗುವುದಾಗಿ ಭರವಸೆ ನೀಡಿ ಇಬ್ಬರ ಮೇಲೆ ಅತ್ಯಾಚಾರ ಎಸಗಿದ ಬಿಜೆಪಿ ಶಾಸಕ
ನಾಯಕತ್ವದ ಕೊರತೆಯಿಲ್ಲ: ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕೊರತೆಯೇ ಇಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಕ್ಷದ ಹಿರಿಯ ನಾಯಕರು. ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿದ ನಂತರದಲ್ಲಿ ರಾಜ್ಯ ಬಿಜೆಪಿಯ ನಾಯಕತ್ವದಲ್ಲಿ ನಿರ್ವಾತ ವಾತಾವರಣ ನಿರ್ಮಾಣ ಆಗಿಯೇ ಇಲ್ಲ. ನಮ್ಮಲ್ಲಿ ನಾಯಕತ್ವದ ಕೊರತೆಯೇ ಇಲ್ಲ ಎಂದು ಜಗದೀಶ್ ಶೆಟ್ಟರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಸವರಾಜ ಬೊಮ್ಮಾಯಿಯವರ ಸಂಪುಟದಲ್ಲಿ ನಾನು ಸಚಿವನಾಗಿಲ್ಲ ಎಂಬ ವಿಷಯ ಬಹಳ ಹಳೆಯದು. ಮಾಜಿ ಮುಖ್ಯಮಂತ್ರಿಯಾಗಿರುವ ತಮಗೆ ಜನಸ್ವರಾಜ್ ಸಮಾವೇಶದ ಮೂಲಕ ಸಂಘಟನೆ, ಪಕ್ಷ ಕಟ್ಟುವ ಗುರುತರ ಜವಾಬ್ದಾರಿ ನೀಡಲಾಗಿದೆ. ಅದಕ್ಕಿಂತಲೂ ಇನ್ನೇನು ಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.