ರೈತಪರ ಸಂಘಟನೆಗಳಿಂದ ವಿಜಯೋತ್ಸವ
Team Udayavani, Nov 20, 2021, 10:40 AM IST
ಆಳಂದ: ದೇಶದಲ್ಲಿ ಕಳೆದ ಒಂದು ವರ್ಷದಿಂದ ನಡೆಸುತ್ತಿದ್ದ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ರೈತಪರ ಸಂಘಟನೆಗಳಿಂದ ಪಟ್ಟಣದ ಬಸ್ ನಿಲ್ದಾಣದ ಎದುರು ಶುಕ್ರವಾರ ಸಂಭ್ರಮಿಸಿದರು.
ಕೃಷಿ ಸಬಲೀಕರಣ ಮತ್ತು ರಕ್ಷಣೆ ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ, ಅಗತ್ಯ ವಸ್ತು-ಸರಕುಗಳ ತಿದ್ದುಪಡಿ ಕಾಯ್ದೆ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಕರ್ನಾಟಕ ಸೇರಿದಂತೆ ದೇಶದ ರೈತರು ನಡೆಸುತ್ತಿದ್ದ ಹೋರಾಟಕ್ಕೆ ಕೇಂದ್ರ ಸರ್ಕಾರ ಶರಣಾಗಿ ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಹಿಂದಕ್ಕೆ ಪಡೆಯುವ ಪ್ರಕ್ರಿಯೆ ಆರಂಭಿಸಿದೆ. ಪ್ರಮುಖವಾಗಿ ದೆಹಲಿ, ಪಂಜಾಬ, ಹರಿಯಾಣ, ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳ ರೈತರು ಮಳೆ, ಬಿಸಿಲು, ಗಾಳಿ, ಕೋವಿಡ್ ಸೋಂಕು ಹರಡುವಿಕೆ ಲೆಕ್ಕಿಸದೇ ನಡೆಸಿದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ ಎಂದು ಮುಖಂಡರು ಹೇಳಿದರು.
ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಗುರುಲಿಂಗ ಜಂಗಮ ಪಾಟೀಲ, ರವೀಂದ್ರ ಕೊರಳ್ಳಿ, ಬಾಬು ಗೊಬ್ಬರ ಭೂಸನೂರ, ಮಹಾಂತೇಶ ಪಾಟೀಲ, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಸಿದ್ಧು ವೇದಶೆಟ್ಟಿ, ವೀರಭದ್ರಪ್ಪ ಕೋರೆ, ಪುರಸಭೆ ಸದಸ್ಯ ದೋಂಡಿಬಾ ಸಾಳುಂಕೆ, ಮುಖಂಡ ಸಂಜಯ ನಾಯಕ ಮತ್ತಿತರರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.
ಕೃಷಿ ಕಾನೂನು ಹಿಂದಕ್ಕೆ ಪಡೆಯುವಂತೆ ಕಿಸಾನ ಮೋರ್ಚಾದಿಂದ ರೈತ ಮುಖಂಡ ಮೌಲಾ ಮುಲ್ಲಾ, ಪ್ರಾಂತ ರೈತ ಸಂಘದ ಮುಖಂಡ ಪ್ರಕಾಶ ಜಾನಿ, ಸುಧಾಮ ಧನ್ನಿ, ಪಾಂಡುರಂಗ ಮಾವೀನಕರ್, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರ ಥಂಭೆ ಇನ್ನಿತರ ಸಂಘಟನೆಗಳು ಈ ಭಾಗದಲ್ಲಿ ಹೋರಾಟ ನಡೆಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.