ವಿಜಯಪುರ: ಪಕ್ಷೇತರ ಸ್ಪರ್ಧೆಯ ಭೀತಿ; ಸುನಿಲ ಗೌಡಗೆ ಕಾಂಗ್ರೆಸ್ ಟಿಕೇಟ್

ಎಸ್.ಆರ್.ಪಾಟೀಲ ಅವರನ್ನು ಕೈ ಬಿಟ್ಟಿರುವುದು ರಾಜಕೀಯ ಅಚ್ಚರಿ

Team Udayavani, Nov 22, 2021, 8:30 PM IST

1-asfsaas

ವಿಜಯಪುರ : ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಕ್ಷೇತ್ರದ ದ್ವಿಸದಸ್ಯತ್ವ ಕ್ಷೇತ್ರಕ್ಕೆ ಕಾಂಗ್ರೆಸ್ ಏಕೈಕ ಅಭ್ಯರ್ಥಿ ಹೆಸರನ್ನು ಪ್ರಕಟಿಸಿದ್ದು, ವಿಜಯಪುರ ಜಿಲ್ಲೆಗೆ ಆದ್ಯತೆ ನೀಡಿದೆ. ಹಾಲಿ ಸದಸ್ಯ ಸುನಿಲಗೌಡ ಪಾಟೀಲ ಅವರ ಹೆಸರನ್ನು ಪ್ರಕಟಿಸಿದ್ದು, ಹಾಲಿ ಮೇಲ್ಮನೆಯ ವಿಪಕ್ಷ ನಾಯಕ, ನಾಲ್ಕು ಬಾರಿ ಸತತ ವಿಜಯ ಸಾಧಿಸಿರುವ ಬಾಗಲಕೋಟೆ ಮೂಲದ ಎಸ್.ಆರ್.ಪಾಟೀಲ ಅವರನ್ನು ಕೈ ಬಿಟ್ಟಿರುವುದು ರಾಜಕೀಯ ಅಚ್ಚರಿಗೆ ಕಾರಣವಾಗಿದೆ.

ಕಾಂಗ್ರೆಸ್ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ವಿಷಯದಲ್ಲಿ ವಿಜಯಪುರ ಅವಳಿ ಜಿಲ್ಲೆಗಳ ದ್ವಿ ಸದಸ್ಯತ್ವದ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಒಬ್ಬರೇ ವ್ಯಕ್ತಿಗೆ ಟಿಕೇಟ ನೀಡಿಕೆ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯನ್ನು ಪರಿಗಣಿಸಿದೆ.

ಬಿಜೆಪಿ ಈಗಾಗಲೇ ಏಕೈಕ ಅಭ್ಯಥಿರ್ಯನ್ನು ಕಣಕ್ಕಿಸಲು ಬಾಗಲಕೋಟೆ ಜಿಲ್ಲೆಯ ಮೂಲದ ಪ್ರಹ್ಲಾದ ಪೂಜಾರ ಅವರ ಹೆಸರನ್ನು ಪ್ರಕಟಿಸಿದೆ. ಇದರಿಂದಾಗಿ ಕಾಂಗ್ರೆಸ್ ಪಕ್ಷ ವಿಜಯಪುರ ಜಿಲ್ಲೆಗೆ ಆದ್ಯತೆ ನೀಡಿ ಮೊದಲ ಬಾರಿಗೆ ವಿಜಯಪುರ ಜಿಲ್ಲೆಯನ್ನು ಪರಿಗಣಿಸಿದ್ದು, ರಾಜಕೀಯ ರಕ್ಷಣಾತ್ಮಕ ಸ್ಪರ್ಧೆಯ ಚಾಣಾಕ್ಷತೆ ಮೆರೆದಿದೆ.

