“ಗ್ರಾಮ ಭಾರತ ಸಶಕ್ತೀಕರಣ ಆದ್ಯತೆ’


Team Udayavani, Nov 20, 2021, 5:17 AM IST

“ಗ್ರಾಮ ಭಾರತ ಸಶಕ್ತೀಕರಣ ಆದ್ಯತೆ’

ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಗಾಮೀಣ ಭಾರತ ಸಶಕ್ತೀಕರಣಕ್ಕೆ ಆದ್ಯತೆ ನೀಡಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಇದಕ್ಕೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆಲ್ಲುವುದು ಅಗತ್ಯ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ನಗರದ ಅಡ್ಯಾರ್‌ ಗಾರ್ಡನ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರು ಹಾಗೂ ಚುನಾಯಿತ ಜನಪ್ರತಿನಿಧಿಗಳನ್ನು ಒಳಗೊಂಡ “ಜನಸ್ವರಾಜ್‌’ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಸ್ವಾಭಿಮಾನಿ, ಆತ್ಮನಿರ್ಭರ ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಆಗಿದ್ದು, ಗ್ರಾಮೀಣಾಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಜಲಜೀವನ್‌ ಮೂಲಕ ಪ್ರತೀ ಮನೆಗೆ ಶುದ್ಧ ಕುಡಿಯುವ ನೀರು, ನರೇಗಾ ಯೋಜನೆಯಲ್ಲಿ 100 ಮಾನವ ದಿನಗಳ ಉದ್ಯೋಗವನ್ನು 150 ದಿನಕ್ಕೆ ಏರಿಕೆ, ಆರೋಗ್ಯ, ಮೂಲಸೌಕರ್ಯ, ಸ್ವಚ್ಛತೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಲಕ್ಷಾಂತರ ಕೋಟಿ ರೂ.ಗಳನ್ನು ಮೋದಿ ನೇತೃತ್ವದ ಕೇಂದ್ರ ಸರಕಾರ ನೀಡಿದೆ ಎಂದರು.

ದಕ್ಷಿಣ ಕನ್ನಡ-ಉಡುಪಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಸರಳ ಸಜ್ಜನಿಕೆ ವ್ಯಕ್ತಿತ್ವ ಮತ್ತು ಪಕ್ಷದ ಸಿದ್ಧಾಂತಗಳಿಗೆ ಬದ್ಧನಾಗಿ ನಡೆಯುವ ರಾಜಕಾರಣಿಯಾಗಿದ್ದು, ಅವರು ಅತ್ಯಧಿಕ ಮತಗಳಿಂದ ಗೆಲುವ ಸಾಧಿಸುವಂತೆ ಎಲ್ಲರೂ ಶ್ರಮಿಸಬೇಕು ಎಂದು ಸದಾನಂದ ಗೌಡ ಕರೆ ನೀಡಿದರು.

ಇದನ್ನೂ ಓದಿ:ಟೀಮ್‌ ಇಂಡಿಯಾ ಸರಣಿ ಜಯಭೇರಿ

ಮಹತ್ವದ ಚುನಾವಣೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಒಂದೂವರೆ ವರ್ಷದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪೂರ್ವಭಾವಿಯಾಗಿ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯುವ ಚುನಾವಣೆ ಅತ್ಯಂತ ಮಹತ್ವದಾಗಿದೆ. ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಮಾತನಾಡಿ, ಸಹಕಾರ ಕ್ಷೇತ್ರಕ್ಕೆ ರಾಜ್ಯ ಸರಕಾರ ಹೆಚ್ಚಿನ ಒತ್ತು ನೀಡಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಸಚಿವ ಎಸ್‌. ಅಂಗಾರ ಸ್ವಾಗತಿಸಿ, ಪ್ರಸ್ತಾವನೆಗೈದು, ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನಮ್ಮ ವಿರೋಧಿಗಳು ನಡೆಸುತ್ತಿರುವ ಅಪಪ್ರಚಾರಗಳಿಗೆ ಉತ್ತರ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ, ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರಿಗೆ ಆಮಿಷಗಳನ್ನು ಒಡ್ಡುವ ಕಾರ್ಯ ನಡೆಯುತ್ತಿದೆ. ಇದಕ್ಕೆ ಅವರು ಒಳಗಾಗುವವರಲ್ಲ ಎಂಬುದನ್ನು ಅಮಿಷ ಒಡ್ಡುವವರು ಅರ್ಥಮಾಡಿಕೊಳ್ಳಬೇಕು ಎಂದರು.

