ರಾಜಸ್ಥಾನ: ಇಂದು ಹೊಸ ಸಚಿವ ಸಂಪುಟ ಅಸ್ತಿತ್ವಕ್ಕೆ
Team Udayavani, Nov 21, 2021, 6:30 AM IST
ಜೈಪುರ: ರಾಜಸ್ಥಾನ ಸಚಿವ ಸಂಪುಟವನ್ನು ಪುನಾರಚಿಸಲು ಮುಂದಾಗಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಶನಿವಾರದಂದು ತಮ್ಮ ಸಂಪುಟದ ಎಲ್ಲ ಸಚಿವರ ರಾಜೀನಾಮೆಯನ್ನು ಪಡೆದಿದ್ದಾರೆ.
ಗುಜರಾತ್ ಮಾದರಿಯಲ್ಲಿ ಇಡೀ ಸಂಪುಟವನ್ನು ವಿಸರ್ಜಿಸಿ, ಹೊಸ ಸಂಪುಟವನ್ನು ಅಸ್ತಿತ್ವಕ್ಕೆ ತರಲು ಅವರು ಮುಂದಾಗಿದ್ದಾರೆ. ಈಗಾಗಲೇ ಹೊಸ ಸಂಪುಟ ಸದಸ್ಯರ ಪಟ್ಟಿ ಸಿದ್ಧವಾಗಿದ್ದು, ರವಿವಾರ ಹೊಸ ಸಂಪುಟ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಹೇಳಲಾಗಿದೆ.
10 ಹೊಸಬರಿಗೆ ಅವಕಾಶ?: ಗೆಹ್ಲೋಟ್‌ರ ಹೊಸ ಸಂಪುಟದಲ್ಲಿ ಒಟ್ಟು 10 ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಅವರಲ್ಲಿ ಆರು ಶಾಸಕರು ಗೆಹ್ಲೋಟ್ ಬಳಗದವರಾಗಿದ್ದು, ಉಳಿದ ನಾಲ್ವರು ಕಾಂಗ್ರೆಸ್‌ನ ಯುವ ನಾಯಕ ಸಚಿನ್ ಪೈಲಟ್ ತಂಡದವರಾಗಿರಲಿದ್ದಾರೆ ಎಂದು “ನ್ಯೂಸ್ 18′ ವರದಿ ಮಾಡಿದೆ.
ಹೊಸ ಸಂಪುಟ ಅಸ್ತಿತ್ವಕ್ಕೆ ಬಂದ ಕೂಡಲೇ 15 ಸಂಸದೀಯ ಕಾರ್ಯದರ್ಶಿಗಳನ್ನು ಸೇರಿಸಿಕೊಳ್ಳಲಾಗುವುದು. ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ರವಿವಾರ ಸಂಜೆ 4 ಗಂಟೆಗೆ ರಾಜ್ಯಪಾಲರ ನಿವಾಸದಲ್ಲಿ ನಡೆಯಲಿದೆ.
ಎರಡು ಸ್ಥಾನ ಖಾಲಿ?: ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಸೇರಿ ಒಟ್ಟು 30 ಸಚಿವ ಸ್ಥಾನಕ್ಕೆ ಅವಕಾಶವಿದ್ದು, ಅದರಲ್ಲಿ 2 ಸ್ಥಾನವನ್ನು ಖಾಲಿ ಬಿಡಲಾಗುವುದು ಎನ್ನಲಾಗಿದೆ. ಕಾಂಗ್ರೆಸ್‌ನ್ನು ಬೆಂಬಲಿಸಿದ ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನವಿಲ್ಲವೆಂದು ಈಗಾಗಲೇ ಸ್ಪಷ್ಟಪಡಿಸಲಾಗಿದ್ದು, ಬಿಎಸ್‌ಪಿ ತ್ಯಜಿಸಿ ಕಾಂಗ್ರೆಸ್ ಸೇರಿದ್ದ ಶಾಸಕರಿಗೆ ಹೊಸ ಸಂಪುಟದಲ್ಲಿ ಆದ್ಯತೆ ನೀಡಲಾಗುತ್ತದೆ ಎಂದು ಕಾಂಗ್ರೆಸ್‌ನ ಆಂತರಿಕ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.