ಬಿಟ್‌ ಬಿಡದ ವಿವಾದ: ಬಿಜೆಪಿ-ಸಿದ್ದರಾಮಯ್ಯ ಟ್ವೀಟ್‌ ಸಮರ

Team Udayavani, Nov 19, 2021, 8:00 AM IST

ಬಿಟ್‌ ಬಿಡದ ವಿವಾದ: ಬಿಜೆಪಿ-ಸಿದ್ದರಾಮಯ್ಯ ಟ್ವೀಟ್‌ ಸಮರ

ಬೆಂಗಳೂರು/ಕೊಪ್ಪಳ,: ಬಿಟ್‌ ಕಾಯಿನ್‌ ವಿಚಾರವಾಗಿ ಬಿಜೆಪಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಟ್ವೀಟ್‌ ವಾರ್‌ ನಡೆದಿದೆ. ಬಿಜೆಪಿಯು ರಾಕೇಶ್‌ ಹೆಸರು ಪ್ರಸ್ತಾವಿಸಿದರೆ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಹೆಸರೆತ್ತಿದ್ದಾರೆ. ಬಿಜೆಪಿಯು ಸಿದ್ದರಾಮಯ್ಯ ಅವರ ಪುತ್ರ ರಾಕೇಶ್‌ ಜತೆ ಬಿಟ್‌ ಕಾಯಿನ್‌ ಪ್ರಕರಣದ ಆರೋಪಿ ಶ್ರೀಕಿಯ ಸ್ನೇಹಿತರು ಇರುವ ಚಿತ್ರವನ್ನು ಟ್ಯಾಗ್‌ ಮಾಡಿ ಪ್ರಶ್ನಿಸಿದ್ದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ನೀರವ್‌ ಮೋದಿ ಜತೆಗೆ ಪ್ರಧಾನಿ ಮೋದಿ ಇರುವ ಫೋಟೋವನ್ನು ಟ್ಯಾಗ್‌ ಮಾಡಿ ತಿರುಗೇಟು ನೀಡಿದ್ದಾರೆ.

ಶ್ರೀಕಷ್ಣನ ಜತೆ ಬಂಧನಕ್ಕೊಳಗಾದ ಹೇಮಂತ್‌ ಮುದ್ದಪ್ಪನ ಬಿಡುಗಡೆಗೆ ಪೊಲೀಸರ ಜತೆ ರಾಜ್ಯ ಬಿಜೆಪಿಯ ಪ್ರಮುಖ ನಾಯಕರೊಬ್ಬರು ಸಂಧಾನ ಮಾಡಿದ್ದಾರೆ. ಆ ನಾಯಕ ಯಾರೆಂದು ನಳಿನ್‌ ಕುಮಾರ್‌ ಕಟೀಲು ಅವರಿಗೆ ಗೊತ್ತಿರಬಹುದೇನೋ ಎಂದು ಹೊಸ “ಬಾಂಬ್‌’ ಹಾಕಿದ್ದಾರೆ.

ಸಿದ್ದರಾಮಯ್ಯ ಟ್ವೀಟ್‌:

ಸಿದ್ದರಾಮಯ್ಯ ತನ್ನ ಪುತ್ರನ ಪ್ರಸ್ತಾವ ಮಾಡಿದ್ದಕ್ಕೆ ತೀವ್ರ ಬೇಸರ ಹೊರಹಾಕಿ, ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಬಿಜೆಪಿ ಅಗಲಿ ಹೋಗಿರುವ ನನ್ನ ಮಗನ ಹೆಸರನ್ನು ಎಳೆದು ತಂದಿದೆ. ನಮ್ಮ ಸರಕಾರದ ಅವಧಿಯನ್ನೂ ಸೇರಿಸಿ ಬಿಟ್‌ ಕಾಯಿನ್‌ ಹಗರಣವನ್ನು ಸುಪ್ರೀಂಕೋರ್ಟ್‌ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇನೆ. ನನ್ನ ಮಗ ರಾಕೇಶ್‌ ನಮ್ಮನ್ನಗಲಿ ಐದು ವರ್ಷಗಳಾಗಿವೆ. ಪುತ್ರಶೋಕ ನಿರಂತರ. ತನ್ನ ಮೇಲಿನ ಆರೋಪಕ್ಕೆ ಆತ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಇಂತಹ ಸಮಯದಲ್ಲಿ ಬಿಜೆಪಿ ನನ್ನ ದಿವಂಗತ ಮಗನ ಹೆಸರನ್ನು ಎಳೆದು ರಾಜಕೀಯ ಮಾಡಲು ಹೊರಟಿರುವುದು ಅತ್ಯಂತ ವೈಯಕ್ತಿಕ ಮತ್ತು ಕ್ಷುಲ್ಲಕತನದ ರಾಜಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಕೇಶ್‌ ಜತೆ ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕೃಷ್ಣನ ಗೆಳೆಯ ಹೇಮಂತ್‌ ಮುದ್ದಪ್ಪ ಇದ್ದಾನೆ ಎಂದು ಬಿಜೆಪಿ ಆರೋಪಿಸಿದೆ. ಹಾಗಿದ್ದರೆ 2018ರಲ್ಲಿ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಜತೆಗಿರುವ ನೀರವ್‌ ಮೋದಿಯ ಫೋಟೋವನ್ನು ಹೇಗೆ ವ್ಯಾಖ್ಯಾನಿಸುವುದು ಎಂದು ಆ ಫೋಟೋ ಟ್ಯಾಗ್‌ ಮಾಡಿದ್ದಾರೆ.

