ವಿಜಯಪುರ ಮೇಲ್ಮನೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸುನಿಲಗೌಡ ನಾಮಪತ್ರ ಸಲ್ಲಿಕೆ
Team Udayavani, Nov 23, 2021, 1:16 PM IST
ವಿಜಯಪುರ: ಕಾಂಗ್ರೆಸ್ ಘೋಷಿತ ಅಧಿಕೃತ ಅಭ್ಯರ್ಥಿ ಸುನಿಲಗೌಡ ಪಾಟೀಲ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಮಂಗಳವಾರ ವಿಜಯಪುರ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಮುನ್ನ ವಿಜಯಪುರ ನಗರ ದೇವತಾ ಸಿದ್ಧೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ನಂತರ ಬೆಂಬಲಿಗರೊಂದಿಗೆ ವಾಹನಗಳಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.ಮಂಗಳವಾರ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿ ಚುನಾವಣಾ ಅಧಿಕಾರಿಗಳ ಕಛೇರಿಗೆ ಆಗಮಿಸಿದ ಸುನಿಲಗೌಡ ಪಾಟೀಲ ಚುನಾವಣಾ ಅಧಿಕಾರಿ ಸುನಿಲಕುಮಾರ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ ನಾಮಪತ್ರ ಸಲ್ಲಿಕೆ
ಜಮಖಂಡಿ ಶಾಸಕ ಆನಂದ ನ್ಯಾಮಗೌಡ, ವಿಜಯಪುರ ಜಿ.ಪಂ. ಮಾಜಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ರಾಜು ಆಲಗೂರ ಇವರು ನಾಮಪತ್ರ ಸಲ್ಲಿಸಿದ ಸುನಿಲಗೌಡ ಅವರಿಗೆ ಸಾಥ್ ನೀಡಿದರು.
ಟಿಕೆಟ್ ವಂಚಿತ ಎಸ್.ಅರ್. ಪಾಟೀಲ ಗೈರು : ಐದನೇ ಬಾರಿ ಟಕೇಟ್ ಆಕಾಂಕ್ಷಿಯಾಗಿದ್ದು, ಅವಕಾಶ ವಂಚಿತರಾಗಿರುವ ಮೇಲ್ಮನೆ ವಿಪಕ್ಷ ನಾಯಕ ಎಸ್.ಆರ್.ಪಾಟೀಲ ಅವರ ಗೈರು ಎದ್ದು ಕಾಣುತ್ತಿತ್ತು.
ವಿಜಯಪುರ ದ್ವಿಸದಸ್ಯತ್ವದ ಕ್ಷೇತ್ರವಾಗಿದ್ದರೂ ಕಾಂಗ್ರೆಸ್ ಈ ಬಾರಿಯೂ ಓರ್ವ ಅಭ್ಯರ್ಥಿಯನ್ನೇ ಕಣಕ್ಕಿಸಿದ್ದು, ಸುನಿಲಗೌಡ ಅವರಿಗೆ ಅವಕಾಶ ನೀಡಿದೆ. ಪಕ್ಷೇತರ ಎಂಎಲ್ಸಿ ಯತ್ನಾಳ ಅವರ ರಾಜಿನಾಮೆಯಿಂದ ಎದುರಾದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸುನಿಲಗೌಡ ಅವರನ್ನು ಸ್ಪರ್ಧೆಗೆ ಇಳಿಸಿ, ಗೆಲ್ಲಿಸಿತ್ತು.
ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ನಾಮಪತ್ರ ಸಲ್ಲಿಕೆ
ಇನ್ನೊಂದು ಸ್ಥಾನದಲ್ಲಿ ಸತತ ನಾಲ್ಕು ಬಾರಿ ಸ್ಪರ್ಧಿಸಿ ಗೆದ್ದಿದ್ದ ಎಸ್.ಆರ್.ಪಾಟೀಲ, ಹಾಲಿ ಮೇಲ್ಮನೆಯ ವಿಪಕ್ಷ ನಾಯಕರು. ಆದರೆ ಕಾಂಗ್ರೆಸ್ ಎರಡು ಸ್ಥಾನಗಳಲ್ಲಿ ಒಂದಕ್ಕೆ ಮಾತ್ರ ಸ್ಪರ್ಧಿಸಲು ನಿರ್ಧರಿಸಿ, ಯುವಕ ವಿಜಯಪುರ ಜಿಲ್ಲೆಯ ಸುನಿಲಗೌಡ ಅವರಿಗೆ ಟಿಕೆಟ್ ನೀಡಿ, ಸ್ಪರ್ಧೆಗಿಳಿಸಿದೆ. ಇದರಿಂದ ಹಿರಿಯ ಸದಸ್ಯ ಬಾಗಲಕೋಟೆ ಜಿಲ್ಲೆಯ ಎಸ್.ಆರ್.ಪಾಟೀಲ ಅವರಿಗೆ ಕಾಂಗ್ರೆಸ್ ಕೋಕ್ ನೀಡಿದೆ.
ಹೀಗಾಗಿಯೇ ಅತೃಪ್ತ ಎಸ್.ಆರ್.ಪಾಟೀಲ ಅವರು ಸುನಿಲಗೌಡ ಅವರು ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಗೈರಾಗಿದ್ದು, ಚರ್ಚೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.