ಬೆಂಗಳೂರು: ಮನೆಗೆ ನುಗ್ಗಿ ಪುತ್ರಿಯರ ಎದುರೇ ವ್ಯಕ್ತಿಯ ಕೊಚ್ಚಿ ಕೊಲೆ
Team Udayavani, Nov 22, 2021, 5:16 PM IST
ಬೆಂಗಳೂರು: ಬೆಂಗಳೂರಿನ ಅವರ ನಿವಾಸದಲ್ಲಿ 46 ವರ್ಷದ ವ್ಯಕ್ತಿಯನ್ನು ಇಬ್ಬರು ಪುತ್ರಿಯರ ಎದುರೇ ನಾಲ್ವರ ತಂಡವು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸೋಮವಾರ ನಡೆದಿದೆ.
ಮೃತರನ್ನು ಬಿಹಾರ ಮೂಲದ ಯಲಹಂಕ ನ್ಯೂ ಟೌನ್ನಲ್ಲಿ ವಾಸವಾಗಿರುವ ದೀಪಕ್ ಕುಮಾರ್ ಸಿಂಗ್ (46) ಎಂದು ಗುರುತಿಸಲಾಗಿದೆ. ದೀಪಕ್ ಬೆಂಗಳೂರಿನ ಜಿಕೆವಿಕೆ ಕ್ಯಾಂಪಸ್ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಪತ್ನಿ ಬಿಹಾರಕ್ಕೆ ಹೋಗಿದ್ದರಿಂದ ದೀಪಕ್ ಮನೆಯಲ್ಲಿ ಇಬ್ಬರು ಪುತ್ರಿಯರೊಂದಿಗೆ ಇದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮನೆಗೆ ನುಗ್ಗಿದ ನಾಲ್ವರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ಅವರ ಪುತ್ರಿಯರಿಗೂ ಬೆದರಿಕೆ ಹಾಕಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.