ಆಂಧ್ರ ಮಳೆ ಅಬ್ಬರ 


Team Udayavani, Nov 21, 2021, 7:25 AM IST

ಆಂಧ್ರ ಮಳೆ ಅಬ್ಬರ 

ಹೈದರಾಬಾದ್‌/ಚೆನ್ನೈ/ಬೆಂಗಳೂರು: ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ಸರಣಿ ವಾಯುಭಾರ ಕುಸಿತದ ಪರಿಣಾಮವಾಗಿ ಸುರಿಯುತ್ತಿರುವ ನಿರಂತರ ಮಳೆ ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಕರ್ನಾಟಕಗಳನ್ನು ಹೈರಾಣಾಗಿಸಿದೆ.

ನಾಲ್ಕೂ ರಾಜ್ಯಗಳಲ್ಲಿ ಜನಜೀವನವು ಅಸ್ತವ್ಯಸ್ತವಾಗಿದ್ದು, ವರುಣನ ಅಬ್ಬರವು ಹಲವೆಡೆ ದಿಢೀರ್‌ ಪ್ರವಾಹ, ಪ್ರಾಣಹಾನಿ, ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ ಉಂಟುಮಾಡಿದೆ. ರಾಜ್ಯ ದಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದ ಉಂಟಾದ ಅವಘಡ ಗಳಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರವೂ ಮಳೆ ಸಂಬಂಧಿ ಘಟನೆಗಳಿಂದ 6 ಮಂದಿ ಮೃತ ಪಟ್ಟಿದ್ದರು. ಆಂಧ್ರದಲ್ಲಿ ಮಳೆ ಕೋಲಾಹಲ ಸೃಷ್ಟಿಸಿದೆ. ಪ್ರತ್ಯೇಕ ದುರಂತಗಳಲ್ಲಿ 30 ಮಂದಿ ಸಾವನ್ನ ಪ್ಪಿದ್ದು, 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ನೂರಾರು ಗ್ರಾಮ ಜಲಾವೃತ:

ರಾಯಲಸೀಮಾ ಪ್ರದೇಶವು ಅತೀ ಹೆಚ್ಚು ಬಾಧಿತವಾಗಿದ್ದು, ಚಿತ್ತೂರು, ಕಡಪ, ನೆಲ್ಲೂರು ಮತ್ತು ಅನಂತಪುರದಲ್ಲಿ ಎಡೆ ಬಿಡದೆ ಸುರಿಯುತ್ತಿರುವ ಮಳೆ ಯಿಂದ ನೂರಾರು ಗ್ರಾಮಗಳು ಜಲಾವೃತಗೊಂಡಿವೆ. 20 ಸಾವಿರಕ್ಕೂ ಅಧಿಕ ಮಂದಿಯನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ಅವರು ಪ್ರವಾಹಪೀಡಿತ ಪ್ರದೇಶಗಳಲ್ಲಿ ಶನಿವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ.

ಚಿತ್ತೂರು, ನೆಲ್ಲೂರು ಜಿಲ್ಲೆಗಳಲ್ಲಿ ಎಲ್ಲ ಕಾಲುವೆಗಳು, ಕೆರೆಗಳು ತುಂಬಿ ಹರಿಯುತ್ತಿದ್ದು, ಸ್ವರ್ಣಮುಖೀ, ಕಾಳಿಂಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತಗ್ಗುಪ್ರದೇಶಗಳು ಜಲಾವೃತಗೊಂಡಿರುವ ಕಾರಣ ಅನೇಕರು ಕೊಚ್ಚಿಹೋಗಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಬರಿಮಲೆ ಯಾತ್ರೆಗೆ ಅಡ್ಡಿ :

ಕೇರಳದ ಪಟ್ಟಣಂತಿಟ್ಟ ಜಿಲ್ಲೆಯಾದ್ಯಂತ ಶನಿವಾರ ಧಾರಾಕಾರ ಮಳೆಯಾಗಿದೆ. ಪಂಪಾ ನದಿಯ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ 2 ಗೇಟ್‌ಗಳನ್ನು ತೆರೆದು ನೀರು ಹೊರಬಿಡಲಾಗಿದೆ. ಭಾರೀ ಮಳೆಯ ಕಾರಣ ಶಬರಿಮಲೆ ಯಾತ್ರೆಯನ್ನು ಶನಿವಾರ ದಿನದ ಮಟ್ಟಿಗೆ ಸ್ಥಗಿತಗೊಳಿಸಿ ಪಟ್ಟಣಂತಿಟ್ಟ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.

