ನೂತನ ಕಸಾಪ ಅಧ್ಯಕ್ಷರಿಗೆ ಸಚಿವ ಚವ್ಹಾಣ ಸನ್ಮಾನ
Team Udayavani, Nov 23, 2021, 5:44 PM IST
ಔರಾದ: ಎರಡನೇ ಬಾರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಚುನಾಯಿತರಾದ ಸುರೇಶ ಚನ್ನಶೆಟ್ಟಿ ಅವರನ್ನು ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಸೋಮವಾರ ಬೋಂತಿ ತಾಂಡಾದ ನಿವಾಸದಲ್ಲಿ ಸನ್ಮಾನ ಮಾಡಿ ಅಭಿನಂದಿಸಿದರು.
ಬಳಿಕ ಮಾತನಾಡಿದ ಅವರು, ಗಡಿ ಭಾಗವಾದ ಬೀದರ ಜಿಲ್ಲೆಯಲ್ಲಿ ಕನ್ನಡಪರ ಕೆಲಸಗಳಿಗೆ ಇನ್ನಷ್ಟು ವೇಗ ಸಿಗಲಿ. ಕನ್ನಡದ ಕಂಪನ್ನು ಪ್ರತಿ ಮನೆ-ಮನಗಳಿಗೆ ತಲುಪಿಸಲು ಗುರುತರ ಕೆಲಸ ಕಾರ್ಯಗಳಾಗಲಿ. ಬೀದರ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಭವನದ ಕೆಲಸ ಶೀಘ್ರ ಪೂರ್ಣಗೊಳ್ಳಲಿ. ಕನ್ನಡಪರವಾದ ಎಲ್ಲ ಕೆಲಸಗಳಿಗೆ ನಿಮ್ಮೊಂದಿಗೆ ಇರುವುದಾಗಿ ಸಚಿವರು ಭರವಸೆ ನೀಡಿದರು.
ನೂತನ ಕಸಾಪ ಜಿಲ್ಲಾಧ್ಯಕ್ಷ ಸೂರೇಶ ಚೆನ್ನಶೆಟ್ಟಿ ಮಾತನಾಡಿ, ಬೀದರ ಜಿಲ್ಲೆಯಲ್ಲಿನ ಕಸಾಪ ಅಜೀವ ಸದಸ್ಯರು ಹಾಗೂ ಕನ್ನಡದ ಸೇವಕರು ನಮಗೆ ಎರಡನೆಯ ಅವಧಿಗೆ ಸೇವೆ ಮಾಡಲು ಆಶೀರ್ವಾದ ಮಾಡಿರುವುದು ನಮ್ಮ ಪುಣ್ಯ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾದ ಬಂಡೆಪ್ಪಾ ಕಂಟೆ, ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷರಾದ ಶರಣಪ್ಪಾ ಮಿಠಾರೆ, ಹಿರಿಯ ಸಾಹಿತಿಗಳಾದ ಶಿವಕುಮಾರ ಕಟ್ಟೆ, ಡಾ| ಬಸವರಾಜ ಬಲ್ಲುರ, ರಮೇಶ ಬಿರಾದಾರ, ಶಿವಶಂಕರ ಟೋಕ್ರೆ, ಶಾಲಿವಾನ ಉದಗೀರೆ, ಗುರುನಾಥ ರಾಜಗೀರಾ, ಟಿ.ಎಂ ಮಚ್ಚೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.