ಕ್ರಿಪ್ಟೋ ನಿಯಂತ್ರಣಕ್ಕೆ ಅಂತಾರಾಷ್ಟ್ರೀಯ ಕಾನೂನು ಬೇಕು


Team Udayavani, Nov 19, 2021, 6:00 AM IST

ಕ್ರಿಪ್ಟೋ ನಿಯಂತ್ರಣಕ್ಕೆ ಅಂತಾರಾಷ್ಟ್ರೀಯ ಕಾನೂನು ಬೇಕು

ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಭಾರೀ ಸದ್ದು ಮಾಡುತ್ತಿರುವ ಕ್ರಿಪ್ಟೋ ಕರೆನ್ಸಿ ಈಗ ತೀವ್ರ ವಿವಾದಕ್ಕೆ ಸಿಲುಕಿದೆ. ತಂತ್ರಜ್ಞಾನ ಕ್ಷಿಪ್ರಗತಿಯಲ್ಲಿ ಪ್ರಗತಿ ಕಾಣುತ್ತಿರುವಂತೆಯೇ ಅದರ ಒಂದೊಂದೇ ಹುಳುಕುಗಳು ಹೊರಬರತೊಡಗಿದ್ದು ಆಡಳಿತ ವ್ಯವಸ್ಥೆಗೆ ಬಲು ದೊಡ್ಡ ಸವಾಲಾಗಿ ಪರಿಣಮಿಸಿವೆ. ಸದ್ಯ ಭಾರತದಲ್ಲಿ ಲಕ್ಷಾಂತರ ಮಂದಿ ಡಿಜಿಟಲ್‌ ಕರೆನ್ಸಿಯಲ್ಲಿ ಹೂಡಿಕೆ ಮಾಡಿದ್ದಾರೆ. ಕ್ರಿಪ್ಟೋ ಕರೆನ್ಸಿಯಾಗಿರುವ ಬಿಟ್‌ ಕಾಯಿನ್‌ ವ್ಯವಹಾರ ವರ್ಷದ ಅವಧಿಯಲ್ಲಿ ಅತ್ಯಂತ ಕ್ಷಿಪ್ರಗತಿಯಲ್ಲಿ ಪ್ರಗತಿ ಕಂಡ ಪರಿಣಾಮ ದೇಶ-ವಿದೇಶಗಳ ಹೂಡಿಕೆ ದಾರರು ಇದರಲ್ಲಿ ಹಣ ಹೂಡಿರುವರು. ಆದರೆ ಈ ವಹಿವಾಟಿನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮಗಳು ನಡೆಯುತ್ತಿರುವುದು ಬೆಳಕಿಗೆ ಬರುತ್ತಿರುವಂತೆಯೇ ವಹಿವಾಟಿನ ಸುರಕ್ಷೆಯ ಬಗೆಗೆ ಇದೀಗ ಭಾರೀ ಆತಂಕ ವ್ಯಕ್ತವಾಗತೊಡಗಿದೆ. ಅಷ್ಟು ಮಾತ್ರವಲ್ಲದೆ ಕ್ರಿಪ್ಟೋ ಕರೆನ್ಸಿಯನ್ನು ಅಕ್ರಮ ಹಣ ವರ್ಗಾವಣೆ, ಭಯೋತ್ಪಾದನೆಗೆ ಹಣಕಾಸು ನೆರವು, ಮಾದಕ ವಸ್ತು ಸರಬರಾಜು ಮತ್ತಿತರ ರಾಷ್ಟ್ರ ವಿರೋಧಿ ಚಟುವಟಿಕೆಗಳಿಗೆ ಬಳಕೆ ಮಾಡುತ್ತಿರುವುದು ಈಗ ಬಯಲಾಗಿದೆ.

ತನ್ನದೇ ಆದ ಕ್ರಿಪ್ಟೋ ಕರೆನ್ಸಿಯನ್ನು ಜಾರಿಗೆ ತರಲು ಕೇಂದ್ರ ನಿರ್ಧ ರಿಸಿತ್ತು. ಅನಂತರ ಆ ಪ್ರಸ್ತಾವ ಹಿನ್ನೆಲೆಗೆ ಸರಿದಿತ್ತು.  ತಿಂಗಳಿಂದೀಚೆಗೆ ದೇಶ ದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಬಿಟ್‌ ಕಾಯಿನ್‌ ಹಗರಣ ಭಾರೀ ಸದ್ದು ಮಾಡಲಾರಂಭಿಸಿದ ಬಳಿಕ ಮತ್ತೆ ಕ್ರಿಪ್ಟೋ ವಹಿವಾಟು ಬಗ್ಗೆ  ಚರ್ಚೆಗಳು ಪುನರಾರಂಭಗೊಂಡಿವೆ.

