ಬಿಜೆಪಿ-ಟಿಎಂಸಿ ಘರ್ಷಣೆ: 19 ಮಂದಿಗೆ ಗಾಯ;ನಿಷೇಧಾಜ್ಞೆ ಜಾರಿ
Team Udayavani, Nov 19, 2021, 3:13 PM IST
ಖೋವೈ : ತ್ರಿಪುರಾದ ಖೋವೈ ಜಿಲ್ಲೆಯ ತೆಲಿಯಮುರಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಬೆಂಬಲಿಗರ ನಡುವೆ ಭಾರಿ ಘರ್ಷಣೆಗೆ ನಡೆದು ಕನಿಷ್ಠ 19 ಮಂದಿ ಗಾಯಗೊಂಡಿದ್ದು, ಈ ಪ್ರದೇಶದಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ರಾಜ್ಯದಲ್ಲಿ ಪೌರ ಸಂಸ್ಥೆಗಳ ಚುನಾವಣೆಗೆ ಕೆಲವು ದಿನಗಳ ಮೊದಲು ಈ ಘರ್ಷಣೆ ನಡೆದಿದೆ.
ಗಾಯಗೊಂಡವರಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯೂ ಸೇರಿದ್ದಾರೆ ಎಂದು ತಿಳಿದು ಬಂದಿದೆ.
ತೆಲಿಯಮುರಾ ಪುರಸಭೆಯ ಹಲವು ವಾರ್ಡ್ ಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಬುಧವಾರ ರಾತ್ರಿ 9:30 ರ ಸುಮಾರಿಗೆ ಕಲಿಟಿಲಾ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ಬಿಜೆಪಿ ಕಚೇರಿ ಬಳಿ ಬಂದಾಗ ಘರ್ಷಣೆ ಆರಂಭವಾಗಿದೆ ಎಂದು ಸಹಾಯಕ ಪೊಲೀಸ್ ಮಹಾನಿರೀಕ್ಷಕ ಸುಬ್ರತಾ ಚಕ್ರವರ್ತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.