ನಮಗೆ ಹಿಂದಿನದ್ದನ್ನು ಬದಲಾಯಿಸುವುದು ಅಸಾಧ್ಯವಾಗಿದೆ : PRK
Team Udayavani, Nov 20, 2021, 11:07 AM IST
ಕನ್ನಡಿಗರ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ನಮ್ಮಿಂದ ದೂರ ಇದ್ದರೂ ಅವರ ನೆನಪುಗಳು ಮಾತ್ರ ಸದಾ ಜೀವಂತವಾಗಿವೆ. ಅವರು ಮಾಡಿರುವ ಕಲಾ ಸೇವೆ ಜನರ ಮನದಲ್ಲಿ ಜೀವಂತವಾಗಿದೆ. ಪುನೀತ್ ಒಡೆತನದಲ್ಲಿ ಪಿ.ಆರ್.ಕೆ ಸಂಸ್ಥೆ ನಿರ್ಮಾಣವಾಗಿತ್ತು. ಅಪ್ಪು ಅಕಾಲಿಕ ಮರಣದ ನಂತರ ಈ ಸಂಸ್ಥೆ ಪೂರ್ಣ ಜವಾಬ್ದಾರಿಯನ್ನು ಪುನೀತ್ ಪತ್ನಿ ಅಶ್ವಿನಿ ವಹಿಸಿಕೊಂಡಿದ್ದಾರೆ.
ಇದೀಗ ಪಿಆರ್ ಕೆ ಸಂಸ್ಥೆ ಟ್ವಿಟ್ಟರ್ ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದು, ಅಭಿಮಾನಿಗಳಲ್ಲಿ ಮತ್ತೆ ಉತ್ಸಾಹ ಮೂಡಿಸಿದೆ. ”ನಮಗೆ ಹಿಂದಿನದ್ದನ್ನು ಬದಲಾಯಿಸುವುದು ಅಸಾಧ್ಯವಾಗಿದೆ. ಆದರೆ ಪುನೀತ್ ರಾಜ್‌ಕುಮಾರ್ ಅವರು ನಮಗೆ ನೀಡಿರುವ ಉತ್ಸಾಹ ಹಾಗೂ ಸ್ಪೂರ್ತಿಯೊಂದಿಗೆ ಪಿಆರ್‌ಕೆ ಪ್ರೊಡಕ್ಷನ್ ಮತ್ತು ಪಿಆರ್‌ಕೆ ಆಡಿಯೋದ ಮೂಲಕ ಉಜ್ವಲ ಭವಿಷ್ಯವನ್ನು ರಚಿಸಲು ಎದುರು ನೋಡುತ್ತೇವೆ. ನಮ್ಮ ಪ್ರಯಾಣವನ್ನು ಪುನರಾರಂಭಿಸುತ್ತಾ, ಅವರ ಕನಸುಗಳನ್ನು ನನಸಾಗಿಸುವಲ್ಲಿ ನಿಮ್ಮ ಬೆಂಬಲವನ್ನು ನಿರೀಕ್ಷಿಸುತ್ತೇವೆ” ಎಂದಿದ್ದಾರೆ.
— PRK Productions (@PRK_Productions) November 19, 2021
ಪಿಆರ್ ಕೆ ಸಂಸ್ಥೆಯಿಂದ ಈಗಾಗಲೇ ‘ಕವಲುದಾರಿ’, ‘ಫ್ರೆಂಚ್ ಬಿರಿಯಾನಿ’, ಮಹಿಳಾ ಪ್ರಧಾನ ಸಿನಿಮಾ ‘ಲಾ’, ‘ಮಾಯಾಬಜಾರ್’ ಸಿನಿಮಾಗಳನ್ನು ನಿರ್ಮಾಣವಾಗಿವೆ. ಪ್ರಸ್ತುತ ‘ಫ್ಯಾಮಿಲಿ ಪ್ಯಾಕ್’ ಹೆಸರಿನ ಕೌಟುಂಬಿಕ ಹಾಸ್ಯ ಸಿನಿಮಾ, ‘ರಾಮಾ ರಾಮಾ ರೇ’ ಖ್ಯಾತಿಯ ಸತ್ಯ ನಿರ್ದೇಶಿಸುತ್ತಿರುವ ‘ಮ್ಯಾನ್ ಆಫ್ ದಿ ಮ್ಯಾಚ್’ ಹೆಸರಿನ ಸಿನಿಮಾ, ರಾಘವ್ ನಾಯಕ್, ಪ್ರಶಾಂತ್ ರಾಜ್ ನಿರ್ದೇಶನದ ‘ಓ2’ ಹೆಸರಿನ ಭಿನ್ನ ಕತೆಯುಳ್ಳ ಸಿನಿಮಾಗಳು ನಿರ್ಮಾಣ ಹಂತದಲ್ಲಿದ್ದವು ಅಷ್ಟರಲ್ಲಿ ಪುನೀತ್ ರಾಜ್‌ಕುಮಾರ್ ನಿಧನ ಹೊಂದಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.