ದ.ಕ. ಜಿಲ್ಲೆಗೆ 4 ಹೆಚ್ಚುವರಿ ಎಂಡೋ ಡೇ ಕೇರ್‌ ಸೆಂಟರ್‌

ಮೂರು ಕೇಂದ್ರಗಳ ಕಟ್ಟಡ ಸಿದ್ಧ ಅನುದಾನದ ಬಳಿಕ ಕೇಂದ್ರ ಕಾರ್ಯಾರಂಭ

Team Udayavani, Nov 20, 2021, 5:47 AM IST

ದ.ಕ. ಜಿಲ್ಲೆಗೆ 4 ಹೆಚ್ಚುವರಿ ಎಂಡೋ ಡೇ ಕೇರ್‌ ಸೆಂಟರ್‌

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಎಂಡೋಸಲ್ಫಾನ್‌ ಸಂತ್ರಸ್ತರ ಆರೈಕೆಗಾಗಿ 4 ಪಾಲನ ಕೇಂದ್ರ (ಡೇ ಕೇರ್‌ ಸೆಂಟರ್‌)ಗಳು ಮಂಜೂರಾಗಿವೆ. 3 ಕೇಂದ್ರಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು ಶೀಘ್ರ ಕಾರ್ಯಾರಂಭದ ನಿರೀಕ್ಷೆಯಲ್ಲಿವೆ.

ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನ ಹೆಚ್ಚಿನ ಗ್ರಾಮಗಳು ಹಾಗೂ ಬಂಟ್ವಾಳದ ವಿಟ್ಲ ಭಾಗ ಮತ್ತು ಮಂಗಳೂರಿನ ಮೂಡಬಿದಿರೆ ಭಾಗಗಳಲ್ಲಿ ಎಂಡೋ ಸಂತ್ರಸ್ತರ ಸಂಖ್ಯೆ ಹೆಚ್ಚು ಇರುವುದರಿಂದ ಈ ಪ್ರದೇಶಗಳನ್ನು ಕೇಂದ್ರೀಕರಿಸಲಾಗಿದೆ. ಕಡಬ ಹಾಗೂ ಬೆಳ್ತಂಗಡಿಯ ಕೊಕ್ಕಡದಲ್ಲಿ ಈಗಾಗಲೇ 2 ಕೇಂದ್ರಗಳಿವೆ.

ಸರಕಾರದ ಈಗಿನ ಲೆಕ್ಕಾಚಾರದಂತೆ ದ.ಕ.ದಲ್ಲಿ 4,151 ಮಂದಿ ಎಂಡೋ ಸಂತ್ರಸ್ತರಿದ್ದಾರೆ. ಹಗಲು ಹೊತ್ತಿನಲ್ಲಿ ಸಂತ್ರಸ್ತರನ್ನು ಕರೆತಂದು ಡೇ ಕೇರ್‌ ಸೆಂಟರ್‌ಗಳಲ್ಲಿ ಆರೈಕೆ ಮಾಡಿ ರಾತ್ರಿ ಮನೆಗೆ ಬಿಡುವುದು ಕ್ರಮ. ಈಗಿರುವ 2 ಕೇಂದ್ರಗಳು ಇದೇ ಮಾದರಿಯಲ್ಲಿ ಕಾರ್ಯಾಚರಿಸುತ್ತಿವೆ.

3 ಕಟ್ಟಡ ಪೂರ್ಣ
ಪ್ರಸ್ತುತ ಬಂಟ್ವಾಳ ತಾಲೂಕಿನ ವಿಟ್ಲ, ಬೆಳ್ತಂಗಡಿಯ ಕಣಿಯೂರು, ಪುತ್ತೂರಿನ ಪಾಣಾಜೆ ಪಾಲನಾ ಕೇಂದ್ರಗಳ ಕಾಮಗಾರಿ ಪೂರ್ಣಗೊಂಡರೆ, ಸುಳ್ಯದ ಬೆಳ್ಳಾರೆ ಕೇಂದ್ರ ನಿರ್ಮಾಣದ ಹಂತದಲ್ಲಿದೆ. ಒಟ್ಟು 1.77 ಕೋ.ರೂ. ಅನುದಾನದಲ್ಲಿ ಆರೋಗ್ಯ ಇಲಾಖೆಯ ಎಂಜಿನಿಯರಿಂಗ್‌ ವಿಭಾಗದಿಂದ ಕಾಮಗಾರಿ ನಡೆಯುತ್ತಿದೆ. ಸ್ಥಳೀಯ ಆರೋಗ್ಯ ಕೇಂದ್ರಗಳ ಆವರಣದಲ್ಲೇ ಕಟ್ಟಡ ಇದೆ.

