ದೇಶದ್ರೋಹಿ, ಸಿಖ್ ವಿರೋಧಿ ಬರಹ: ನಟಿ ಕಂಗನಾ ವಿರುದ್ಧ ಪೊಲೀಸ್ ದೂರು
Team Udayavani, Nov 21, 2021, 12:03 PM IST
ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ದೇಶದ್ರೋಹ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ನಟಿ ಕಂಗನಾ ರಣಾವತ್ ವಿರುದ್ಧ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಮತ್ತು ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ (ಡಿಎಸ್‌ಜಿಎಂಸಿ) ಶನಿವಾರ ಪೊಲೀಸ್ ದೂರುಗಳನ್ನು ದಾಖಲಿಸಿದೆ.
ಐವೈಸಿಯ ರಾಷ್ಟ್ರೀಯ ಕಾರ್ಯದರ್ಶಿ ಅಮರೀಶ್ ರಂಜನ್ ಪಾಂಡೆ ಮತ್ತು ಸಂಘಟನೆಯ ಕಾನೂನು ಕೋಶದ ಸಹ-ಸಂಯೋಜಕ ಅಂಬುಜ್ ದೀಕ್ಷಿತ್ ಅವರು ಇಲ್ಲಿನ ಸಂಸತ್ ರಸ್ತೆಯ ಪೊಲೀಸ್ ಠಾಣೆಯಲ್ಲಿ ನಟಿ ವಿರುದ್ಧ ದೂರು ದಾಖಲಿಸಿದ್ದಾರೆ.
ಏತನ್ಮಧ್ಯೆ, ಡಿಎಸ್‌ಜಿಎಂಸಿ ತನ್ನ ಇನ್‌ಸ್ಟಾಗ್ರಾಮ್ ನಲ್ಲಿ ನಟಿ ಕಂಗನಾ ಬಳಸಿದ ಪದಗಳಿಗೆ ಬಲವಾದ ವಿರೋಧ ವ್ಯಕ್ತಪಡಿಸಿ ಮತ್ತು ಪೊಲೀಸ್ ದೂರನ್ನು ಸಹ ದಾಖಲಿಸಿದ್ದು, ಹೇಳಿಕೆಗಳು “ಅಗೌರವ, ಅವಮಾನಕರ’ ಎಂದು ಕರೆದಿದೆ.
ದೂರಿನ ಪತ್ರವನ್ನು ಮುಂಬೈನ ಹೆಚ್ಚುವರಿ ಪೊಲೀಸ್ ಕಮಿಷನರ್ ಮತ್ತು ದೆಹಲಿಯ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿರುವ ದೆಹಲಿ ಪೊಲೀಸರ ಸೈಬರ್ ಸೆಲ್‌ಗೆ ನೀಡಲಾಗಿದೆ.
ಡಿಎಸ್‌ಜಿಎಂಸಿ ತನ್ನ ದೂರಿನಲ್ಲಿ,ಕಂಗನಾ ಅವರು ತನ್ನ ಪೋಸ್ಟ್ ಮೂಲಕ “ಉದ್ದೇಶಪೂರ್ವಕವಾಗಿ ರೈತರ ಪ್ರತಿಭಟನೆಯನ್ನು “ಖಾಲಿಸ್ಥಾನಿ ಚಳುವಳಿಗಳು” ಎಂದು ಬಿಂಬಿಸಿದ್ದಾರೆ ಎಂದು ಆರೋಪಿಸಿದೆ.
ಕಂಗನಾ ಅವರು ಸಿಖ್ ಸಮುದಾಯವನ್ನು “ಖಾಲಿಸ್ತಾನಿ ಭಯೋತ್ಪಾದಕರು” ಎಂದು ಕರೆದಿದ್ದಾರೆ ಮತ್ತು ಹತ್ಯಾಕಾಂಡವು 1984 ರಲ್ಲಿ ಮತ್ತು ಅದಕ್ಕೂ ಮೊದಲು ಲೆಕ್ಕಾಚಾರದಂತೆ ನಡೆದಿತ್ತು ಎಂದಿರುವುದನ್ನು ದೂರಿನಲ್ಲಿ ಖಂಡಿಸಲಾಗಿದೆ.
ನಟಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಅಧಿಕಾರಿಗಳಿಂದ “ಕಠಿಣ ಕಾನೂನು ಕ್ರಮ” ವನ್ನು ಡಿಎಸ್‌ಜಿಎಂಸಿ ಕೋರಿದೆ.
“ಸಿಖ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಕ್ರಿಮಿನಲ್ ಉದ್ದೇಶದಿಂದ ಪೋಸ್ಟ್ ಅನ್ನು ಉದ್ದೇಶಪೂರ್ವಕವಾಗಿ ಸಿದ್ಧಪಡಿಸಲಾಗಿದೆ ಮತ್ತು ಹಂಚಿಕೊಳ್ಳಲಾಗಿದೆ” ಎಂದು ಅದು ಆರೋಪಿಸಿದೆ.
ಡಿಎಸ್‌ಜಿಎಂಸಿ ಅಧ್ಯಕ್ಷ ಮತ್ತು ಶಿರೋಮಣಿ ಅಕಾಲಿ ದಳ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಸಿಖ್ಖರನ್ನು ಗುರಿಯಾಗಿಸಿಕೊಂಡು ಕಂಗನಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಸರ್ಕಾರವು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
“ಅವಳನ್ನು ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಅಥವಾ ಜೈಲಿಗೆ ಹಾಕಬೇಕು. ಇನ್‌ಸ್ಟಾಗ್ರಾಮ್‌ನಲ್ಲಿ ಆಕೆಯ ದ್ವೇಷಪೂರಿತ ಬರಹಕ್ಕಾಗಿ ನಾವು ಸರ್ಕಾರದಿಂದ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ ಎಂದು ಸಿರ್ಸಾ ಟ್ವೀಟ್‌ನಲ್ಲಿ ಬರೆದಿದ್ದಾರೆ.
ಭಾರತೀಯ ದಂಡ ಸಂಹಿತೆಯ ಐಪಿಸಿ ಸೆಕ್ಷನ್ 124ಎ (ದೇಶದ್ರೋಹ), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ನಟಿಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೂರು ನೀಡಲಾಗಿದೆ.
ಕೇಂದ್ರವು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಬಳಿಕ, ರಣಾವತ್ ಅವರು ಭಾರತವನ್ನು “ಜಿಹಾದಿ ರಾಷ್ಟ್ರ” ಎಂದು ಇನ್‌ಸ್ಟಾಗ್ರಾಮ್ ಸ್ಟೋರಿಗಳನ್ನು ಪೋಸ್ಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.