![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 19, 2021, 4:26 PM IST
ಭಟ್ಕಳ: ರಾಜ್ಯ ಮತ್ತು ಕೇಂದ್ರ ಸರಕಾರಗಳು ರೈತರಿಗಾಗಿ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ರೈತರಿಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದು ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.
ಅವರು ಮುಡೇìಶ್ವರದ ಬಸ್ತಿಮಕ್ಕಿ ಹವ್ಯಕ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ರೈತಮೋರ್ಚಾ ವತಿಯಿಂದ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ರೈತ ಮೋರ್ಚಾ ಪದಾಧಿಕಾರಿಗಳ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಪ್ರಸನ್ನ ಕೆರೆಕೈ ಪ್ರಾಸ್ತಾವಿಕ ಮಾತನಾಡಿ, ರೈತ ಮೋರ್ಚಾ ಸಭೆಯನ್ನು ಆಯೋಜಿಸುವ ಉದ್ದೇಶವನ್ನು ವಿವರಿಸಿದರು.
ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ರೈತ ಮೋರ್ಚಾ ಸಂಘಟನಾತ್ಮಕ ವಿಚಾರಗಳ ಬಗ್ಗೆ ವಿವರಿಸಿದರು. ಉತ್ತರ ಕನ್ನಡ ಜಿಲ್ಲಾ ರೈತ ಮೋರ್ಚಾ ವತಿಯಿಂದ ರಾಜ್ಯಾಧ್ಯಕ್ಷರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ರೈತಮೋರ್ಚಾ ಜಿಲ್ಲಾಧ್ಯಕ್ಷ ಪ್ರದೀಪ್ ಗುನಗಿ, ಶಾಸಕ ಸುನೀಲ್ ನಾಯ್ಕ, ವಿಭಾಗ ಸಹ ಪ್ರಭಾರಿಗಳಾದ ಎನ್.ಎಸ್. ಹೆಗಡೆ, ರಾಜ್ಯ ರೈತಮೋರ್ಚಾ ಉಪಾಧ್ಯಕ್ಷ ಎ.ವಿ. ತೀರ್ಥರಾಮ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗೋವಿಂದ ನಾಯ್ಕ, ರೈತ ಮೋರ್ಚಾ ಪ್ರಭಾರಿ ಗೋಪಾಲಕೃಷ್ಣ ವೈದ್ಯ, ಭಟ್ಕಳ ಬಿಜೆಪಿ ಅಧ್ಯಕ್ಷ ಸುಬ್ರಾಯ ದೇವಾಡಿಗ ಮುಂತಾದವರಿದ್ದರು. ರಾಜ್ಯ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲಾ ಹಾಗೂ ಮಂಡಲದ ರೈತ ಮೋರ್ಚಾ ಪದಾಧಿಕಾರಿಗಳು ಹಾಜರಿದ್ದರು.
ರೈತಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ಹೊಸಕೊಪ್ಪ ಸ್ವಾಗತಿಸಿದರು. ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಷ್ಣುಮೂರ್ತಿ ಹೆಗಡೆ ವಂದಿಸಿದರು. ಉತ್ತರ ಕನ್ನಡ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮ್‌ಕುಮಾರ್ ನಿರೂಪಿಸಿದರು,
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.