ಬಿಟ್‌ ಕಾಯಿನ್‌ ಹಗರಣದಲ್ಲಿ ಬಿಜೆಪಿ ನಾಯಕರ ಮಕ್ಕಳ ಹೆಸರೂ ಕೇಳಿಬರುತ್ತಿವೆ. ಪುರಾವೆಗಳಿಲ್ಲದೆ ಕುಟುಂಬದ ಸದಸ್ಯರ ಹೆಸರು ಎಳೆದು ತರಬಾರದು ಎಂದು ಸುಮ್ಮನಿದ್ದೇನೆ. ಬಿಜೆಪಿ ನಾಯಕರು ಜೇನು ಗೂಡಿಗೆ ಕಲ್ಲೆಸೆಯುತ್ತಿದ್ದಾರೆ. ಕೆರಳಿದ ಜೇನು ನೊಣಗಳು ಯಾರನ್ನೆಲ್ಲ ಕಚ್ಚಲಿವೆಯೋ ಗೊತ್ತಿಲ್ಲ ಎಂದಿದ್ದಾರೆ.

ಕೊಪ್ಪಳದಲ್ಲಿ ಬಿಜೆಪಿ ಜನಸ್ವರಾಜ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಟ್‌ ಕಾಯಿನ್‌ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ. ಈ ಹಗರಣ 2016-17, 2018ರಲ್ಲಿ ನಡೆದಿದೆ ಎಂದು ಕಾಂಗ್ರೆಸ್‌ನ ಸುಜೇìವಾಲಾ ಆರೋಪಿಸಿದ್ದಾರೆ. ಆಗ ಸಿದ್ದರಾಮಯ್ಯ ಸರಕಾರ ಈ ಬಗ್ಗೆ ಯಾಕೆ ಮಾತನಾಡಲಿಲ್ಲ? ಶ್ರೀಕಿಯನ್ನು ಏಕೆ ಬಂಧಿಸಿ, ತನಿಖೆ ಮಾಡಲಿಲ್ಲ ಎಂದರು. ಅವರು ಮಾಡದ ಕೆಲಸವನ್ನು ನಾವು ಮಾಡಿದ್ದೇವೆ. ನಾವು ಹಿಡಿದು ತನಿಖೆಗೆ ಕೊಟ್ಟಿದ್ದೇವೆ ಮತ್ತು ಯಾರೇ ಆಗಿದ್ದರೂ ಕಠಿನ ಕ್ರಮ ಕೈಗೊಳ್ಳಲಿದ್ದೇವೆ ಎಂದರು.

ಬಿಜೆಪಿ ಟ್ವೀಟ್:

ಮುಳುಗುತ್ತಿರುವವನಿಗೆ ಹುಲ್ಲುಕಡ್ಡಿ ಆಸರೆ ಎಂಬಂತೆ ತನ್ನ ನಾಯಕತ್ವ ದುರ್ಬಲವಾಗುತ್ತಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಬಿಟ್‌ಕಾಯಿನ್‌ ಆಸರೆಯಾಗಿದೆ. ಆದರೆ ಒಂದು ಚಿತ್ರ ಸಾವಿರ ಕತೆ ಹೇಳುತ್ತದೆ. ಬಿಟ್‌ ಕಾಯಿನ್‌ ವಿಚಾರದಲ್ಲಿ ಪ್ರಭಾವಿ ಗಳು ಇದ್ದಾರೆಂದು ಆರೋಪಿಸಿ ದಾಖಲೆ ಇಲ್ಲ ಎನ್ನುತ್ತಿದ್ದಾರೆ. ನಿಮ್ಮ ಅತ್ಯಾಪ್ತರ ವಹಿವಾಟು ನಿಮ್ಮನ್ನು ಅಸಹಾಯಕ ನನ್ನಾಗಿ ಮಾಡಿದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ. ಸಿದ್ದರಾಮಯ್ಯ ಪುತ್ರ ರಾಕೇಶ್‌ ಜತೆ ಶ್ರೀಕಿ ಸ್ನೇಹಿತರು ಇರುವ ಚಿತ್ರ ಟ್ಯಾಗ್‌ ಮಾಡಿದೆ.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.