ಕೇಂದ್ರದಿಂದ ಮೂರು ಕೃಷಿ ಕಾಯ್ದೆ ವಾಪಸ್: ಸಂಭ್ರಮ
Team Udayavani, Nov 20, 2021, 3:07 PM IST
ಕೋಲಾರ: ವಿವಾದಿತ ಕೃಷಿ ಕಾನೂನು ಕೇಂದ್ರ ಸರ್ಕಾರ ವಾಪಸ್ ಪಡೆದ ಹಿನ್ನೆಲೆಯಲ್ಲಿ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಜಿ.ಜಿ.ಹಳ್ಳಿ ಬಿ.ನಾರಾಯಣಸ್ವಾಮಿ ಸಾರಥ್ಯದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.
ರಾಜ್ಯ ಯುವ ಘಟಕ ಅಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ ಮಾತನಾಡಿ, ದೆಹಲಿ ಗಡಿಯಲ್ಲಿ ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಚಳಿ, ಗಾಳಿ, ಮಳೆ ಎನ್ನದೇ ನಿರಂತರವಾಗಿ ಹೋರಾಟ ಕೈಗೊಂಡಿದ್ದ ರೈತ ಮುಖಂಡ ರಾಕೇಶ್ ಟಿಕಾಯಿತ್, ಯದುವೀರ್ ಸಿಂಗ್ ಹಾಗೂ ರೈತರಿಗೆ ಧನ್ಯವಾದಗಳು. ಈ ವೇಳೆ ಪ್ರಾಣ ತ್ಯಾಗ ಮಾಡಿದ ರೈತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರ ಗುರುನಾನಕ್ ಜಯಂತಿಯಂದು ರೈತರ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ನಿರ್ಣಯ ಕೈಗೊಂಡಿದ್ದು ಸಂತಸ ತಂದಿದೆ. ಜೊತೆಗೆ ರೈತರಿಗೆ ಎಲ್ಲಾ ರೀತಿಯ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಹೊಸಮಟ್ನಹಳ್ಳಿ ಕೆ.ನಾರಾಯಣಗೌಡ, ಜಯ ಕರ್ನಾಟಕ ತ್ಯಾಗರಾಜ್, ಕರವೇ ಕದಂಬ ಸೋಮಣ್ಣ, ಕರವೇ ಕನ್ನಡಿಗರ ಸಾರಥ್ಯ ಜಿಲ್ಲಾಧ್ಯಕ್ಷ ಶೇಷಾದ್ರಿ, ಕೋಲಾರ ತಾಲೂಕು ಅಧ್ಯಕ್ಷ ಜಗನ್ನಾಥರೆಡ್ಡಿ, ಮುಳಬಾಗಿಲು ತಾಲೂಕು ಅಧ್ಯಕ್ಷ ಎಲ್.ಎನ್.ಬಾಬು, ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ದೊಡ್ಡಕುರುಬರಹಳ್ಳಿ ಶಂಕರಪ್ಪ, ಬಂಗಾರಪೇಟೆ ತಾಲೂಕು ಅಧ್ಯಕ್ಷ ಕದಿರೇನಹಳ್ಳಿ ಶ್ರೀನಿವಾಸ್, ಮುಳಬಾಗಿಲು ಉಪಾಧ್ಯಕ್ಷ ಧನರಾಜ್, ಕಾರ್ಯಧ್ಯಕ್ಷ ವಿಶ್ವನಾಥರೆಡ್ಡಿ, ತೇರಹಳ್ಳಿ ಚಂದ್ರಪ್ಪ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.