ವಿವಿಧ ಗ್ರಾಮಗಳಲ್ಲಿನ ಬೆಳೆ ಹಾನಿ ಪರಿಶೀಲಿಸಿದ ಅಧಿಕಾರಿಗಳು
Team Udayavani, Nov 25, 2021, 2:58 PM IST
ಬಸವನಬಾಗೇವಾಡಿ: ತಾಲೂಕಿನ ಮುತ್ತಗಿ, ಬಸವನಬಾಗೇವಾಡಿ, ಹೂವಿನಹಿಪ್ಪರಗಿ, ಮನಗೂಳಿ, ಟಕ್ಕಳಕಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಬುಧವಾರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು, ಕೃಷಿ ವಿಜ್ಞಾನಿಗಳು ಭೇಟಿ ನೀಡಿ ಬೆಳೆಹಾನಿ ಸಮೀಕ್ಷೆ ಮಾಡಿದರು.
ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್. ಯರಝರಿ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಕಾಲಿಕ ಮಳೆಯಿಂದ ಅತಿ ಹೆಚ್ಚು ತೊಗರಿ, ಗೋವಿನ ಜೋಳ ಹಾಳಾಗಿದೆ. ಇನ್ನೂ ಈ ಅಕಾಲಿಕ ಮಳೆಯಿಂದ ಗೋಧಿ, ಕಡಲೆ, ಬಿಳಿ ಜೋಳದ ಬೆಳೆಗೆ ಅಕಾಲಿಕ ಮಳೆ ಅನುಕೂಲವಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಹಾನಿಯ ಬಗ್ಗೆ ನಿಕರತೆಯನ್ನು ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವದಾಗಿ ರೈತರಿಗೆ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ| ರಾಶೇಖರ ಮಿಲಿಯಮ್ಸ, ಡಾ| ಅಶೋಕ ಸಜ್ಜನ, ಕೃಷಿ ವಿಜ್ಞಾನಿ ಡಾ| ಎಂ.ಎಸ್. ವಸ್ತ್ರದ, ತಾಲೂಕು ಕೃಷಿ ಅಧಿಕಾರಿ ಸಿ.ಎಂ. ಹಿರೇಮಠ, ಜಿಪಂ ಮಾಜಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ದ್ಯಾಮನಗೌಡ ಪಾಟೀಲ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.