ಶಾಸಕರಾದ ಸಂಜೀವ ಮಠಂದೂರು, ರಾಜೇಶ್‌ ನಾೖಕ್‌ ಉಳಿಪಾಡಿ, ಹರೀಶ್‌ ಪೂಂಜ, ಉಮಾನಾಥ ಕೋಟ್ಯಾನ್‌, ಡಾ| ವೈ. ಭರತ್‌ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ರಾಜ್ಯ ಉಪಾಧ್ಯಕ್ಷ ಎಂ. ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ವಿವಿಧ ನಿಗಮಗಳ ಅಧ್ಯಕ್ಷರಾದ ನಿತಿನ್‌ ಕುಮಾರ್‌, ಹರಿಕೃಷ್ಣ ಬಂಟ್ವಾಳ, ಸಂತೋಷ್‌ ಕುಮಾರ್‌ ರೈ ಬೋಳಿಯಾರು, ರವೀಂದ್ರ ಶೆಟ್ಟಿ ಉಳಿದೊಟ್ಟು, ಮೇಯರ್‌ ಪ್ರೇಮಾನಂದ ಶೆಟ್ಟಿ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಯಾತ್ರೆಯ ಸಹ ಸಂಚಾಲಕ ವಿನಯ್‌ ಬಿದರೆ, ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಪ್ರಭಾರಿ ರಾಜೇಶ್‌ ಕಾವೇರಿ, ಜಿಲ್ಲಾ ಸಹಪ್ರಭಾರಿ ಭಾರತೀಶ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ರಾಮದಾಸ್‌ ಬಂಟ್ವಾಳ, ಸುಧೀರ್‌ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು.
ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷ ತಿಲಕ್‌ರಾಜ್‌ ಕೃಷ್ಣಾಪುರ ವಂದಿಸಿದರು. ಬುಡಾ ಅಧ್ಯಕ್ಷ ದೇವದಾಸ್‌ ಶೆಟ್ಟಿ ನಿರೂಪಿಸಿದರು.

ಕೋಟ ಇಂದು ನಾಮಪತ್ರ ಸಲ್ಲಿಕೆ
“ದ.ಕ-ಉಡುಪಿ ಸ್ಥಳೀಯಾ ಡಳಿತ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡಲಾಗಿದ್ದು, ಶನಿವಾರ ಬೆಳಗ್ಗೆ 11.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ’ ಎಂದು ಕೋಟ ಶ್ರೀನಿವಾಸ ಪೂಜಾರಿ ಸಮಾವೇಶದಲ್ಲಿ ಘೋಷಿಸಿದರು.

ಕಳೆದ 3 ಅವಧಿಗಳಲ್ಲಿ ವಿಧಾನ ಪರಿಷತ್‌ ಸದಸ್ಯನಾಗಿ, ಸಚಿವನಾಗಿ ಸ್ಥಳೀಯಾಡಳಿತ ಸಂಸ್ಥೆಗಳ ಉನ್ನತಿಗೆ, ಸದಸ್ಯರ ಗೌರವಧನ ಹೆಚ್ಚಳಕ್ಕೆ ಶ್ರಮಿಸಿದ್ದೇನೆ ಎಂದರು.

ಟಾಪ್ ನ್ಯೂಸ್

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

Fraud Case ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ 18 ಲ.ರೂ. ವಂಚನೆ

Fraud Case ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ 18 ಲ.ರೂ. ವಂಚನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.