ಇದನ್ನೂ ಓದಿ:ದೇಶದ ಏಕತೆ, ಅಖಂಡತೆ ಮತ್ತು ಸಮಗ್ರತೆ ಕಾಪಾಡಲು ಸಂಕಲ್ಪ ಮಾಡೋಣ

ಶಾಶ್ವತ ಪುನರ್ವಸತಿ ಕೇಂದ್ರದ ಬೇಡಿಕೆ
ಜಿಲ್ಲೆಯ ಎಂಡೋ ಸಂತ್ರಸ್ತರಿಗಾಗಿ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯುವಂತೆ ಹಲವು ವರ್ಷಗಳಿಂದ ಬೇಡಿಕೆ ಇದ್ದು, ಈಗಾಗಲೇ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಅದಕ್ಕಾಗಿ ಆಲಂಕಾರು ಮತ್ತು ಕೊಕ್ಕಡದಲ್ಲಿ ಜಾಗವನ್ನೂ ಗುರುತಿಸಲಾಗಿದೆ. ಯಾವುದೇ ವಾರಸುದಾರರಿಲ್ಲದ ಎಂಡೋಸಂತ್ರಸ್ತರ ಆರೈಕೆಯನ್ನು ಆ ಕೇಂದ್ರದಲ್ಲಿ ಮಾಡಬೇಕಿರುವುದರಿಂದ ಅದುಆಸ್ಪತ್ರೆಯ ರೀತಿಯಲ್ಲಿ ಕೆಲಸ ಮಾಡಬೇಕಿದ್ದು, ಹೆಚ್ಚಿನ ಅನುದಾನದ ಅಗತ್ಯವಿದೆ.

ಅನುದಾನದ ನಿರೀಕ್ಷೆಯಲ್ಲಿ
ಕಟ್ಟಡದ ಕಾಮಗಾರಿಯಷ್ಟೇ ನಡೆದಿದ್ದು, ಕೇಂದ್ರದ ಕಾರ್ಯಾಚರಣೆಗೆ ಇನ್ನಷ್ಟು ಅನುದಾನದ ಅಗತ್ಯವಿದೆ. ಅಗತ್ಯ ಸಲಕರಣೆಗಳ ಒದಗಣೆ, ನಿರ್ವಹಣೆಯ ಮೊತ್ತ, ಸಿಬಂದಿ ನಿಯೋಜನೆ ಇನ್ನಷ್ಟೇ ನಡೆಯಬೇಕಿದೆ. ಕೇಂದ್ರಗಳ ನಿರ್ವಹಣೆಗೆ ಮಾಸಿಕ 2ರಿಂದ 3 ಲಕ್ಷ ರೂ. ಬೇಕಿದೆ. ಪೂರ್ಣಗೊಂಡಿರುವ ಕೇಂದ್ರಗಳ ಆರಂಭಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಸರಕಾರಕ್ಕೆ ಬರೆಯಲಾಗಿದೆ. ಬಂದ ಬಳಿಕ ಕೇಂದ್ರ ಆರಂಭಗೊಳ್ಳಲಿದೆ.
– ಸಾಜುದ್ದೀನ್‌, ಜಿಲ್ಲಾ ಸಂಯೋಜಕರು, ದ.ಕ. ಜಿಲ್ಲಾ ಎಂಡೋಸಲ್ಫಾನ್‌ ಕೋಶ

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

1

Puttur: ನಳಿನ್‌ಗೆ ನಿಂದನೆ; ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.