ಮಳೆ ಹಾನಿ ಪ್ರದೇಶವನ್ನು ಪರಿಶೀಲಿಸಿದ ಶಾಸಕ ಡಾ. ಜಿ ಪರಮೇಶ್ವರ್
Team Udayavani, Nov 22, 2021, 7:36 PM IST
ಕೊರಟಗೆರೆ: ಮಳೆಯಿಂದ ಬಹುತೇಕ ತಾಲೂಕಿನ ಹಲವು ಕಡೆ ಮನೆಗಳು ಬಿದಿದ್ದು, ರಸ್ತೆಗಳು ಹಾಳಾಗಿದ್ದು ಅವುಗಳನ್ನು ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳಿಗೆ ಶೀಘ್ರ ಅಗತ್ಯ ಪರಿಹಾರವನ್ನು ಕಲ್ಪಿಸುವಂತೆ ಸೂಚಿಸಿರುವುದಾಗಿ ಶಾಸಕ ಡಾ. ಜಿ ಪರಮೇಶ್ವರ್ ತಿಳಿಸಿದರು.
ತಾಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾ.ಪಂ ವ್ಯಾಪ್ತಿಯ ಜಿ. ನಾಗೇನಹಳ್ಳಿ, ಸಂಕೇನಹಳ್ಳಿ ಗೊಲ್ಲರಹಟ್ಟಿ, ಹಂಚಿಹಳ್ಳಿ ಸೇರಿದಂತೆ ಇತರೆ ಕಡೆಗಳಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿ ಮಾತನಾಡಿದರು.
ಈಗಾಗಲೇ ತಾಲೂಕು ಆಡಳಿತದ ವತಿಯಿಂದ ಸಹಾಯವಾಣಿಗಳನ್ನು ತೆರೆದಿದ್ದು ತೀವ್ರ ತೊಂದರೆಯಾದರೆ ಸಹಾಯವಾಣಿಗೆ ಕರೆ ಮಾಡಿದರೆ ತಕ್ಷಣದ ಪರಿಹಾರವನ್ನು ಕಲ್ಪಿಸುವ ವ್ಯವಸ್ಥೆಯನ್ನು ಮಾಡಿರುವುದಾಗಿ ಹೇಳಿದರು.
ಸರ್ಕಾರಕ್ಕೆ ಒತ್ತಾಯ:-
ಮಳೆಯಿಂದ ಹಾನಿಗೊಳಗಾಗಿರುವಂತಹ ಮನೆಗಳನ್ನು ಈಗ ಸುಸ್ಥಿತಿಗೆ ತರಲಾಗುವುದಿಲ್ಲ ಪ್ರಕೃತಿ ವಿಕೋಪದಡಿಯಲ್ಲಿಯೇ ಶೀಘ್ರವಾಗಿ ವಸತಿ ನಿರ್ಮಿಸಿಕೊಳ್ಳಲು ಬೇರೆ ಯಾವುದೇ ವಸತಿ ನಿಲಯಗಳ ಆಶ್ರಯವಿಲ್ಲದೇ ಶೀಘ್ರ ವಿಶೇಷ ಅನುಧಾನವನ್ನು ಬಿಡುಗಡೆ ಮಾಡಿ ಮನೆ ನಿರ್ಮಿಸಿಕೊಳ್ಳಲು ಅನುವು ಮಾಡಿಕೊಡಬೇಕು ಎಂದು ವಸತಿ ಸಚಿವರಿಗೆ ಮತ್ತು ಮುಖ್ಯಮಂತ್ರಿಗೆ ಒತ್ತಾಯಿಸಿದರು.
ಬೋಡಬಂಡೇನಹಳ್ಳಿ-ಹಂಚಿಹಳ್ಳಿ ರಸ್ತೆಗೆ ಅನುಧಾನ:-
ಗ್ರಾ.ಪಂ ವ್ಯಾಪ್ತಿಯ ಬೋಡಬಂಡೇನಹಳ್ಳಿಯಿಂದ ಹಂಚಿಹಳ್ಳಿಯವರೆಗೆ ರಸ್ತೆ ಬೇಡಿಕೆಯಿಟ್ಟ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿ ಈಗಾಗಲೇ ಈ ರಸ್ತೆಗೆ ಅನುಧಾವನ್ನು ಬಿಡುಗಡೆ ಮಾಡಿದ್ದು ಟೆಂಟರ್ ಪ್ರಕ್ರಿಯೆ ಸಹ ಆಗಿದ್ದು ಶೀಘ್ರದಲ್ಲಿಯೇ ರಸ್ತೆ ಪ್ರಾರಂಭವಾಗುತ್ತದೆ ಎಂದರು.
ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಮಾಜಿ ಅಧ್ಯಕ್ಷ ಮೈಲಾರಪ್ಪ, ಯುವ ಅಧ್ಯಕ್ಷ ವಿನಯ್ ಕುಮಾರ್, ಹಂಚಿಹಳ್ಳಿ ಗ್ರಾ.ಪಂ ಅಧ್ಯಕ್ಷೆ ರೇಣುಕಾ, ಉಪಾಧ್ಯಕ್ಷೆ ರಾಜೇಶ್ವರಿ, ಸದ್ಯರಾದ ವಿಜಯಕುಮಾರಿ, ಯೋಗಣ್ಣ, ರಂಗಾನಾಥ್, ಮುಖಂಡರಾದ ಸೋಮಖರ್, ಶಿವರಾಂ, ನಾಗರಾಜು, ಸಕ್ಕರೆ ದೇವರಾಜು, ಕಂದಾಯ ನಿರೀಕ್ಷಕ ಪ್ರತಾಪ್, ಪಿಡಿಒ ಮೈಲಣ್ಣ, ಗ್ರಾಮಲೆಕ್ಕಿಗ ಪವನ್ ಕುಮಾರ್, ಸೇರಿದಂತೆ ಇತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.