ಕಾಂಗ್ರೆಸ್ ಪಕ್ಷದ ನೀತಿ ದೇಶಕ್ಕೆ ಅನಿವಾರ್ಯ
ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷ ಬಲವರ್ಧನೆಗೆ ಶ್ರಮಿಸಬೇಕು
Team Udayavani, Nov 22, 2021, 5:35 PM IST
ಹಿರೇಕೆರೂರ: ಸರ್ವರನ್ನೂ ಸಮನಾಗಿ ಕಾಣುವ ಕಾಂಗ್ರೆಸ್ ಪಕ್ಷದ ನೀತಿ ದೇಶಕ್ಕೆ ಅನಿವಾರ್ಯವಾಗಿದೆ ಎಂದು ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಹೇಳಿದರು. ಪಟ್ಟಣದದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಉದ್ಘಾಟನೆ ಹಾಗೂ ನೂತನವಾಗಿ ನೇಮಕವಾದ ಪಕ್ಷದ ಪದಾ ಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಜನರಿಗಾಗಿ ಇರುವ ಪಕ್ಷವಾಗಿದೆ. ರೈತರು ಬಡವರ ಏಳ್ಗೆಗೆಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದ್ದು, ಸರ್ವರಿಗೂ ಸಮಬಾಳು ಸಮಪಾಲು ನೀಡುವುದೇ ಕಾಂಗ್ರೆಸ್ ಧ್ಯೇಯವಾಗಿದೆ. ಕಾಂಗ್ರೆಸ್ ಪಕ್ಷದ ನೀತಿಯ ಮುಂದೆ ಬಿಜೆಪಿಯ ಅನೀತಿ ಬಹಳ ದಿನ ನಡೆಯುವುದಿಲ್ಲ. ದೇಶ ಮತ್ತು ರಾಜ್ಯದ ರೈತರು ನೆಮ್ಮದಿಯಿಂದ ಇರಲು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತ್ರ ಸಾಧ್ಯವಿದೆ. ಬಿಜೆಪಿ ಅಲೆ ಕ್ಷಣಿಕ. ಆದ್ದರಿಂದ ಕಾರ್ಯಕರ್ತರು ಧೃತಿಗೆಡದೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷ ಬಲವರ್ಧನೆಗೆ ಶ್ರಮಿಸಬೇಕು ಎಂದು ಕೆರ ನೀಡಿದರು.
ಪಕ್ಷದ ವಿವಿಧ ಹುದ್ದೆಗಳಿಗೆ ಆಯ್ಕೆಯಾದ 50 ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ ಮಡಿವಾಳರ, ಜಿಪಂ ಮಾಜಿ ಅಧ್ಯಕ್ಷ ಎಸ್.ಕೆ. ಕರಿಯಣ್ಣನವರ, ಮುಖಂಡರಾದ ಮಂಜುನಾಥ ತಂಬಾಕದ, ದಿಗ್ವಿಜಯ ಹತ್ತಿ, ಪ್ರಕಾಶ ಬನ್ನಿಕೋಡ, ಬಿ.ಎನ್. ಬಣಕಾರ, ಎ.ಕೆ. ಪಾಟೀಲ, ದುರುಗಪ್ಪ ನೀರಲಗಿ, ವಿನಯ ಪಾಟೀಲ, ವಸಂತ ದ್ಯಾವಕ್ಕಳವರ, ಜಿ.ವಿ. ಕುಲಕರ್ಣಿ, ಸಲೀಂ ಮುಲ್ಲಾ, ಶೇಕಣ್ಣ ಉಕ್ಕುಂದ, ಸುರೇಶ ಮಡಿವಾಳರ, ಜ್ಯೋತಿ ಜಾಧವ, ಮಂಜು ಶಿವನಕ್ಕನವರ, ಆನಂದ ನಾಯ್ಕರ್, ಸೋಮಣ್ಣ ಪೂಜಾರ, ಶಶಿಕಲಾ ಆರೀಕಟ್ಟಿ, ಮಾಲತೇಶ ಬಿಲ್ಲಳ್ಳಿ, ನಾಗರಾಜ ಪ್ಯಾಟಿ, ಮಾಲತೇಶ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.