ತಿರುಪತಿ: ಮುಂದುವರಿದ ಪ್ರವಾಹಸ್ಥಿತಿ :

ತಿರುಪತಿ ಅಕ್ಷರಶಃ ಮುಳುಗಡೆಯಾಗಿದೆ. ಶನಿವಾರವೂ ಮಳೆ ಸುರಿದ ಕಾರಣ ಪ್ರವಾಹ ಇಳಿಕೆಯಾಗಿಲ್ಲ. ಚಂದ್ರಗಿರಿ, ಶ್ರೀಕಾಳಹಸ್ತಿ ಗ್ರಾಮಗಳೂ ಜಲಾವೃತಗೊಂಡಿವೆ. ಅತ್ಯವಶ್ಯಕ ಸಾಮಗ್ರಿಗಳಿಗೂ ಹಾಹಾಕಾರ ಪಡುವ ಸ್ಥಿತಿ ಬಂದಿದೆ.

ಸುಮಾರು 32 ಸಾವಿರ ಹೆಕ್ಟೇರ್‌ ಪ್ರದೇಶದ ಬೆಳೆಗಳು ನಾಶವಾಗಿವೆ. ಅನಂತ ಪುರದ ಕದಿರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಇಬ್ಬರು ಮಕ್ಕಳ ಸಹಿತ ಐವರು ಮೃತಪಟ್ಟಿದ್ದಾರೆ. ಚೆಯ್ಯೂರು ಗ್ರಾಮದಲ್ಲಿ ಮೂರು ಸರಕಾರಿ ಬಸ್‌ಗಳು ಪ್ರವಾಹದಲ್ಲಿ ಸಿಲುಕಿದ್ದು, 35 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಶನಿವಾರ ಮತ್ತು ರವಿವಾರ 10 ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ರದ್ದು ಮಾಡಲಾಗಿದೆ.

3 ಸಾವು :

ತಮಿಳುನಾಡಿನಲ್ಲೂ ಮಳೆಯ ಅಬ್ಬರ ಮುಂದುವರಿದಿದ್ದು, ಶನಿವಾರ ಒಂದೇ ದಿನ ಮೂವರು ಸಾವಿಗೀಡಾಗಿದ್ದಾರೆ, 300 ಜಾನುವಾರುಗಳು ಮೃತಪಟ್ಟಿವೆ. ಸೇಲಂನ ಮೆಟ್ಟೂರು ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಶನಿವಾರ ತಮಿಳುನಾಡಿನ 37 ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಸುಮಾರು 10 ಸಾವಿರ ಮಂದಿಗೆ 220 ಪರಿಹಾರ ಶಿಬಿರಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ. ರವಿವಾರವೂ ತಮಿಳುನಾಡಿನ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದಲ್ಲಿ  6  ಮಂದಿ ದುರ್ಮರಣ 

ಬೆಂಗಳೂರು : ರಾಜ್ಯದಲ್ಲಿ ಶನಿವಾರ ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರು ಮೃತ ಪಟ್ಟಿದ್ದಾರೆ.

ಭಾರೀ ಮಳೆಯಿಂದ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸ್ಕೂಟರ್‌ ಸಮೇತ ಪೊನ್ನಸ್ವಾಮಿ (53) ಅವರು ಕೊಚ್ಚಿಹೋದ ಘಟನೆ ಚಿಕ್ಕಮಗಳೂರು ಜಿಲ್ಲೆ ಹುಲಿ ತಿಮ್ಮಾಪುರದ ತೀರ್ಥಹಳ್ಳ ಸೇತುವೆ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಬಿಳ್ಳೂರು ಗ್ರಾಮದಲ್ಲಿ ರಮಣ (45) ನೀರುಪಾಲಾಗಿದ್ದಾರೆ. ಬೆಂಗ ಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಜಡಿಗೇನಹಳ್ಳಿ ಹೋಬಳಿಯಲ್ಲಿ ಮನೆ ಕುಸಿದು ಮುನಿಯಮ್ಮ (65) ಮೃತಪಟ್ಟಿದ್ದಾರೆ. ದನದ ಕೊಟ್ಟಿಗೆಯ ಗೋಡೆ ಕುಸಿದು ತುಮ ಕೂರು ಜಿಲ್ಲೆ ಕುಣಿ ಗಲ್‌ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮೆಣಸಿನಕೆರೆದೊಡ್ಡಿ ಗ್ರಾಮದ ರೈತ ನಾಗಣ್ಣ (55) ಸಾವಿಗೀಡಾಗಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ಮನೆ ಕುಸಿದು ಬಸವರಾಜಪ್ಪ ಹಾಲಪ್ಪ (62) ಮೃತಪಟ್ಟರೆ, ಚನ್ನಗಿರಿ ತಾಲೂಕಿನ ನಲ್ಲೂರು ಸೇತುವೆ ಬಳಿ ಕೆಂಚಪ್ಪ (70) ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಶನಿವಾರ ದಿನವಿಡೀ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಭಾರೀ ಮಳೆ ಸುರಿದಿದೆ. ಮಳೆಯಿಂದಾಗಿ ಕೃಷಿ ಹಾನಿ ಮುಂದುವರಿದಿದೆ. ತರಕಾರಿ ಧಾರಣೆ ಗಗನಕ್ಕೇರಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.