ಜೆಡಿಎಸ್‌-ಬಿಜೆಪಿ ಒಳಒಪ್ಪಂದ ?


Team Udayavani, Nov 25, 2021, 2:19 PM IST

mandya statement

ಭಾರತೀನಗರ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್‌ ಒಳಒಪ್ಪಂದ ಮಾಡಿಕೊಂಡು ಅಧಿಕಾರ ಅನುಭವಿಸುತ್ತಿದೆ.ಆದರೆ ಕಾಂಗ್ರೆಸ್‌ ಸರ್ಕಾರ ವಿರೋಧ ಪಕ್ಷದಲ್ಲಿ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ಇಲ್ಲಿಗೆ ಸಮೀಪದ ಹನುಮಂತನಗರದ ಶ್ರೀ ಆತ್ಮಲಿಂಗೇಶ್ವರ ದೇವಾಲಯದ ಹೊರಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ವಿಧಾನ ಪರಿಷತ್‌ ಚುನಾವಣೆ ಜವಾಬ್ದಾರಿಯನ್ನು ಮದ್ದೂರು ಕ್ಷೇತ್ರದಲ್ಲಿ ಮಧು ಜಿ.ಮಾದೇಗೌಡ, ಬಿ.ರಾಮಕೃಷ್ಣ, ಗುರುಚರಣ್‌ ಅವರಿಗೆ ನೀಡಲಾಗಿದೆ. ಈ ಮೂವರು ಒಗ್ಗಟ್ಟಿನಿಂದ ಚುನಾವಣೆ ಮಾಡಲಿದ್ದಾರೆ ಎಂದರು. ಬಿಜೆಪಿ, ಜೆಡಿಎಸ್‌ ಪಕ್ಷಗಳಿಗೆ ಅಧಿಕಾರ ಸಿಕ್ಕರೂ ಜನಪರ ಕೆಲಸ ಮಾಡಲಿಲ್ಲ.

ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟಾಗ ಮಾಜಿ ಸಿಎಂ ಸಿದ್ದರಾಮಯ್ಯನವರು ಜನಪರ ಕೆಲಸಗಳನ್ನು ಮಾಡಿದ್ದಾರೆ. ಇದನ್ನು ಗಂಭೀರವಾಗಿ ಮತದಾರು ಪರಿಗಣಿಸಬೇಕು ಎಂದರು. ಜಿಲ್ಲೆಯಲ್ಲಿ ಕಳೆದ ಬಾರಿ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಸೋಲನುಭವಿಸಿದೆ. ನನ್ನ ನಾಯಕತ್ವದಲ್ಲಿ ಜಿಲ್ಲೆಗೆ ಹೊಸ ವ್ಯವಸ್ಥೆಯನ್ನು ತರಬೇಕೆಂದು ಬಂದಿದ್ದೇನೆ. ನಿರಾಸೆ ಉಂಟು ಮಾಡಬೇಡಿ. ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದಿನೇಶ್‌ ಗೂಳಿಗೌಡ ಅವರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌ಗೆ ಬಲ ತುಂಬಬೇಕೆಂದು ಹೇಳಿದರು.

ಇದನ್ನೂ ಓದಿ:- ಕಳ್ಳತನ: ವಸ್ತು ವಾರಸುದಾರರಿಗೆ ಹಸ್ತಾಂತರ

ವಿಧಾನ ಪರಿಷತ್‌ ಮಾಜಿ ಸದಸ್ಯ ಮಧು ಜಿ.ಮಾದೇಗೌಡ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಂಗ್ರೆಸ್‌ ಪಕ್ಷದಿಂದ ಒಮ್ಮತವಾಗಿ ದಿನೇಶ್‌ ಗೂಳಿಗೌಡ ಅವರನ್ನು ಕಳಕ್ಕಿಳಿಸಲಾಗಿದೆ. ನಮ್ಮ ಜಿಲ್ಲೆಯ ನಾಯಕತ್ವ ಹೊಂದಿರುವ ಎನ್‌. ಚಲುವರಾಯಸ್ವಾಮಿ ಅವರ ಮಾರ್ಗದರ್ಶನದಲ್ಲಿ ನಾವು ಚುನಾವಣೆ ಎದುರಿಸಲು ಸಿದ್ಧರಾಗಿರಬೇಕು. ಇವರ ಗೆಲುವು ನಮ್ಮ ಗೆಲುವಾಗಿದೆ ಎಂದರು.

