ಮಕ್ಕಳ ಸಮಸ್ಯೆ ಪರಿಹಾರಕ್ಕೆ ಕ್ರಮ

ಮೊಬೈಲ್‌ ಗೇಮಿಂಗ್‌ ಗೀಳು ಬೆಳೆಸಿಕೊಂಡು ಸಮಯವನ್ನು ವ್ಯರ್ಥ ಮಾಡಿದ್ದಾರೆ.

Team Udayavani, Nov 18, 2021, 6:15 PM IST

ಮಕ್ಕಳ ಸಮಸ್ಯೆ ಪರಿಹಾರಕ್ಕೆ ಕ್ರಮ

ಗದಗ: ಕೋವಿಡ್‌-19 ಅವಧಿಯಲ್ಲಿ ಶಾಲಾ ಕಾಲೇಜುಗಳು ಸ್ಥಗಿತಗೊಂಡಿದ್ದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿ ಮಕ್ಕಳು ಹಲವಾರು ಸಮಸ್ಯೆಗಳನ್ನು ಎದುರಿಸಿದ್ದಾರೆ. ಅಂತಹ ಸಮಸ್ಯೆಗಳನ್ನು ಕ್ರೋಢೀಕರಿಸಿ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಚ್‌.ಸಿ. ರಾಘವೇಂದ್ರ ಹೇಳಿದರು.

ಜಿಪಂ ಸಭಾಂಗಣದಲ್ಲಿ ಜಿಪಂ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ನಡೆದ ಕೋವಿಡ್‌-19 ಅವಧಿಯಲ್ಲಿ ಮಕ್ಕಳ ಮೇಲಿನ ದುಷ್ಪರಿಣಾಮಗಳ ಕುರಿತು ಜಿಲ್ಲಾಮಟ್ಟದ ಮಕ್ಕಳ ಸಾರ್ವಜನಿಕ ಅಹವಾಲು ಸಭೆಯ ಪೂರ್ವ ಸಿದ್ಧತಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಕೋವಿಡ್‌-19ರಲ್ಲಿ ಮಕ್ಕಳ ಪರಿಸ್ಥಿತಿ ಹಾಗೂ ಮಕ್ಕಳು ಅನುಭವಿಸಿರುವ ಸಮಸ್ಯೆಗಳನ್ನು ಪಟ್ಟಿ ಮಾಡಿ ಅವುಗಳಿಗೆ ಸೂಕ್ತವಾದ ಪರಿಹಾರೋಪಾಯ ಕಂಡುಕೊಳ್ಳಲು ಈ ಸಭೆ ಏರ್ಪಡಿಸಲಾಗಿದೆ ಎಂದರು. ಡಿವೈಎಸ್‌ಪಿ ವಿಜಯ್‌ ಬಿರಾದಾರ ಮಾತನಾಡಿ, ಮಕ್ಕಳು ಪಾಠದಿಂದ ದೂರವಾಗಬಾರದೆಂಬ ಉದ್ದೇಶದಿಂದ ಸರ್ಕಾರ ಆನ್‌ಲೈನ್‌ ಪಾಠವನ್ನು ನಡೆಸಲು ಕ್ರಮ ವಹಿಸಿತ್ತು. ಆನ್‌ಲೈನ್‌ ಪಾಠದ ನೆಪದಲ್ಲಿ ಮಕ್ಕಳು ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲೇ ಕಳೆದಿದ್ದಾರೆ.

ಕೆಲ ವಿದ್ಯಾರ್ಥಿಗಳು ಮೊಬೈಲ್‌ ಗೇಮಿಂಗ್‌ ಗೀಳು ಬೆಳೆಸಿಕೊಂಡು ಸಮಯವನ್ನು ವ್ಯರ್ಥ ಮಾಡಿದ್ದಾರೆ. ಇದರಿಂದ ಮಕ್ಕಳ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಸಭೆಯಲ್ಲಿ ಜಿಲ್ಲೆಯ 55ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಕೇಂದ್ರೀಕೃತ ಗುಂಪು ಚರ್ಚೆ ಮೂಲಕ ತಮ್ಮ ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಕೋವಿಡ್‌ -19ರ ಸಂದರ್ಭದಲ್ಲಿ ಬಾಲ ಕಾರ್ಮಿಕತೆ, ಶೌಚಾಲಯ ಸಮಸ್ಯೆ, ಸರಿಯಾಗಿ ಮಕ್ಕಳು ಶಾಲೆಗೆ ಹಾಜರಾಗದಿರುವುದು, ಪಾಲಕರು ಅನುಭವಿಸಿದ ನಿರುದ್ಯೋಗ ಸಮಸ್ಯೆ, ಬಾಲ್ಯ ವಿವಾಹ, ಅನಕ್ಷರತೆ, ಆನ್‌ಲೈನ್‌ ಶಿಕ್ಷಣದ ನೆಪದಲ್ಲಿ ಮಕ್ಕಳು ಮೊಬೈಲ್‌ ದಾಸರಾಗಿದ್ದು, ಮಕ್ಕಳ ಭಿಕ್ಷಾಟನೆ, ಬಡತನ, ಬಾಲ್ಯ ವಿವಾಹಕ್ಕೆ ಪಾಲಕರ ಪ್ರಜೋದನೆ, ಪಾಲಕರು ಕುಡಿತಕ್ಕೆ ಕುಟುಂಬದ ಪರಿಸ್ಥಿತಿ ಬೀದಿಗೆ ಬಂದಿರುವುದು, ಶಾಲೆಗಳಲ್ಲಿ ವಿವಿಧ ಭಾಷಾ ಶಿಕ್ಷಕರ ಕೊರತೆ,
ಕೊಠಡಿಗಳ ಕೊರತೆ, ಕಂಪ್ಯೂಟರ್‌ ವ್ಯವಸ್ಥೆ ಇದ್ದರೂ ಸರಿಯಾದ ಶಿಕ್ಷಕರಿಲ್ಲದೇ ಕಂಪ್ಯೂಟರ್‌ ಶಿಕ್ಷಣದಿಂದ ವಂಚನೆ, ದೈಹಿಕ ಶಿಕ್ಷಕರ ಕೊರತೆ ಇತ್ಯಾದಿ ಕುರಿತು ಮಕ್ಕಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ ಬಮ್ಮನಕಟ್ಟಿ, ಪೊಲೀಸ್‌ ಇಲಾಖೆ ವಿಜಯ ಬಿರಾದಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವಲಿಂಗಪ್ಪ ಜಿ.ಎನ್‌., ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಎಚ್‌.ಎಸ್‌. ಜೋಗೇರ, ಅನುಪಮಾ ಹಿರೇಗೌಡ್ರ, ಪರಶುರಾಮ ನೀಲಗುಂದ, ರೂಪಾ ಉಪ್ಪಿನ, ಲಲಿತಾ, ಸವಿತಾ ಹರ್ಡಿ, ಮಲ್ಲನಗೌಡ್ರ, ಪ್ರವೀಣ ಬೆಟಗೇರಿ, ಲಕ್ಷ್ಮೀ ಬಾಗೇವಾಡಿ, ಆಸರೆ ಸಂಸ್ಥೆ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಶಿರಸಂಗಿ ಇದ್ದರು. ಮಲ್ಲಪ್ಪ ಹೊಸಳ್ಳಿ ನಿರೂಪಿಸಿದರು. ರಮೇಶ ಕಳ್ಳಿಮನಿ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

6-dandeli

Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.