ಕ್ರಿಪ್ಟೋ ವಹಿವಾಟಿಗೆ ಸಂಪೂರ್ಣ ನಿಷೇಧ ಹೇರಬೇಕೆಂಬ ಬೇಡಿಕೆ ಕೇಳಿ ಬರುತ್ತಿದೆಯಾದರೂ ಈಗಾಗಲೇ ಹೂಡಿಕೆ ಮಾಡಿರುವವರು   ಆಕ್ಷೇಪ ವ್ಯಕ್ತಪಡಿಸಿ ಸರಕಾರದ ಮೇಲೆ ಒತ್ತಡ ಹೇರತೊಡಗಿದ್ದಾರೆ. ಇದರಿಂದ ತೀವ್ರ ಒತ್ತಡದಲ್ಲಿ ಸಿಲುಕಿರುವ ಕೇಂದ್ರ ಸದ್ಯ 2 ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ. ಖಾಸಗಿ ಕ್ರಿಪ್ಟೋಗೆ ಸಂಪೂರ್ಣ ನಿಷೇಧ ಹೇರಿ ತನ್ನದೇ ಆದ ಕರೆನ್ಸಿಯನ್ನು ಚಾಲ್ತಿಗೆ ತರುವುದು ಅಥವಾ ಕ್ರಿಪ್ಟೋ ಕರೆನ್ಸಿಯನ್ನು ಸಂಪೂರ್ಣವಾಗಿ ಸರಕಾರದ ಅಧೀನ ಸಂಸ್ಥೆಯ ನಿಯಂತ್ರಣಕ್ಕೆ ತಂದು ಅದನ್ನು ಪಾವತಿ ವ್ಯವಹಾರಗಳಿಗೆ ಬಳಸಲು ಅನುಮತಿ ನೀಡದೇ ಕೇವಲ ವಿಮೆ ಪಾಲಿಸಿಗಳು, ಚಿನ್ನ ಮತ್ತು ಷೇರುಗಳಲ್ಲಿ ಹೂಡಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲು ಚಿಂತನೆ ನಡೆಸಿದೆ. ಈ ಮೂಲಕ ಕ್ರಿಪ್ಟೋ ಕರೆನ್ಸಿಯನ್ನು ಬಂಡವಾಳ ಮಾದರಿ ಆಸ್ತಿಯನ್ನಾಗಿ ಪರಿಗಣಿಸಲು ಮುಂದಾಗಿದೆ. ಮುಂದಿನ ಸಂಸತ್‌ ಅಧಿವೇಶನದಲ್ಲಿ ಕ್ರಿಪ್ಟೋ ಕರೆನ್ಸಿ ವಹಿವಾಟು ನಿಯಂತ್ರಣ ಮಸೂದೆ ಮಂಡಿಸಲು ಸಿದ್ಧತೆ ನಡೆಸಿದ್ದು, ಆ ಬಳಿಕವಷ್ಟೇ ಸರಕಾರದ ನಿಲುವು ಸ್ಪಷ್ಟವಾಗಲಿದೆ.

ಕ್ರಿಪ್ಟೋ ವಹಿವಾಟುಗಳು ಜಾಗತಿಕ ಮಟ್ಟದಲ್ಲಿ ನಡೆಯುವುದರಿಂದ ಅದರಲ್ಲಿನ ಅಕ್ರಮ, ಹಗರಣಗಳಿಗೆ ಅಂತ್ಯ ಹಾಡಲು ಎಲ್ಲರೂ ಕೈಜೋಡಿಸಲೇಬೇಕಿದೆ. ದೇಶಕ್ಕೆ ಪ್ರತ್ಯೇಕ ಕಾನೂನು ಜಾರಿಗೊಳಿಸಿದರೂ ವಿದೇಶಗಳಲ್ಲಿ ಕ್ರಿಪ್ಟೋ ವ್ಯವಹಾರಕ್ಕೆ ಮಾನ್ಯತೆ ಇರುವುದರಿಂದ ಅಕ್ರಮ, ಹಗರಣಗಳಿಗೆ ಕಡಿವಾಣ ಕಷ್ಟಸಾಧ್ಯವಾಗಲಿದೆ. ಆದುದರಿಂದ ಜಾಗತಿಕ ಸಮುದಾಯ ಈ ವಿಚಾರದಲ್ಲಿ ಒಗ್ಗೂಡಿ ಅಂತಾರಾಷ್ಟ್ರೀಯ ಕಾನೂನು ಜಾರಿಗೊಳಿಸಬೇಕಿದೆ. ಪ್ರಧಾನಿ ಮೋದಿ ಅವರೂ ಇದೇ ಮಾತನ್ನು ಪ್ರತಿಪಾದಿಸಿದ್ದು ಪ್ರಜಾಪ್ರಭುತ್ವ ರಾಷ್ಟ್ರಗಳು ಈ ವಿಚಾರದಲ್ಲಿ ಒಟ್ಟಾಗಿ ಕೆಲಸ ಮಾಡಬೇಕಿದೆ ಎನ್ನುವ ಮೂಲಕ ಸಮಸ್ಯೆಯ ಗಂಭೀರತೆಯ ಬಗೆಗೆ ವಿಶ್ವ ನಾಯಕರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.