ಇರಸವಾಡಿ ಗ್ರಾಮದ ಕೆರೆಯಲ್ಲಿ ಸಹಸ್ರಾರು ಮೀನುಗಳು ಸಾವು..!

Team Udayavani, Nov 21, 2021, 12:56 PM IST

ಇರಸವಾಡಿ ಗ್ರಾಮದ ಕೆರೆಯಲ್ಲಿ ಸಹಸ್ರಾರು ಮೀನುಗಳು ಸಾವು..!

ಯಳಂದೂರು: ಸಮೀಪದ ಇರಸವಾಡಿ ಗ್ರಾಮದ ಕೆರೆಯಲ್ಲಿ ಕಳೆದ ಎರಡು ದಿನಗಳಿಂದ ಸಾವಿರಾರೂ ಮೀನುಗಳು ಸಾವನ್ನಪ್ಪಿವೆ. ಕೆರೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸಹಿಸಿಕೊಳ್ಳಲಾಗದ ದುರ್ವಾಸನೆ ಬರುತ್ತಿದೆ. ಚಾಮರಾಜನಗರ ತಾಲೂಕಿನ ಇರಸವಾಡಿ ಕೆರೆಯು ಸುಮಾರು 85 ಹೆಕ್ಟೇರ್‌ನಷ್ಟು ವಿಸ್ತೀರ್ಣದ ಕೆರೆಯಲ್ಲಿ ಕಳೆದ ಒಂದು ವಾರದಿಂದ ನೀರು ಸಂಪೂರ್ಣ ಭರ್ತಿಯಾಗಿ ತುಂಬಿಕೊಂಡಿದೆ.

ಕೆರೆಯನ್ನು ಬಾಲಸ್ವಾಮಿ ಎಂಬುವವರು ಗುತ್ತಿಗೆ ಪಡೆದುಕೊಂಡು 3 ವರ್ಷದಿಂದ ಕೆರೆಯಲ್ಲಿ ಮೀನುಗಳನ್ನು ಸಾಕಾಣಿಕೆ ಮಾಡುತ್ತಿದ್ದಾರೆ. ಈ ವರ್ಷವೂ ಕಳೆದ 5 ತಿಂಗಳ ಹಿಂದೆ ಲಕ್ಷಕ್ಕೂ ಹೆಚ್ಚು ವಿವಿಧ ಜಾತಿಯ ಮೀನಿನ ಮರಿಗಳನ್ನು ಬಿಟ್ಟಿದ್ದರು. ಆದರೆ ಇದ್ದಕ್ಕಿದ್ದಂತೆ ಕಳೆದ ಎರಡು ದಿನಗಳಿಂದ ಸಾವನ್ನಪ್ಪಿದ್ದು, ಬಹಳ ನಷ್ಟ ಉಂಟಾಗಿದೆ. ಕೆರೆಯ ಮಾರ್ಗದಿಂದ ಪಟ್ಟಣಕ್ಕೆ ಬರುವವರು ಮೂಗು ಮುಚ್ಚಿಕೊಂಡು ಬರುವಂತಾಗಿದೆ.

ಕಲುಷಿತ ನೀರು ಸೇರ್ಪಡೆ: ಜಿಲ್ಲೆಯ ಸತತ ಮಳೆಯಾಗುತ್ತಿರುವ ಕಾರಣ ಹಳ್ಳ, ಕೊಳ್ಳ, ಕೆರೆ ಕಟ್ಟೆಗಳಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತದೆ. ಇದರ ಜೊತೆಗೆ ಗ್ರಾಮದ ಚರಂಡಿ ನೀರು ಕೆರೆಗೆ ಸೇರಿರುವ ಕಾರಣ ಕಲುಷಿತವಾಗಿರಬಹುದು. ಇಲ್ಲವಾದರೆ ಯಾರಾದರೂ ದುಷ್ಕರ್ಮಿಗಳು ಕ್ರಿಮಿನಾಶಕವನ್ನು ಮಿಶ್ರಣ ಮಾಡಿರಬಹುದು ಎಂಬು ಶಂಕೆಯನ್ನು ಮೀನುಗಾರರು ವ್ಯಕ್ತಪಡಿಸಿದರು.

ಇದನ್ನೂ ಓದಿ:- ಕುರುಗೋಡು: ರೈತರಿಗೆ ತರಬೇತಿ ಕಾರ್ಯಕ್ರಮ

ಇರಸವಾಡಿ ಗ್ರಾಮದ ಕೆರೆಯಲ್ಲಿ ಕಳೆದ 5 ತಿಂಗಳಿಂದ ಲಕ್ಷಕ್ಕೂ ಹೆಚ್ಚು ವಿವಿಧ ಜಾತಿಯ ಮೀನಿನ ಮರಿಗಳನ್ನು ಬಿಡಲಾಗಿತ್ತು. ಆದರೆ, ಕಳೆದ ಎರಡು ದಿನಗಳಿಂದ 1 ಕೆ.ಜಿ ತೂಕದ ಸಾವಿರಾರು ಮೀನುಗಳು ಸಾವನ್ನಪ್ಪಿದೆ. ಈ ಬಗ್ಗೆ ಸಂಬಂಧಪಟ್ಟ ಮೀನುಗಾರಿಕೆಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕಾಗಿದೆ ಎಂದು ವೈ.ಕೆ.ಮೋಳೆ ಶೇಖರ್‌ ಮನವಿ ಮಾಡಿದ್ದಾರೆ.

“ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದ ಕೆರೆಯಲ್ಲಿ ಮೀನುಗಳು ಸಾವನ್ನಪ್ಪುತ್ತಿರುವ ಬಗ್ಗೆ ಭೇಟಿ ನೀಡಿ ಪರಿಶೀಲಿಸಿದ್ದು, ಸತತ ಮಳೆಯಾಗುತ್ತಿರುವ ಪರಿಣಾಮ ಕೊಳಚೆ ನೀರು ಕೆರೆಗೆ ಸೇರಿರುವ ಕಾರಣ ಮೀನುಗಳು ಮೃತಪಟ್ಟಿರಬಹುದು. ಈ ಬಗ್ಗೆ ಸಂಬಂಧಪಟ್ಟ ಗುತ್ತಿಗೆದಾರರು ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದರೆ ಕ್ರಮವಹಿಸಲಾಗುವುದು.”

ಪ್ರಶಾಂತ್‌, ಸಹಾಯಕ ನಿರ್ದೇಶಕ ಮೀನುಗಾರಿ ಇಲಾಖೆ.

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.