ಉಪ ಚುನಾವಣೆಯಲ್ಲಿ ಗೆದ್ದಿದ್ದ ಸುನಿಲಗೌಡ : 2016 ರಲ್ಲಿ ಬಿಜೆಪಿ ಟಿಕೇಟ್ ನೀಡದ ಕಾರಣ ವಿಜಯಪುರ ಜಿಲ್ಲೆಯಿಂದ ಬಸನಗೌಡ ಪಾಟೀಲ ಯತ್ನಾಳ ಪಕ್ಷೇತರರಾಗಿ ಕಣಕ್ಕಿಳಿದು ಗೆದ್ದಿದ್ದರು. 2108 ರಲ್ಲಿ ಯತ್ನಾಳ ಬಿಜೆಪಿ ಸೇರ್ಪಡೆಯಾಗಿ ಮೇಲ್ಮನೆ ಸ್ಥಾನಕ್ಕೆ ರಾಜೀಮಾನೆ ನೀಡಿದ್ದರು. ಯತ್ನಾಳ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನವಣೆಯಲ್ಲಿ ಕಾಂಗ್ರೆಸ್ ಸುನಿಲಗೌಡ ಪಾಟೀಲ ಅವರಿಗೆ ಅವಕಾಶ ನೀಡಿತ್ತು. ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಸದಸ್ಯರಾಗಿದ್ದರೂ ಬಿಜೆಪಿ ಅಭ್ಯರ್ಥಿಯಾಗಿದ್ದ ಗೂಳಪ್ಪ ಶಟಗಾರ ಅವರನ್ನು ಸುನಿಲಗೌಡ ಸೋಲಿಸಿದ್ದರು.

ಮೊದಲ ಬಾರಿಗೆ ಜಿಲ್ಲೆಗೆ ಆದ್ಯತೆ 

ಮೇಲ್ಮನೆ ಚುನಾವಣೆ ವಿಷಯದಲ್ಲಿ ಕಾಂಗ್ರೆಸ್ ಈ ವರೆಗೆ ಪೂರ್ಣ ಅಧಿಕಾರದ ವಿಷಯದಲ್ಲಿ ಟಿಕೇಟ್ ನೀಟಿಕೆ ವಿಷಯ ಬಂದಾಗಲೆಲ್ಲ ವಿಜಯಪುರ ಜಿಲ್ಲೆಯನ್ನು ಸಂರ್ಪೂಣ ಕಡೆಗಣಿಸುತ್ತಲೇ ಬಂದಿದೆ. ಬಾಗಲಕೋಟೆ ಜಿಲ್ಲೆಯ ಹಾಲಿ ಸದಸ್ಯ ಎಸ್.ಆರ್.ಪಾಟೀಲ ಅವರಿಗೆ ಸತತ 4 ಬಾರಿ ಟಿಕೇಟ್ ನೀಡಿದೆ. ಒಂದು ಚುನಾವಣೆಯಲ್ಲಿ ಎರಡೂ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಹಾಕಿದ್ದ ಸಂದರ್ಭದಲ್ಲೂ ಬಾಗಲಕೋಟೆ ಜಿಲ್ಲೆಯ ಸಿದ್ದು ನ್ಯಾಮಗೌಡ ಅವರಿಗೆ ಟಿಕೇಟ್ ನೀಡುವ ಮೂಲಕ ವಿಜಯಪುರ ಜಿಲ್ಲೆಯನ್ನು ಕಡೆಗಣಿಸಿತ್ತು.

ಆದರೆ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ವಿಜಯಪುರ ಜಿಲ್ಲೆಯ ಹಾಲಿ ಸದಸ್ಯ ಸುನಿಲಗೌಡ ಅವರಿಗೆ ಟಿಕೇಟ್ ನೀಡಿದೆ. ಅದರಲ್ಲೂ ರಾಜಕೀಯವಾಗಿ ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ಸತತ 4 ಬಾರಿ ಗೆದ್ದು 24 ವರ್ಷ ಸದನದಲ್ಲಿದ್ದ ಮೇಲ್ಮನೆ ಹಾಲಿ ವಿಪಕ್ಷ ನಾಯಕರಾಗಿರುವ ಹಿರಿಯ ಸದಸ್ಯ ಎಸ್.ಆರ್.ಪಾಟೀಲ ಅವರನ್ನು ಮೀರಿ ಯುವ ಸದಸ್ಯ ಸುನಿಲಗೌಡ ಪಾಟೀಲ ಅವರಿಗೆ ಮಾತ್ರ ಟಿಕೇಟ್ ನೀಡಿದೆ. ಇದರೊಂದಿಗೆ ಒಂದೇ ಸ್ಥಾನಕ್ಕೆ ಸ್ಪರ್ಧಿಸುವ ತಂತ್ರವನ್ನು ಮುಂದುವರೆಸಿದೆ.

