ಮೂತ್ರ ವಿಸರ್ಜನೆ ತಾಣವಾದ ಹಳೇ ಹೇಮಾವತಿ ಸೇತುವೆ
Team Udayavani, Nov 19, 2021, 4:42 PM IST
ಸಕಲೇಶಪುರ: ಪಾದಚಾರಿಗಳು ಸಂಚರಿಸಲು ಅನುಕೂಲವಾಗಲು ಪುನರ್ ನಿರ್ಮಾಣ ಮಾಡಿರುವ ಪಟ್ಟಣದ ಹೇಮಾವತಿ ಹಳೇ ಸೇತುವೆಯು ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡಲು ಬಳಕೆಯಾಗುತ್ತಿರುವುದು ಪ್ರಜ್ಞಾವಂತರ ಬೇಸರಕ್ಕೆ ಕಾರಣವಾಗಿದೆ. ಪಟ್ಟಣದ ಹೇಮಾವತಿ ನದಿ ತೀರದಲ್ಲಿ ಬ್ರಿಟಿಷರ ಕಾಲದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸೇತುವೆ ನಿರ್ಮಾಣ ಮಾಡಲಾಗಿತ್ತು.
ಕಾಲ ಕ್ರಮೇಣ ಸೇತುವೆ ಶಿಥಿಲಗೊಂಡಂತೆ ಹೊಸ ಸೇತುವೆ ನಿರ್ಮಾಣ ಮಾಡಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೊಸ ಸೇತುವೆ ಮೇಲೆ ವಾಹನಗಳ ಸಂಚಾರ ಹೆಚ್ಚಾಗಿ ಪಾದಚಾರಿಗಳ ಸಂಚಾರ ಅಸಾಧ್ಯವಾದ ಹಿನ್ನೆಲೆ ಹಳೇ ಸೇತುವೆಯ ಒಂದು ಬದಿಯನ್ನು ತುಸು ಅಭಿವೃದ್ಧಿಪಡಿಸಿ ಪಾದಚಾರಿಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ಇದನ್ನೂ ಓದಿ;- ಬಿಜೆಪಿಯಿಂದ ರೈತಪರ ಯೋಜನೆ ಜಾರಿ: ಕೆರೆಕೈ
ಆದರೆ, ಇತ್ತೀಚಿನಲ್ಲಿ ಕೆಲವರು ಮೂತ್ರ ವಿಸರ್ಜನೆ ಮಾಡಲು ಈ ಸೇತುವೆಯನ್ನು ಬಳಸಿಕೊಳ್ಳುತಿರುವುದರಿಂದ ಸೇತುವೆ ಗಬ್ಬು ನಾರುತ್ತಿದ್ದು ಪಾದಾಚಾರಿಗಳು ಮೂಗು ಮುಚ್ಚಿಕೊಂಡು ಸಂಚರಿಸಬೇಕಾಗಿದೆ. ಈ ಸೇತುವೆ ತುಂಬಾ ಹುಲ್ಲು ಗಿಡಗಂಟಿ ಬೆಳೆದಿದ್ದು ಅಲ್ಲದೇ, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಸೇತುವೆ ಮೇಲೆ ಬಿಸಾಡಲಾಗಿದೆ.
ಸ್ವತ್ಛತೆ ಸಂಪೂರ್ಣವಾಗಿ ಇಲ್ಲಿ ಮಾಯವಾಗಿದ್ದು ಪುರಸಭೆಯವರು ಕನಿಷ್ಠ ಈ ಒಂದು ಪಾದಚಾರಿ ಸೇತುವೆ ಸ್ವತ್ಛವಾಗಿಡಲು ಮುಂದಾಗುತ್ತಿಲ್ಲ. ಇದೇ ವೇಳೆ ಪಟ್ಟಣ ವ್ಯಾಪ್ತಿಯ ಹಳೇ ಬಸ್ ನಿಲ್ದಾಣದಲ್ಲಿ ಮಾತ್ರ ಸಾರ್ವಜನಿಕ ಶೌಚಾಲಯವಿದ್ದು ಬೇರೆಡೆ ಸಾರ್ವಜನಿಕ ಶೌಚಾಲಯವಿಲ್ಲದಿರುವುದರಿಂದ ಮೂತ್ರ ವಿಸರ್ಜನೆ ಮಾಡಲು ತೊಡಕಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ಪುರಸಭೆ ಇತ್ತ ಗಮನಹರಿಸಿ ಸೇತುವೆ ಮೇಲೆ ಮೂತ್ರ ವಿಸರ್ಜನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ ಹಾಗೂ ಹಳೇ ಹೆದ್ದಾರಿಯಲ್ಲಿ ಸಾರ್ವಜನಿಕ ಶೌಚಾಲಯ ಮತ್ತು ಉದ್ಯಾನವನ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.
“ಹಳೇ ಸೇತುವೆ ಮೇಲೆ ಸಂಚರಿಸುವಾಗ ಮೂಗು ಮುಚ್ಚಿಕೊಂಡು ತಿರುಗಾಡಬೇಕಾಗಿದೆ. ಇಲ್ಲಿ ಮೂತ್ರ ವಿಸರ್ಜನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.” – ರಕ್ಷಿತ್, ಪಟ್ಟಣ ನಿವಾಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.