ಇದೇ ವೇಳೆ ಮಾಜಿ ಸಚಿವರಾದ ಆತ್ಮಾನಂದ, ನರೇಂದ್ರಸ್ವಾಮಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ರಾಮಕೃಷ್ಣ, ಮಲ್ಲಾಜಮ್ಮ, ಜಿಪಂ ಮಾಜಿ ಅಧ್ಯಕ್ಷ ಎಸ್‌.ಗುರುಚರಣ್‌, ಅಭ್ಯರ್ಥಿ ದಿನೇಶ್‌ಗೂಳಿಗೌಡ, ಚಂದೂಪುರ ಪಾಪಣ್ಣ, ಬಿ.ಎಂ.ನಂಜೇಗೌಡ, ಎ.ಎಸ್‌.ರಾಜೀವ್‌, ಕದಲೂರು ರಾಮಕೃಷ್ಣ, ಅಜ್ಜಹಳ್ಳಿ ರಾಮಕೃಷ್ಣ, ಮುಟ್ಟನಹಳ್ಳಿ ಶಿವಲಿಂಗೇಗೌಡ, ಸಿ.ಎಂ.ದ್ಯಾವಪ್ಪ, ಮೆಳ್ಳಹಳ್ಳಿ ವಿನಯ್‌, ಅಣ್ಣೂರು ಸಿದ್ದಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 ಸುಮಲತಾ ಕೈಗೆ ಬೆಂಬಲ

ಭಾರತೀನಗರ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿರುವ ದಿನೇಶ್‌ ಗೂಳಿಗೌಡ ಅವರಿಗೆ ಸಂಸದೆ ಸುಮಲತಾ ಅಂಬರೀಶ್‌ ಬೆಂಬಲ ನೀಡಲ್ಲಿದ್ದಾರೆಂದು ಮಾಜಿ ಸಚಿವ ಎನ್‌.ಚಲುವರಾಯ ಸ್ವಾಮಿ ಹೇಳಿದರು. ಭಾರತೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸಂಪೂರ್ಣ ಸಹಕಾರ ನೀಡಿದ್ದರಿಂದ ಸುಮಲತಾ ಅವರು ಆಯ್ಕೆಗೊಂಡಿದ್ದಾರೆ.

ಹಾಗಾಗಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಬಹುದು ಎಂದರು. ಪಕ್ಷಾತೀತವಾಗಿ ಸುಮಲತಾ ಅವರನ್ನು ಆಯ್ಕೆಗೊಳಿಸಿದ ಹಿನ್ನೆಲೆಯಲ್ಲಿ ರೈತ ಸಂಘದ ಜತೆಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಆದರೆ ಕಾಂಗ್ರೆಸ್‌ ಬಗ್ಗೆ ಹೆಚ್ಚು ಒಲವು ಇದೆ. ಹಾಗಾಗಿ ದಿನೇಶ್‌ ಗೂಳಿಗೌಡ ಅವರನ್ನು ಬೆಂಬಲಿಸಬಹುದು ಎಂದರು.

 ಯಾವ ಪಕ್ಷಕ್ಕೂ ಬೆಂಬಲ ಇಲ್ಲ

ಭಾರತೀನಗರ: ಸ್ಥಳೀಯ ವಿಧಾನ ಪರಿಷತ್‌ ಚುನಾವಣೆಯಲ್ಲಿ ನನ್ನ ಬೆಂಬಲ ಯಾವ ಪಕ್ಷಕ್ಕೂ ಇಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದರು. ದೊಡ್ಡರಸಿನಕೆರೆಯಲ್ಲಿ ಮಾತನಾಡಿದ ಅವರು, ವೋಟು ಹಾಕಿದ ಜನತೆಗೆ ನಾನು ಬೆಂಬಲವಾಗಿರುತ್ತೇನೆ. ಯಾವುದೇ ಪಕ್ಷದ ಪರವಾಗಿ ಈ ಸಂದರ್ಭದಲ್ಲಿ ಹೋಗುವುದಿಲ್ಲ. ಎಲ್ಲಾ ಪಕ್ಷದವರು ನನಗೆ ಚುನಾವಣೆಯಲ್ಲಿ ಬೆಂಬಲ ನೀಡಿದ್ದಾರೆ.

ಕಾಂಗ್ರೆಸ್‌, ಬಿಜೆಪಿ, ರೈತ ಸಂಘದ ಕಾರ್ಯಕರ್ತರೆಲ್ಲರೂ ನನ್ನೊಂದಿಗೆ ಸುತ್ತಾಡಿ ಗೆಲ್ಲಿಸಿದ್ದಾರೆ. ಹಾಗಾಗಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ನಾನು ಯಾರನ್ನೂ, ಯಾವ ಪಕ್ಷವನ್ನು ಬೆಂಬಲಿಸುವುದು ಸೂಕ್ತವಲ್ಲ, ನಾನು ತಟಸ್ಥಳಾಗಿರುತ್ತೇನೆ ಎಂದರು. ಗ್ರಾಪಂ ಸದಸ್ಯರು ಬೆಂಬಲ ನೀಡುವುದರಿಂದ ನನ್ನ ಬೆಂಬಲ ಅವಶ್ಯಕತೆ ಇಲ್ಲ. ಜಿಲ್ಲೆಯಲ್ಲಿ ಯಾರು ಒಳ್ಳೆಯ ಕೆಲಸ ಮಾಡುತ್ತಾರೋ ಅಂತಹವರಿಗೆ ನನ್ನ ಬೆಂಬಲ ಸದಾ ಇರುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.