ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ
Team Udayavani, Nov 19, 2021, 3:01 PM IST
ಗುರುಮಠಕಲ್: ತಾಲೂಕಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ತಾಲೂಕು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ನಾಗೇಶ ಗದ್ದಿಗಿ ಒತ್ತಾಯಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಂಘಟನೆಯಿಂದ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ರವಾನಿಸಿ ಮಾತನಾಡಿದ ಅವರು, ಗುರುಮಠಕಲ್ ತಾಲೂಕು ಕೇಂದ್ರವಾಗಿದ್ದು, ತಾಲೂಕಿನ ವಿವಿಧ ಕಚೇರಿಗಳಲ್ಲಿ ಅನೇಕ ಸಿಬ್ಬಂದಿ ಕೊರತೆ ಇದೆ. ಇದರಿಂದ ರೈತರ, ಸಾರ್ವಜನಿಕರ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ಆಗುತ್ತಿಲ್ಲ. ದಿನನಿತ್ಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕಾಲೇಜುಗಳಲ್ಲಿಯೂ ಹಲವು ವಿಷಯಗಳಿಗೆ ಬೋಧನೆ ಮಾಡಲು ಉಪನ್ಯಾಸಕರಿಲ್ಲದೆ ಬೋಧನೆಗೂ ತೊಂದರೆಯಾಗಿದೆ. ಆದ್ದರಿಂದ ಮುಖ್ಯವಾಗಿ ತಹಶೀಲ್ದಾರ್ ಕಾರ್ಯಾಲಯ, ಪುರಸಭೆ ಕಾರ್ಯಾಲಯ ಸೇರಿದಂತೆ ಇನ್ನು ಹಲವು ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಕ್ತ ಕ್ರಮ ಕೈಗೊಂಡು ಕಲ್ಯಾಣ ಕರ್ನಾಟಕ ಹಿಂದುಳಿದ ಭಾಗದ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿರುವ ಪಕ್ಷದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ತಾಲೂಕು ಗೌರವ ಅಧ್ಯಕ್ಷ ಮಲ್ಲಿಕಾರ್ಜುನ ಕಾಕಲವಾರ್, ಪ್ರಧಾನ ಕಾರ್ಯದರ್ಶಿ ಲಾಲಪ್ಪ ತಲಾರಿ, ಕಾರ್ಯಾಧ್ಯಕ್ಷರಾದ ನರಸಿಂಹಲು ಗಂಗಾನೋಳ್, ರಾಮುಲು ಕೋಡಗಂಟಿ, ಮಹೇಶ್ ಗೌಡ, ರಾಘವೇಂದ್ರ ಗೌಡ, ನಾರಾಯಣ ಮಜ್ಜಿಗೆ, ಅಶೋಕರೆಡ್ಡಿ, ಮಹೇಶ್ ಗೌಡ ಚೆಪೆಟ್ಲಾ, ರಿಯಾಜ್, ಆಯಾಜ್, ರವಿ ವಾರದ್, ವೀರೇಶ ಫುಟಾ³ಕ್, ಬಸವರಾಜ ದಂತಾಪುರ್, ಉದಯಕುಮಾರ್, ಬನ್ನು ಮಡುಗು, ನರಸಿಂಹ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.