ಬಿಜೆಪಿ ಬಾಲಕೋಟೆಗೆ ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ 

ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿಯನ್ನು ಹೊಂದಿರುವ ವಿಜಯಪುರ ಕ್ಷೇತ್ರ ಎರಡು ಸ್ಥಾನಗಳಿವೆ. ಹಲವು ಚುನಾವಣೆಗಳಲ್ಲಿ ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷಗಳು ಒಬ್ಬೊಬ್ಬ ಅಭ್ಯರ್ಥಿಯನ್ನೇ ಕಣಕ್ಕಿಳಿಸಿ ರಾಜಕೀಯ ರಕ್ಷಣಾತ್ಮಕ ಸ್ಪರ್ಧೆಗೆ ಮುಂದಾಗಿದ್ದವು. ಒಬ್ಬರನ್ನೇ ಕಣಕ್ಕಿಳಿಸಿದಾಗಲೂ ಎರಡೂ ಪಕ್ಷಗಳು ಬಾಗಲಕೋಟೆ ಜಿಲ್ಲೆಗೇ ಆದ್ಯತೆ ನೀಡುತ್ತಿದ್ದವು.

ಬಿಜೆಪಿ ಈ ಬಾರಿಯೂ ಬಾಗಲಕೋಟೆ ಜಿಲ್ಲೆಯ ಪ್ರಹ್ಲಾದ ಪೂಜಾರಿ ಒಬ್ಬರನ್ನೇ ಕಣಕ್ಕಿಳಿಸಿದ್ದು, ಕಾಂಗ್ರೆಸ್ ಕೂಡ ಒಬ್ಬರನ್ನೇ ಕಣಕ್ಕಳಿಸಿದ್ದರೂ ಸುನಿಲಗೌಡ ಮೂಲಕ ಇದೇ ಮೊದಲ ಬಾರಿಗೆ ವಿಜಯಪುರ ಜಿಲ್ಲೆಗೆ ಆದ್ಯತೆ ನೀಡಿದೆ.

ಪಕ್ಷೇತರ ಸ್ಪರ್ಧೆಯ ಭೀತಿ

ಮೇಲ್ಮನೆ ಚುನಾವಣೆ ಬಂದಾಗಲೆಲ್ಲ ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷಗಳು ವಿಜಯಪುರ ಜಿಲ್ಲೆಯನ್ನು ಕಡೆಗಣಿಸಿದ್ದಕ್ಕೆ ಕಳೆದ ಚುನಾವಣೆಯಲ್ಲಿ ಪಕ್ಷೇತರನನ್ನು ಕಣಕ್ಕಿಳಿಸಿ ಗೆಲ್ಲಿಸಲಾಗಿತ್ತು.

ಆ ಮೂಲಕ ಜಿಲ್ಲೆಯ ಆಸ್ಮಿತೆ ಪ್ರದರ್ಶನದ ಜೊತೆಗೆ ರಾಜಕೀಯ ಶಕ್ತಿಯನ್ನೂ ತೋರಿದ್ದವು.

ಹೀಗಾಗಿ ಬಿಜೆಪಿ ಬಾಗಲಕೋಟೆ ಜಿಲ್ಲೆಗೆ ಆದ್ಯತೆ ನೀಡಿರುವ ಕಾರಣ ಕಾಂಗ್ರೆಸ್ ವಿಜಯಪುರ ಜಿಲ್ಲೆಗೆ ಮೊದಲ ಬಾರಿಗೆ ಪೂರ್ಣಾವಧಿ ಸ್ಪರ್ಧೆಯ ಅವಕಾಶ ಕಲ್ಲಿಸಿ ರಾಜಕೀಯ ತಂತ್ರಗಾರಿಕೆ ಪ್ರದರ್ಶಿಸಿದೆ. ಒಂದೊಮ್ಮೆ ಮತ್ತೆ ಬಾಗಲಕೋಟೆ ಜಿಲ್ಲೆಯ ಎಸ್.ಆರ್.ಪಾಟೀಲ ಅವರಿಗೇ ಟಿಕೇಟ್ ನೀಡಿದರೆ ವಿಜಯಪುರ ಜಿಲ್ಲೆಯಿಂದ ಮತ್ತೆ ಪ್ರಬಲ ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಸೋಲುವುದು ಖಚಿತ ಎಂಬ ಭೀತಿಯೂ ಕಾಡಿದೆ.

