ಮಣಿಪಾಲದಲ್ಲಿ ಪೈಪ್‌ಲೈನ್ ಬಿರುಕು: ಮನೆಗಳಿಗೆ ಕಲುಷಿತ ನೀರು
Team Udayavani, Nov 21, 2021, 3:10 AM IST
ಉಡುಪಿ: ನಗರಸಭೆಯ ಮಣಿಪಾಲದ ಮುಖ್ಯ ವಾಟರ್ ಟ್ಯಾಂಕ್‌ನ ಪೈಪ್‌ಲೈನ್ ಒಂದು ಹಾನಿಯಾದ ಪರಿಣಾಮ ಮಾಧವಕೃಪಾ ಶಾಲೆಯ ಸಮೀಪದಿಂದ ಅಂಚೆ ಕಚೇರಿ ಕಡೆಗೆ ಸಾಗುವ ಕೊಳವೆ ಮಾರ್ಗದಲ್ಲಿ ಯಥೇತ್ಛ ನೀರು ಪೋಲಾಗುವ ಜತೆ ಕಲುಷಿತ ನೀರು ಶುದ್ಧ ಕುಡಿಯುವ ನೀರಿನ ಸಂಪರ್ಕದ ಪೈಪ್‌ಲೈನ್ ಸೇರುತ್ತಿದೆ.
ನೀರು ಪೂರೈಕೆಯಾಗುವ ಕೆಲವು ಸಂಪರ್ಕದಲ್ಲಿ ಕೊಳಕು ನೀರು ಬರುತ್ತಿರುವ ಬಗ್ಗೆ ಸಾರ್ವಜನಿಕರು ದೂರಿದ್ದಾರೆ. ನಗರಕ್ಕೆ ನೀರು ಪೂರೈಸಲು ವಾರಾಹಿ ಪೈಪ್‌ಲೈನ್ ಪ್ರಾಜೆಕ್ಟ್ ಕಾಮಗಾರಿ ಚುರುಕಾಗಿ ಸಾಗುತ್ತಿದೆ. ಬೃಹತ್ ಯಂತ್ರ ಬಳಸಿ ಕಾಮಗಾರಿ ನಡೆಸುತ್ತಿರುವುದರಿಂದ ಕೆಲವು ದಿನಗಳ ಹಿಂದೆ ನೀರು ಪೂರೈಸುವ ಹಳೇ ಕೊಳವೆ ಮಾರ್ಗಕ್ಕೆ ಹಾನಿಯಾಗಿದ್ದು, ದೊಡ್ಡಮಟ್ಟದಲ್ಲಿ ನೀರು ಪೋಲಾಗುತ್ತಿದೆ. ಸಾಕಷ್ಟು ದಿನ ಕಳೆದರೂ ಕಾಮಗಾರಿಗೆ ಸಂಬಂಧಪಟ್ಟವರು ಅಥವಾ ನಗರಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಕೆಲವು ಸಂಪರ್ಕದಲ್ಲಿ ಕೊಳಕು ನೀರು:
ಮಣಿಪಾಲ, ಈಶ್ವರನಗರ ಮೊದಲಾದ ಪ್ರದೇಶಕ್ಕೆ ಶುದ್ಧ ಕುಡಿಯುವ ನೀರು ಪೂರೈಸುವ ಕೊಳಾಯಿಯಲ್ಲಿ ಕಲುಷಿತ ನೀರು ಬರುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ. ಮನೆಯ ನೀರಿನ ಟ್ಯಾಪ್ ತಿರುಗಿಸಿದಾಗ ಮಣ್ಣು ಮಿಶ್ರಿತ ಕೆಂಪು ನೀರು ಬರುತ್ತಿದೆ. ಮಾಧವಕೃಪಾ ಶಾಲೆ ಸಮೀಪ ಪೈಪ್‌ಲೈನ್‌ಗೆ ಗಂಭೀರ ಹಾನಿಯಾಗಿರುವುದೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು ತಿಳಿಸಿದರು.
ಪೈಪ್‌ಲೈನ್‌ನಲ್ಲಿ ನೀರು ಪೂರೈಕೆ ಇದ್ದಾಗ ಸಾಕಷ್ಟು ನೀರು ಸೋರಿಕೆಯಾಗುತ್ತದೆ. ಪೂರೈಕೆ ಬಂದ್ ಆದಾಗ ನೀರು ಹಿಮ್ಮುಖ ಒತ್ತಡದಲ್ಲಿ ಮಣ್ಣಿನ ಅಂಶ ಸೇರಿ ಕೆಳ ಭಾಗದ ಸಂಪರ್ಕಕ್ಕೆ ಸೇರಿಕೊಳ್ಳುತ್ತದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಪರಿಶೀಲಿಸಿ ಕ್ರಮ :
ನಗರಕ್ಕೆ ನೀರು ಪೂರೈಸುವ ಸ್ವರ್ಣಾ ನದಿ ಬಜೆ ಡ್ಯಾಂನಲ್ಲಿ ಮತ್ತು ಮಣಿಪಾಲ ಸೇರಿದಂತೆ ವಿಶೇಷ ತಂತ್ರಜ್ಞಾನ ಸಹಾಯದಿಂದ ಎರಡು, ಮೂರು ಹಂತದಲ್ಲಿ ನೀರನ್ನು ಸಂಪೂರ್ಣ ಶುದ್ಧೀಕರಿಸಿ, ಎಲ್ಲ ಮನೆಗಳಿಗೆ ಪೂರೈಸಲಾಗುತ್ತಿದೆ. ಬೇರೆ ಜಾಗದಲ್ಲಿ ಸಣ್ಣ ಪೈಪ್‌ಲೈನ್‌ಗೆ ಹಾನಿಯಾಗಿದ್ದರೆ, ಕೆಲವು ಪೈಪುಗಳ ಸಂಪರ್ಕಕ್ಕೆ ಮಣ್ಣು ಮಿಶ್ರಿತ ನೀರು ಸೇರಿರುವ ಸಾಧ್ಯತೆ ಇದೆ. ಈ ಬಗ್ಗೆ ಸಾರ್ವಜನಿಕರು ನಿಖರ ಮಾಹಿತಿಯೊಂದಿಗೆ ದೂರು ಸಲ್ಲಿಸಿದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಎಇಇ ಮೋಹನ್‌ರಾಜ್ ತಿಳಿಸಿದ್ದಾರೆ.
ಮಣಿಪಾಲದಲ್ಲಿ ನೀರಿನ ಪೈಪ್ ಹಾನಿಯಾಗಿ ನೀರು ಸೋರಿಕೆಯಾಗುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು. ವಾರಾಹಿ ಕಾಮಗಾರಿ ವೇಳೆ ಪೈಪ್‌ಗೆ ಹಾನಿಯಾಗಿದ್ದಲ್ಲಿ ಅವರಿಂದಲೇ ಸರಿಪಡಿಸುವಂತೆ ಸೂಚನೆ ನೀಡಲಾಗುವುದು. – ಸುಮಿತ್ರಾ ನಾಯಕ್, ಅಧ್ಯಕ್ಷೆ, ನಗರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.