ಪ್ರೀತಿ ತಿರಸ್ಕರಿಸಿದ ಯುವತಿ ಕೊಂದು, ಭಗ್ನ ಪ್ರೇಮಿ ಆತ್ಮಹತ್ಯೆ

Team Udayavani, Nov 20, 2021, 1:49 PM IST

1-sadsa

ಆನೇಕಲ್‌: ಪ್ರೇಮವನ್ನು ನಿರಾಕರಿಸಿದ್ದ ಯುವತಿ ಮನೆಗೆ ನುಗ್ಗಿದ ಪ್ರೇಮಿ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ನಂತರ ತಾನು ಚಾಕುವಿನಿಂದ ಕೈಕೊಯ್ದುಕೊಂಡು ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಆನೇಕಲ್‌ ತಾಲೂಕಿನ ಜಿಗಣಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಸಿಂಚನಾ(18) ಕೊಲೆಯಾದ ಯುವತಿ. ಕಿಶೋರ್‌ ಕುಮಾರ್‌(22) ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ತಿಳಿದು ಬಂದಿದೆ. ತಾಲೂಕಿನ ಜಿಗಣ ಸಮೀಪದ ನಿಸರ್ಗ ಬಡಾವಣೆಯಲ್ಲಿ ಆರು ತಿಂಗಳ ಹಿಂದೆ ನೂತನವಾಗಿ ಮನೆ ಕಟ್ಟಿ ವಾಸಕ್ಕೆ ಬಂದಿದ್ದ ಗಂಡ-ಹೆಂಡತಿ, ಮಗಳು ಮತ್ತು ಹೆಂಡತಿ ತಮ್ಮನ ಕುಟುಂಬ ಆ ಮನೆಯಲ್ಲಿ ವಾಸವಾಗಿತ್ತು. ಎಂದಿನಂತೆ ಎಲ್ಲರೂ ತಮ್ಮ ತಮ್ಮ ಕೆಲಸದ ನಿಮ್ಮಿತ್ತ ಹೋರ ಹೋಗಿದ್ದರು. ಈ ವೇಳೆ ಮನೆಯ ಮಗಳು ಮಾತ್ರ ಇರುತ್ತಿದ್ದಳು. ಕಳೆದ ಕೆಲ ದಿನಗಳಿಂದ ತನ್ನ ಬೆನ್ನು ಹತ್ತಿದ್ದ ಯುವಕ ಕಿಶೋರ್‌, ಒಮ್ಮೆಲೆ ಮನೆಗೆ ಬಂದು ಪ್ರೇಮ ನಿವೇದನೆ ಮಾಡಿಕೊಂಡಾಗಲೂ ಯುವತಿ ನಿರಾಕರಿಸಿದ್ದರಿಂದ ರೊಚ್ಚಿಗೆದ್ದು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ:ಸುರತ್ಕಲ್‌ ಟೋಲ್‌ಗೇಟ್‌ : ಭರವಸೆಯ ಮಹಾಪೂರಗಳ ನಡುವೆ ಮತ್ತೆ ವಿಸ್ತರಣೆ ಭಾಗ್ಯ

ಪೊಲೀಸರಿಗೆ ದೂರು

ಮಾಗಡಿ ಮೂಲದ ದೊಡ್ಡಯ್ಯ ಮತ್ತು ಗಂಗಮ್ಮ ದಂಪತಿ ಪುತ್ರಿ ಸಿಂಚನಾ. ಮೃತ ಯುವಕ ರಾಮನಗರದ ಬಾನವಾಡಿ ಮೂಲದ ಹೇಮಾಪುರ ಕಾಲೋನಿ ನಿವಾಸಿ ಕಿಶೋರ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಕೊಲೆ ಎಷ್ಟು ಸಮಯಕ್ಕೆ ಆಗಿದೆ ಎಂಬುದು ನಿಖರವಾಗಿಲ್ಲ. ಆದರೂ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮೃತ ಸಿಂಚನಾ ತಂದೆ ಊಟಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಯುವಕ ಕಿಶೋರ್‌ ಯುವತಿಯನ್ನು ಚಾಕುನಿಂದ ಇರಿದು ಕೊಂದು ಬಳಿಕ ತಾನು ಚಾಕು ಇರಿದುಕೊಂಡು ಸೀರೆ ಕುತ್ತಿಗೆಗೆ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಇಬ್ಬರ ನಡುವೆ ಗಲಾಟೆ

ಇತ್ತೀಚೆಗೆ ತಾನೇ ದ್ವೀತಿಯ ಪಿಯುಸಿ ಮುಗಿಸಿದ್ದ ಮೃತ ಸಿಂಚನಾಳನ್ನು ಪ್ರಥಮ ವರ್ಷದ ಬಿ ಪಾರ್‌ಂಗೆ ಟಿ ಜಾನ್‌ ಕಾಲೇಜಿಗೆ ಅಡ್ಮಿಷನ್‌ ಮಾಡಲಾಗಿತ್ತು. ಸೋಮವಾರದಿಂದ ಕಾಲೇಜಿಗೆ ಹೋಗದೆ ಸಿಂಚನಾ ಮನೆಯಲ್ಲಿದ್ದಳು. ತಾಯಿ ಹರಪನಹಳ್ಳಿಯಲ್ಲಿರುವ ತಮ್ಮ ಹಾರ್ಡವೇರ್‌ ಅಂಗಡಿಗೆ ತೆರಳಿದ್ದರು. ಈ ನಡುವೆ ಮನೆಗೆ ಬಂದ ಕಿಶೋರ್‌ ಹಾಗೂ ಸಿಂಚನಾ ನಡುವೆ ಗಲಾಟೆ ನಡೆದಿದ್ದು, ಸಿಂಚನಾ ಮೊಬೈಲನ್ನು ಒಡೆದು ಹಾಕಿ ಬಳಿಕ ಮನೆಯಲ್ಲಿದ್ದ ಚಾಕುನಿಂದ ಎದೆ ಹಾಗೂ ಕುತ್ತಿಗೆ ಕೊಯ್ದು ಕೊಲೆ ಮಾಡಿ ಬಳಿಕ ಅದೇ ಚಾಕುನಿಂದ ತನ್ನ ಕೈ ಹಾಗೂ ಎದೆಗೆ ಚುಚ್ಚಿಕೊಂಡು ಮನೆಯಲ್ಲಿದ್ದ ಸೀರೆ ತಂದು ಕುತ್ತಿಗೆಗೆ ಬಿಗಿದು ತಾನೂ ಕೂಡ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.