ಕಾಂಗ್ರೆಸ್ ಎರಡೂ ಸ್ಥಾನಗಳಿಗೆ ಸ್ಪರ್ಧಿಸುವ ಚಿಂತನೆ ಇದೆ ಎನ್ನಲಾಗಿತ್ತು. ಆದರೆ ಸದರಿ ಚುನಾವಣೆ ಮತಪತ್ರ ಹಾಗೂ ಆದ್ಯತೆ ಮತ ಚಲಾವಣೆ ವ್ಯಸವ್ಥೆ ಇದೆ. ಇದು ತಾಂತ್ರಿಕ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಲ್ಲದೇ ಬಿಜೆಪಿ ಬಾಗಲಕೋಟೆ ಜಿಲ್ಲೆಯಿಂದ ಒಬ್ಬರನ್ನೇ ಕಣಕ್ಕಿಳಿಸಿದ್ದು, ವಿಜಯಪುರ ಜಿಲ್ಲೆಯಲ್ಲಿ ಹೆಚ್ಚು ಮತಗಳಿದ್ದು, ಸುನಿಲಗೌಡ ಅವರಿಗೆ ಹೆಚ್ಚಿನ ಬೆಂಬಲ ದೊರೆಯುವ ಸಾಧ್ಯತದೆ ಇದೆ. ಇದರಿಂದ ಕಾಂಗ್ರೆಸ್‍ನ ಹಿರಿಯ ಸದಸ್ಯ ಎಸ್.ಆರ್.ಪಾಟೀಲ ಅವರಿಗೆ ಸೋಲಾಗುವ ಭೀತಿ ಕಾಡಿದೆ. ಈ ಕಾರಣಕ್ಕೆ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಯೋಜನೆಯನ್ನು ಕಾಂಗ್ರೆಸ್ ಕೈಬಿಟ್ಟಿದೆ ಎನ್ನಲಾಗಿದೆ.

ಕೈ ಹಿಡಿದ ರಚನಾತ್ಮಕ ಕೆಲಸ 

ಸುನಿಲಗೌಡ ಪಾಟೀಲ ಅವರು ಮೇಲ್ಮನೆ ಸದಸ್ಯರಾಗುತ್ತಲೇ ಎರಡೂವರೆ ವರ್ಷಗಳ ಕಡಿಮೆ ಅವಧಿಯಲ್ಲೇ ಸದ್ದಿಲ್ಲದ ಜನಸೇವೆಗೆ ಮುಂದಾದರು. 2020 ರಲ್ಲಿ ಕೋವಿಡ್ ಮೊದಲ ಅಲೆಯ ಸಂಕಷ್ಟ ಎದುರಾದಾಗ ಜಿಲ್ಲೆಯಲ್ಲಿ ಜನರ ನೋವಿಗೆ ಸ್ಪಂದಿಸಿದ್ದರು. ಮೊದಲ ಲಾಕ್‍ಡೌನ್ ಸಂದರ್ಭದಲ್ಲಿ ಗೋವಾ ರಾಜ್ಯದಲ್ಲಿ ಗುಳೆ ಹೋಗಿ ಸಂಕಷ್ಟಕ್ಕೆ ಸಿಲುಕಿದ ಜಿಲ್ಲೆಯ ಕನ್ನಡಿಗರಿಗೆ ಆಹಾರ ಧಾನ್ಯದ ಕಿಟ್, ಇತರೆ ನೆರವು ನೀಡಿದ್ದರು. ಜನತೆಯ ಆರೋಗ್ಯ ರಕ್ಷಣೆಗೆ ಟೊಂಕ ಕಟ್ಟಿದ್ದ ಸುನಿಲಗೌಡ ಅವರು, ಎರಡೂ ಜಿಲ್ಲೆಗಳ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಸ್ಯಾನಿಟೈಸರ್ ಸಿಂಪರಣೆಗೆ ಸ್ಪೇಯರ್ ಯಂತ್ರಗಳನ್ನು ನೀಡಿದ್ದರು.

ಜಿ.ಎಸ್.ಕಮತರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.